ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗರಿಷ್ಠ ಪ್ರಮಾಣದ ಕಾರು ಮಾರಾಟವನ್ನು ತನ್ನದಾಗಿಸಿಕೊಂಡಿದೆ. ಹ್ಯುಂಡೈ ಕ್ರೆಟಾ ಮತ್ತು ಎಂಜಿ ಹೆಕ್ಟರ್ ಕಾರಿಗೆ ತೀವ್ರ ಪೈಪೋಟಿ ನೀಡುವ ಮೂಲಕ 12,800 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿರುವ ಕಿಯಾ ಸಂಸ್ಥೆಯು ಸೆಲ್ಟೊಸ್ ಕಾರಿನ ಉತ್ಪಾದನೆಯನ್ನು ಹೆಚ್ಚಿಸಿದ್ದು, ಬುಕ್ಕಿಂಗ್ ಮಾಡಿದ ಒಂದೇ ವಾರದಲ್ಲಿ ಹೊಸ ಕಾರನ್ನು ವಿತರಣೆ ಮಾಡುವ ಭರವಸೆ ನೀಡುತ್ತಿದೆ. ಇದು ಇತರೆ ಕಾರು ಮಾರಾಟ ಸಂಸ್ಥೆಗಳು ನೀಡುವ 3 ರಿಂದ 4 ವಾರಗಳ ಕಾಯುವಿಕೆ ಅವಧಿಗೆ ಹೋಲಿಕೆ ಮಾಡಿದ್ದಲ್ಲಿ ಗ್ರಾಹಕರು ಹೆಚ್ಚಿನ ಮಟ್ಟದಲ್ಲಿ ಕಿಯಾ ಸೆಲ್ಟೊಸ್ ಖರೀದಿಯತ್ತ ಮುಖ ಮಾಡುತ್ತಿರುವುದು ಪ್ರಮುಖ ಆಕರ್ಷಣೆಯಾಗಲಿದೆ.

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ. ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

MOST READ: ಕೆಲವೇ ವರ್ಷಗಳ ಹಿಂದೆ ಟ್ಯಾಕ್ಸಿ ಡ್ರೈವರ್ ಆಗಿದ್ದ ಇವರು ಇದೀಗ ರೋಲ್ಸ್ ರಾಯ್ಸ್ ಕಾರಿಗೆ ಮಾಲೀಕ..!

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಕಿಯಾ ಸೆಲ್ಟೊಸ್

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

More from DriveSpark

Article Published On: Sunday, November 3, 2019, 9:00 [IST]
English summary
Kia Seltos Registers 12,800 Units Of Sales In October 2019. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+