2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಸೆಲ್ಟೊಸ್ ಬಿಡುಗಡೆಯ ಯಶಸ್ವಿ ನಂತರ ಮತ್ತಷ್ಟು ಹೊಸ ವಿನ್ಯಾಸದ ಕಾರುಗಳನ್ನು ಪರಿಚಯಿಸಲು ಉತ್ಸುಕವಾಗಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಕಾರ್ನಿವಾಲ್ ಎಂಪಿವಿ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಹೊಸ ಕಾರು 2020ರ ಫೆಬ್ರುವರಿ 5ರಿಂದ ಆರಂಭವಾಗಲಿರುವ ದೆಹಲಿ ಆಟೋ ಎಕ್ಸ್‌ಪೋ ಆರಂಭವಾಗುವುದಕ್ಕೂ ಮುನ್ನವೇ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿವೆ.

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಕಿಯಾ ಮೋಟಾರ್ಸ್ ಸಂಸ್ಥೆಯು ಭಾರೀ ನೀರಿಕ್ಷೆಯೊಂದಿಗೆ ಭಾರತೀಯ ಮಾರುಕಟ್ಟೆಗೆ ಕಾಲಿಟ್ಟಿದ್ದು, ಸೆಲ್ಟೊಸ್ ಒಂದೇ ಕಾರು ಮಾರಾಟದ ಮೂಲಕ ಕೆಲವೇ ದಿನಗಳಲ್ಲಿ ಟಾಪ್ 4 ಸ್ಥಾನಕ್ಕೇರಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ನಮೂನೆಯ ಕೈಗೆಟುಕುವ ಬೆಲೆಯ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದ್ದು, ಕಾರ್ನಿವಾಲ್ ಎಂಪಿವಿ ನಂತರ ಕಂಪ್ಯಾಕ್ಟ್ ಎಸ್‌ಯುವಿ ಸೇರಿದಂತೆ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಬಿಡುಗಡೆಯಾಗಲಿವೆ.

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಕಾರಣವಾಗಿರುವ ಕಿಯಾ ಸಂಸ್ಥೆಯು ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗ್ಗದ ಬೆಲೆಯಲ್ಲಿ ಉತ್ತಮ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಪ್ರಸ್ತುತ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಹೊಂದಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಸೆಲ್ಟೊಸ್ ಯಶಸ್ವಿ ನಂತರ ಕಿಯಾ ಸಂಸ್ಥೆಯು ಕಾರ್ನಿವಾಲ್ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಕಾರ್ನಿವಾಲ್ ಕಾರು ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಇನೋವಾ ಕ್ರಿಸ್ಟಾಗೆ ಪ್ರತಿ ಸ್ಪರ್ಧಿಯಾಗಲಿದ್ದು, ಆನ್‌ರೋಡ್ ಬೆಲೆಗಳಿಗೆ ಅನುಗುಣವಾಗಿ ರೂ. 20 ಲಕ್ಷದಿಂದ ಆರಂಭಿಕವಾಗಿ ಮತ್ತು ರೂ.30 ಲಕ್ಷ ಟಾಪ್ ಎಂಡ್ ಬೆಲೆಯನ್ನು ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಕಾರ್ನಿವಾಲ್ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಹೊಂದಿದ್ದು, ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಎಂಜಿನ್ ಸಾಮಾರ್ಥ್ಯ

ಕಿಯಾ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎರಡು ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯ ಹೊಂದಿದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಹಾಗೆಯೇ ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸಹ ಹೊಂದಿರಲಿದೆ.

MOST READ: ಚಾರ್ಜಿಂಗ್ ಸೌಲಭ್ಯ ನೀಡದ ಬಸ್ಸಿಗೆ ಬಿತ್ತು 5,000 ದಂಡ

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಹೀಗಾಗಿ ಇನೋವಾ ಕ್ರಿಸ್ಟಾ ಆವೃತ್ತಿಗೆ ಪ್ರತಿಹಂತದಲ್ಲೂ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಹೊಸ ಕಾರ್ನಿವಾಲ್ ಖರೀದಿಗೆ ಲಭ್ಯವಿರಲಿದೆ.

2020ರ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನವೇ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್?

ಜೊತೆಗೆ ಭಾರತದಿಂದಲೇ ವಿದೇಶಿ ಮಾರುಕಟ್ಟೆಗಳಿಗೂ ಇಲ್ಲಿಂದಲೇ ಹೊಸ ಕಾರುಗಳನ್ನು ರಫ್ತು ಮಾಡಲು ನಿರ್ಧರಿಸಿರುವ ಕಿಯಾ ಸಂಸ್ಥೆಯು ಈಗಾಗಲೇ ಮೆಡ್ ಇನ್ ಇಂಡಿಯಾ ಯೋಜನೆ ಅಡಿ ಸೆಲ್ಟೊಸ್ ಕಾರನ್ನು ರಫ್ತು ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಕಾರ್ನಿವಾಲ್ ಕೂಡಾ ಭಾರತದಲ್ಲೇ ನಿರ್ಮಾಣವಾಗುವ ಸುಳಿವು ನೀಡಿದೆ.

Source: Zigwheels

More from DriveSpark

Article Published On: Tuesday, December 3, 2019, 16:45 [IST]
English summary
According to reprot, Kia is planning to launch Carnival MPV in India by January 2020 ahead of international auto expo.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+