ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಕಿಯಾ ಮೋಟಾರ್ಸ್ ಸಂಸ್ಥೆಯು ಸದ್ಯ ಸೆಲ್ಟೊಸ್ ಕಂಪ್ಯಾಕ್ಟ್ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಸೆಲ್ಟೊಸ್ ಯಶಸ್ವಿ ನಂತರ ಮತ್ತೈದು ಹೊಸ ಬ್ರಾಂಡ್ ಕಾರುಗಳನ್ನು ಬಿಡುಗಡೆಗೊಳಿಸಲು ಸಿದ್ದವಾಗುತ್ತಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಕಿಯಾ ಮೋಟಾರ್ಸ್ ಸಂಸ್ಥೆಯು ಭಾರೀ ನೀರಿಕ್ಷೆಯೊಂದಿಗೆ ಭಾರತೀಯ ಆಟೋ ಉದ್ಯಮಕ್ಕೆ ಕಾಲಿಟ್ಟಿದ್ದು, ದೇಶದ ಟಾಪ್ 3 ಕಾರು ಉತ್ಪಾದನಾ ಸಂಸ್ಥೆಗಳಿಗೆ ತೀವ್ರ ಪೈಪೋಟಿ ನೀಡುವ ತವಕದಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ನಮೂನೆಯ ಕೈಗೆಟುಕುವ ಬೆಲೆಯ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದ್ದು, ಸೆಲ್ಟೊಸ್ ಬಿಡುಗಡೆಯ ನಂತರ ಕಾರ್ನಿವಾಲ್ ಸೇರಿದಂತೆ ವಿವಿಧ ನಮೂನೆಯ ಐದು ಹೊಸ ಕಾರುಗಳನ್ನು ರಸ್ತೆಗಿಳಿಸಲು ಸಿದ್ದತೆ ನಡೆಸುತ್ತಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಸಹೋದರ ಸಂಸ್ಥೆ ಹ್ಯುಂಡೈಗಿಂತಲೂ ಅತ್ಯುತ್ತಮ ಕಾರು ಉತ್ಪನ್ನಗಳನ್ನು ಹೊಂದಿರುವ ಕಿಯಾ ಸಂಸ್ಥೆಯು ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗ್ಗದ ಬೆಲೆಯಲ್ಲಿ ಉತ್ತಮ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಮಾಹಿತಿಗಳ ಪ್ರಕಾರ, ಮುಂಬರುವ ಫೆಬ್ರುವರಿ ವೇಳೆಗೆ ಕಾರ್ನಿವಾಲ್ 7 ಸೀಟರ್ ಎಂಪಿವಿ ಬಿಡುಗಡೆ ಮಾಡಲಿರುವ ಕಿಯಾ ಸಂಸ್ಥೆಯು ತದನಂತರ ಕ್ಯೂವೈಎ ಹೆಸರಿನ ಕಂಪ್ಯಾಕ್ಟ್ ಎಸ್‌ಯುವಿ, ಸೊರೆಂಟೊ ಸೆಡಾನ್ ಮತ್ತು ಸೊಲ್ ಎಲೆಕ್ಟ್ರಿಕ್, ನಿರೊ ಎಲೆಕ್ಟ್ರಿಕ್ ಮತ್ತು ಐಷಾರಾಮಿ ಎಸ್‌ಯುವಿ ಮಾದರಿಯಾದ ಟೆಲ್ಲುರೈಡ್ ಕಾರನ್ನು ಬಿಡುಗಡೆ ಮಾಡಲಿದೆಯೆಂತೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಸೆಲ್ಟೊಸ್ ಯಶಸ್ವಿ ನಂತರ ಮುಂದಿನ ಕಾರು ಬಿಡುಗಡೆಯ ಯೋಜನೆ ಕುರಿತಂತೆ ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿರುವ ಕಿಯಾ ಹಿರಿಯ ಅಧಿಕಾರಿಯೊಬ್ಬರು ಪ್ರತಿ ಆರು ತಿಂಗಳಿಗೊಂದು ಹೊಸ ಕಾರು ಉತ್ಪನ್ನ ಬಿಡುಗಡೆ ಮಾಡುವ ಯೋಜನೆಯಿದ್ದು, ಮುಂಬರುವ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿ ನಂತರ ಕಾರ್ನಿವಾಲ್ ಎಂಪಿವಿ ಬಿಡುಗಡೆಗೊಳಿಸಲಾಗುವುದು ಎನ್ನುವ ಮಾಹಿತಿ ನೀಡಿದ್ದಾರೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂ.10 ಲಕ್ಷದಿಂದ ರೂ.50 ಲಕ್ಷ ಬೆಲೆಯಲ್ಲಿ ವಿವಿಧ ಕಾರು ಮಾದರಿಗಳನ್ನು ಮಾರಾಟಮಾಡುವ ಕಿಯಾ ಸಂಸ್ಥೆಯು ಭಾರತದಲ್ಲೂ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಸೆಲ್ಟೊಸ್ ಯಶಸ್ವಿಯ ಖುಷಿಯಲ್ಲಿರುವ ಕಿಯಾ ಸಂಸ್ಥೆಯು ಸದ್ಯ ಕಾರ್ನಿವಾಲ್ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಕಿಯಾ ಕಾರ್ನಿವಾಲ್ ಕಾರು ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಇನೋವಾ ಕ್ರಿಸ್ಟಾಗೆ ಪ್ರತಿ ಸ್ಪರ್ಧಿಯಾಗಿ ಆನ್‌ರೋಡ್ ಬೆಲೆಗಳಿಗೆ ಅನುಗುಣವಾಗಿ ರೂ. 18 ಲಕ್ಷ ಆರಂಭಿಕವಾಗಿ ಮತ್ತು ರೂ. 25 ಲಕ್ಷ ಟಾಪ್ ಎಂಡ್ ಬೆಲೆಯನ್ನು ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಪಡೆದುಕೊಂಡಿರಲಿದೆ. ಅಂದರೇ ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

MOST READ: ದೀಪಾವಳಿ ಧಮಾಕಾ- ಹೊಸ ಕಾರುಗಳ ಖರೀದಿ ಮೇಲೆ ಭರ್ಜರಿ ಆಫರ್ ನೀಡಿದ ಟೊಯೊಟಾ

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಎಂಜಿನ್ ಸಾಮಾರ್ಥ್ಯ

ಕಿಯಾ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ದೀಪಾವಳಿಗೂ ಮುನ್ನ ಈ ಐದು ಕಾರುಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎರಡು ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯದೊಂದಿಗೆ ಸುರಕ್ಷತೆಗಾಗಿ 6 ಏರ್‌ಬ್ಯಾಗ್,ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಹೊಂದಿರಲಿದೆ.

MOST READ: ಹೊಸ ವಾಹನಗಳ ಖರೀದಿ ಹೆಚ್ಚಿಸಲು ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಕಡಿತ

ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕಾರ್ನಿವಾಲ್ ಬಿಡುಗಡೆಗೆ ದಿನಗಣನೆ ಶುರು

ಹೀಗಾಗಿ ಇನೋವಾ ಕ್ರಿಸ್ಟಾ ಆವೃತ್ತಿಗೆ ಪ್ರತಿಹಂತದಲ್ಲೂ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಹೊಸ ಕಾರ್ನಿವಾಲ್ ಮಾದರಿಯು ಬಿಡುಗಡೆಯಾಗಲಿದೆ.

Most Read Articles

Kannada
English summary
Kia Motors is working on MPV and new compact SUV. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X