Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಗಸ್ಟ್ 8ಕ್ಕೆ ಅನಾವರಣಗೊಳ್ಳಲಿದೆ ಕಿಯಾ ಸೆಲ್ಟೊಸ್ ಉತ್ಪಾದನಾ ಆವೃತ್ತಿ
ಕಿಯಾ ಮೋಟಾರ್ಸ್ ಸಂಸ್ಥೆಯು ಕಳೆದ ತಿಂಗಳು ತನ್ನ ಬಹುನೀರಿಕ್ಷಿತ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಜಾಗತಿಕ ಮಾರುಕಟ್ಟೆಗಾಗಿ ಅನಾವರಣಗೊಳಿಸಿದ್ದು, ಅಗಸ್ಟ್ 8ಕ್ಕೆ ಸೆಲ್ಟೊಸ್ ಕಾರಿನ ಮೊದಲ ಉತ್ಪಾದನಾ ಆವೃತ್ತಿಯನ್ನು ಪ್ರದರ್ಶನಗೊಳಿಸುವ ಇರಾದೆಯಲ್ಲಿದೆ. ಈಗಾಗಲೇ ಪ್ರದರ್ಶನಗೊಂಡಿರುವ ಜಾಗತಿಕ ಆವೃತ್ತಿಗಿಂತಲೂ ಕೆಲವು ಬದಲಾವಣೆ ಹೊಂದಲಿರುವ ಭಾರತೀಯ ಉತ್ಪಾದನಾ ಆವೃತ್ತಿಯು ಅಧಿಕೃತವಾಗಿ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಅಗಸ್ಟ್ 22ಕ್ಕೆ ಬಿಡುಗಡೆಗೊಳಿಸಲು ಈಗಾಗಲೇ ಸಿದ್ದತೆ ನಡೆದಿದ್ದು, ಅದಕ್ಕೂ ಮುನ್ನ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಪೆನುಗೊಂಡ ಬಳಿಯಿರುವ ಕಿಯಾ ಕಾರು ಉತ್ಪಾದನಾ ಘಟಕದಲ್ಲಿ ಉತ್ಪಾದನಾ ಆವೃತ್ತಿಯನ್ನು ಪ್ರದರ್ಶನಗೊಳಿಸುವ ನಿರ್ಧರಿಸಲಾಗಿದೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದು, ಅದೇ ದಿನ ಹೊಸ ಕಾರಿನ ಉತ್ಪಾದನಾ ಆವೃತ್ತಿಯ ಜೊತೆಗೆ ಇನ್ನು ಕೆಲವು ಭವಿಷ್ಯದ ವಾಹನ ಮಾದರಿಗಳ ಉತ್ಪಾದನೆಗೆ ಚಾಲನೆ ಸಿಗಲಿದೆ.

ಇನ್ನು ಡೀಸೆಲ್ ಮತ್ತು ಪೆಟ್ರೋಲ್ ಎರಡೂ ಎಂಜಿನ್ ಮಾದರಿಗಳಲ್ಲೂ ಖರೀದಿ ಲಭ್ಯವಿರುವ ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ 5 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 3 ವೆರಿಯೆಂಟ್‌ಗಳಿರಲಿವೆ. ಪೆಟ್ರೋಲ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದ್ದಲ್ಲಿ ಡೀಸೆಲ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳನ್ನು ಖರೀದಿಸಬಹುದಾಗಿದೆಯೆಂತೆ.

ಹೊಸ ಕಾರಿನಲ್ಲಿ ಒದಗಿಸಲಾಗಿರುವ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.14.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಲಿವೆ ಎನ್ನಲಾಗಿದ್ದು, 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್ ಜೊತೆಗೆ 1.4-ಲೀಟರ್ ಟರ್ಬೋ ಪೆಟ್ರೋಲ್ ವರ್ಷನ್ ಕೂಡಾ ಖರೀದಿ ಮಾಡಬಹುದಾಗಿದೆ.

ಸೆಲ್ಟೊಸ್ ಕಾರು ಬಿಎಸ್-6 ಪ್ರೇರಿತ 1.5-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಹೊಂದಿರಲಿದ್ದು, ಇದರೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಒದಗಿಸಲಿದೆ. ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿರಲಿದೆ.

ಸೆಲ್ಟೊಸ್ ಕಾರಿನಲ್ಲಿ ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.

ಹಾಗೆಯೇ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಮತ್ತು ಡ್ಯುಯಲ್ ಸನ್‌ರೂಫ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ. ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.

ಸುರಕ್ಷಾ ಸೌಲಭ್ಯಗಳು
ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಕಾರಿನ ಉದ್ದಳತೆ
ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಒಟ್ಟಿನಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಅತ್ಯುತ್ತಮ ಮಾದರಿಯಾಗಲಿರುವ ಕಿಯಾ ಸೆಲ್ಟೊಸ್ ಕಾರು ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಎಸ್‌ಯುವಿ ಮಾದರಿಗೂ ಈ ಕಾರು ಉತ್ತಮ ಪೈಪೋಟಿಯಾಗುವ ನೀರಿಕ್ಷೆಯಲ್ಲಿದೆ.