ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಹೊಸ ಕಾರು ಮಾರಾಟದಲ್ಲಿ ಸತತ ಕುಸಿತದಿಂದಾಗಿ ಕಂಗೆಟ್ಟಿದ್ದ ಭಾರತೀಯ ಆಟೋ ಉತ್ಪಾದನಾ ಸಂಸ್ಥೆಗಳಿಗೆ ದೀಪಾವಳಿ ಉತ್ಸವದಿಂದಾಗಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿರುವ ಕಿಯಾ ಮೋಟಾರ್ಸ್ ಕೂಡಾ ಇದೇ ಸಂದರ್ಭದಲ್ಲಿ ಭರ್ಜರಿ ಪ್ರಮಾಣದಲ್ಲಿ ಹೊಸ ಕಾರುಗಳನ್ನು ಮಾರಾಟ ಮಾಡಿದೆ.

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಸಂಸ್ಥೆಯು ಶುಭ ಶುಕ್ರವಾರದಂದು (25-10-2019) ಬರೋಬ್ಬರಿ 2,184 ಕಾರುಗಳನ್ನು ಮಾರಾಟ ಮಾಡಿದ್ದು, ಒಂದೇ ದಿನದಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಿಯಾ ಮೋಟಾರ್ಸ್ ಮಾತ್ರವಲ್ಲದೇ ಮಾರುತಿ ಸುಜುಕಿ, ಹ್ಯುಂಡೈ, ಟೊಯೊಟಾ, ಎಂಜಿ ಮೋಟಾರ್ ಕೂಡಾ ದೀಪಾವಳಿ ಹಬ್ಬದ ಮೊದಲ ದಿನದಂದೇ ಭರ್ಜರಿ ಪ್ರಮಾಣದಲ್ಲಿ ಹೊಸ ಕಾರುಗಳನ್ನು ಮಾರಾಟ ಮಾಡಿದ್ದು, ವರ್ಷದ ಆರಂಭದಿಂದಲೂ ಸತತ ಹಿನ್ನಡೆ ಅನುಭವಿಸಿದ್ದ ಕಾರು ಸಂಸ್ಥೆಗಳು ಹರ್ಷ ವ್ಯಕ್ತಪಡಿಸಿವೆ.

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಸದ್ಯ ಮಾರುಕಟ್ಟೆಯಲ್ಲಿ ಸೆಲ್ಟೊಸ್ ಬಿಡುಗಡೆಯ ನಂತರ ಪ್ರತಿ ತಿಂಗಳು ಸರಾಸರಿಯಾಗಿ 6,050(ಅಗಸ್ಟ್) ಮತ್ತು 7,750(ಸೆಪ್ಟೆಂಬರ್) ಯುನಿಟ್ ಮಾರಾಟವಾಗಿದ್ದು, ಇದೀಗ ದೀಪಾವಳಿ ಹಿನ್ನಲೆಯಲ್ಲಿ ಸೆಲ್ಟೊಸ್ ಖರೀದಿಗಾಗಿ ಬರೋಬ್ಬರಿ 60 ಸಾವಿರಕ್ಕೂ ಹೆಚ್ಚು ಗ್ರಾಹಕರು ರೂ.50 ಸಾವಿರ ಮುಂಗಡ ಪಾವತಿಸಿ ಬುಕ್ಕಿಂಗ್ ಪಡೆದುಕೊಂಡಿದ್ದಾರೆ.

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಇದರಿಂದ ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಮುಂದಾಗಿರುವ ಕಿಯಾ ಸಂಸ್ಥೆಯು ಸೆಲ್ಟೊಸ್ ಕಾರು ಉತ್ಪಾದನೆಯನ್ನು ಹೆಚ್ಚಿಸಿದ್ದು, ಬುಕ್ಕಿಂಗ್ ಮಾಡಿದ ಒಂದೇ ವಾರದಲ್ಲಿ ಹೊಸ ಕಾರನ್ನು ವಿತರಣೆ ಮಾಡುವ ಭರವಸೆ ನೀಡುತ್ತಿದೆ. ಇದು ಇತರೆ ಕಾರು ಮಾರಾಟ ಸಂಸ್ಥೆಗಳು ನೀಡುವ 3 ರಿಂದ 4 ವಾರಗಳ ಕಾಯುವಿಕೆ ಅವಧಿಗೆ ಹೋಲಿಕೆ ಮಾಡಿದ್ದಲ್ಲಿ ಗ್ರಾಹಕರು ಹೆಚ್ಚಿನ ಮಟ್ಟದಲ್ಲಿ ಕಿಯಾ ಸೆಲ್ಟೊಸ್ ಖರೀದಿಯತ್ತ ಮುಖ ಮಾಡುತ್ತಿರುವುದು ಪ್ರಮುಖ ಆಕರ್ಷಣೆಯಾಗಲಿದೆ.

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ. ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ. ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ.

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಸೆಲ್ಟೊಸ್ ಕಾರು ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

MOST READ: ಹೊಸ ವಾಹನಗಳ ಖರೀದಿ ಹೆಚ್ಚಿಸಲು ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಕಡಿತ

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

MOST READ: 2020ಕ್ಕೆ ರಸ್ತೆಗಿಳಿಯಲಿದೆ ಜೀಪ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ಕಾರಿನ ಬಣ್ಣಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಈ ಅಂಶಗಳನ್ನು ಪರಿಗಣಿಸಲೇಬೇಕು..!

ದೀಪಾವಳಿ ಹಿನ್ನಲೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

Article Published On: Sunday, October 27, 2019, 13:00 [IST]
English summary
Kia Motors Delivers 2,184 Seltos Units in a Single Day. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+