ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಸೆಲ್ಟೊಸ್ ಬಿಡುಗಡೆಯ ಯಶಸ್ವಿ ನಂತರ ಮುಂದಿನ ತಿಂಗಳು ಕಾರ್ನಿವಾಲ್ ಬಿಡುಗಡೆಗೆ ಸಿದ್ದವಾಗುತ್ತಿರುವ ಕಿಯಾ ಮೋಟಾರ್ಸ್ ಸಂಸ್ಥೆಯು 2020ರ ಮಧ್ಯಂತರದಲ್ಲಿ ಸೊನೆಟ್ ಹೆಸರಿನ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸಲಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಾಗಿ ಕಿಯಾ ಸಂಸ್ಥೆಯು ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಅತ್ಯುತ್ತಮ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ. ಸದ್ಯ ಸೆಲ್ಟೊಸ್ ಕಾರು ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿರುವ ಕಿಯಾ ಸಂಸ್ಥೆಯು 2020ರ ಜನವರಿಯಲ್ಲಿ ಕಾರ್ನಿವಾಲ್ ಎಂಪಿವಿ ಮತ್ತು ಏಪ್ರಿಲ್ ಅಥವಾ ಮೇ ವೇಳೆಗೆ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ರಸ್ತೆಗಿಳಿಸಲಿದೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಸೆಲ್ಟೊಸ್ ಯಶಸ್ವಿ ನಂತರ ಮುಂದಿನ ಕಾರು ಬಿಡುಗಡೆಯ ಯೋಜನೆ ಕುರಿತಂತೆಯಂತೆ ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿರುವ ಕಿಯಾ ಹಿರಿಯ ಅಧಿಕಾರಿಯೊಬ್ಬರು ಪ್ರತಿ ಆರು ತಿಂಗಳಿಗೊಂದು ಹೊಸ ಕಾರು ಉತ್ಪನ್ನ ಬಿಡುಗಡೆ ಮಾಡುವ ಯೋಜನೆಯಿದೆ ಎಂದಿದ್ದಾರೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಹೀಗಾಗಿ ಮುಂಬರುವ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿ ನಂತರ ಕಾರ್ನಿವಾಲ್ ಎಂಪಿವಿ ಹಾಗೂ ಮೇ ವೇಳೆಗೆ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸಲಾಗುವುದು ಎನ್ನುವ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಸೊನೆಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ. ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಜೊತೆಗೆ ಸೆಲ್ಟೊಸ್ ಕಾರು ಮಾದರಿಯಲ್ಲೇ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ ಹೊರತುಪಡಿಸಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಟರ್ಬೋ ಪೆಟ್ರೋಲ್ ಕಾರು ಆವೃತ್ತಿಯನ್ನು ಸಹ ಪಡೆದುಕೊಳ್ಳಲಿದ್ದು, 2020ರ ಏಪ್ರಿಲ್ ಅಥವಾ ಮೇ ಹೊತ್ತಿಗೆ ಹೊಸ ಕಾರು ಬಿಡುಗಡೆಗೊಳ್ಳಲಿದೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಹೊಸ ಕಾರಿನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್, 1.0-ಲೀಟರ್ ಟರ್ಬೋ ಚಾರ್ಜ್ಡ್ ತ್ರೀ ಸಿಲಿಂಡರ್ ಪೆಟ್ರೋಲ್, 1.6-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಮತ್ತು 1.4-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಪಡೆಯುವ ಸಾಧ್ಯತೆಗಳಿವೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಸಬ್ ಫೋರ್ ಮೀಟರ್ ಉದ್ದಳತೆ ಹೊಂದಿರುವ ಹೊಸ ಸೊನೆಟ್ ಕಾರು ಹ್ಯುಂಡೈ ವೆನ್ಯೂ ಹೋಲಿಕೆ ಪಡೆದುಕೊಂಡದ್ದು, ಸೆಲ್ಟೊಸ್ ಮಾದರಿಯಲ್ಲಿ ಟೈಗರ್ ನೋಸ್ ಗ್ರಿಲ್, ಸ್ಲಿಕ್ ಎಲ್ಇಡಿ ಹೆಡ್‌ಲ್ಯಾಂಪ್, ದೊಡ್ಡ ಗಾತ್ರದ ಫಾಗ್ ಲ್ಯಾಂಪ್ ಸೌಲಭ್ಯವನ್ನು ಪಡೆದುಕೊಂಡಿದೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಇನ್ನು ಭಾರೀ ನೀರಿಕ್ಷೆಯೊಂದಿಗೆ ಭಾರತೀಯ ಆಟೋ ಉದ್ಯಮಕ್ಕೆ ಕಾಲಿಟ್ಟಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಕಾರು ಮಾರಾಟ ಮೂಲಕ ದೇಶದ ಟಾಪ್ 4 ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿದ್ದು, ಸೊನೆಟ್ ಕಾರು ಕಿಯಾ ಸಂಸ್ಥೆಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದೆ.

ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಹೊಸ ಕಾರು

ಸೆಲ್ಟೊಸ್ ಬಿಡುಗಡೆಯ ನಂತರ ಕಾರ್ನಿವಾಲ್ ಸೇರಿದಂತೆ ವಿವಿಧ ನಮೂನೆಯ ಐದು ಹೊಸ ಕಾರುಗಳನ್ನು ರಸ್ತೆಗಿಳಿಸಲು ಸಿದ್ದತೆ ನಡೆಸುತ್ತಿದ್ದು, ಬಿಡುಗಡೆಯಾಗಲಿರುವ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸದ್ಯಕ್ಕೆ ಭಾರೀ ಚರ್ಚಗೆ ಕಾರಣವಾಗಿದೆ.

Source: Team BHP

Most Read Articles

Kannada
English summary
Kia QYI Spotted Testing Again Ahead Of India Debut. Read in Kannada.
Story first published: Thursday, December 19, 2019, 11:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X