Just In
- 27 min ago Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- 30 min ago ಯಾವುದೇ ಬೆಟ್ಟ, ಗುಡ್ಡಗಳು ಇದರ ಮುಂದೆ ಲೆಕ್ಕಕ್ಕಿಲ್ಲ: ಫೋರ್ಸ್ ಗೂರ್ಖಾ 5-ಡೋರ್ ಬಿಡುಗಡೆಗೆ ಸಜ್ಜು
- 35 min ago 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- 1 hr ago ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
Don't Miss!
- Movies ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
- News ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಯಾ ಸೆಲ್ಟೊಸ್ ಖರೀದಿಗಾಗಿ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಬುಕ್ಕಿಂಗ್
ಕಿಯಾ ಮೋಟಾರ್ಸ್ ಸಂಸ್ಥೆಯು ಅಗಸ್ಟ್ 22ಕ್ಕೆ ಸೆಲ್ಟೊಸ್ ಕಂಪ್ಯಾಕ್ಟ್ ಎಸ್ಯುವಿ ಕಾರನ್ನು ಬಿಡುಗಡೆ ಮಾಡುತ್ತಿದ್ದು, ನಿನ್ನೆಯಿಂದಷ್ಟೇ ಹೊಸ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ. ಬುಕ್ಕಿಂಗ್ ಆರಂಭವಾದ ಒಂದೇ ದಿನದಲ್ಲಿ ಬರೋಬ್ಬರಿ 6,046 ಗ್ರಾಹಕರು ರೂ. 25 ಸಾವಿರ ಮುಂಗಡದೊಂದಿಗೆ ಸೆಲ್ಟೊಸ್ ಖರೀದಿಗಾಗಿ ಬೇಡಿಕೆ ಸಲ್ಲಿಸಿದ್ದು, ಕಾರು ಬಿಡುಗಡೆಯಾಗುವ ಹೊತ್ತಿಗೆ ಬುಕ್ಕಿಂಗ್ ಪ್ರಮಾಣವು 25 ಸಾವಿರ ಗಡಿದಾಟುವ ನೀರಿಕ್ಷೆಯಿದೆ.
ಇದಲ್ಲದೇ ಕಿಯಾ ಸಂಸ್ಥೆಯು ಕಳೆದ ತಿಂಗಳು ನಡೆದ ಸೆಲ್ಟೊಸ್ ಕಾರಿನ ಅನಾವರಣ ಕಾರ್ಯಕ್ರಮದಲ್ಲಿ ಕಾರಿನ ಹೊರಭಾಗದ ತಾಂತ್ರಿಕ ಸೌಲಭ್ಯಗಳ ಕುರಿತಾಗಿ ಮಾತ್ರವೇ ಮಾಹಿತಿ ಹಂಚಿಕೊಂಡಿತ್ತು. ಇದೀಗ ಮೊದಲ ಬಾರಿಗೆ ಹೊಸ ಕಾರಿನ ಇಂಟಿರಿಯರ್ ಸೌಲಭ್ಯಗಳ ಕುರಿತಾದ ಮಾಹಿತಿಯನ್ನು ಸಹ ಹಂಚಿಕೊಂಡಿದ್ದು, 10.25-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, 360 ಡಿಗ್ರಿ ವ್ಯೂ ಮಾನಿಟರ್, ಏರ್ ಫ್ಯೂರಿಫ್ಲೈಯರ್, ಸ್ಮಾರ್ಟ್ ಹೆಡ್ಸ್ ಅಪ್ ಡಿಸ್ಪ್ಲೇ, ಆಂಬಿಯೆಂಟ್ ಮೂಡ್ ಲೈಟಿಂಗ್, ಸನ್ರೂಫ್ ಮತ್ತು 8-ಸ್ಪಿಕರ್ಸ್ ಬಾಷ್ ಸೌಂಡ್ ಸಿಸ್ಟಂ ಪಡೆದುಕೊಂಡಿರುವುದು ಬಹುತೇಕ ಖಚಿತವಾಗಿದೆ.
ಇದರ ಜೊತೆಗೆ ಹೈ ಎಂಡ್ ವೆರಿಯೆಂಟ್ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.
ಇನ್ನು ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.
ಹಾಗೆಯೇ ಸೆಲ್ಟೊಸ್ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಮತ್ತು ಡ್ಯುಯಲ್ ಸನ್ರೂಫ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ.
ಎಂಜಿನ್ ವೈಶಿಷ್ಟ್ಯತೆ
ಡೀಸೆಲ್ ಮತ್ತು ಪೆಟ್ರೋಲ್ ಎರಡೂ ಎಂಜಿನ್ ಮಾದರಿಗಳಲ್ಲೂ ಖರೀದಿ ಲಭ್ಯವಿರುವ ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್ನಲ್ಲಿ 5 ವೆರಿಯೆಂಟ್ಗಳನ್ನು ಮತ್ತು ಪೆಟ್ರೋಲ್ ಎಂಜಿನ್ನಲ್ಲಿ 3 ವೆರಿಯೆಂಟ್ಗಳನ್ನು ಪಡೆದುಕೊಂಡಿರಲಿದೆ. ಪೆಟ್ರೋಲ್ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದ್ದಲ್ಲಿ ಡೀಸೆಲ್ನಲ್ಲಿ ಹೆಚ್ಟಿಇ, ಹೆಚ್ಟಿಕೆ, ಹೆಚ್ಟಿಕೆ ಪ್ಲಸ್, ಹೆಚ್ಟಿಎಕ್ಸ್ ಮತ್ತು ಹೆಚ್ಟಿಎಕ್ಸ್ ಪ್ಲಸ್ ವೆರಿಯೆಂಟ್ಗಳನ್ನು ಖರೀದಿಸಬಹುದಾಗಿದೆ.
ಸೆಲ್ಟೊಸ್ ಕಾರು ಬಿಎಸ್-6 ಪ್ರೇರಿತ 1.5-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ 1.5-ಲೀಟರ್ ಸಿಆರ್ಡಿಐ ಡೀಸೆಲ್ ಎಂಜಿನ್ ಹೊಂದಿರಲಿದ್ದು, ಇದರೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಒದಗಿಸಲಿದೆ. ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ಹೊಂದಿರಲಿದೆ.
ಸುರಕ್ಷಾ ಸೌಲಭ್ಯಗಳು
ಶೇ.73ರಷ್ಟು ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಎಸ್ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.
ಕಾರಿನ ಉದ್ದಳತೆ
ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್ಯುವಿ ಪ್ರಿಯರನ್ನು ಸೆಳೆಯಲಿದೆ.
ಕಾರಿನ ಬೆಲೆಗಳು(ಅಂದಾಜು)
ಆಕರ್ಷಕ ಬೆಲೆಗಳಲ್ಲಿ ಸೆಲ್ಟೊಸ್ ಕಾರು ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿರುವ ಕಿಯಾ ಸಂಸ್ಥೆಯು ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಯನ್ನು ರೂ. 15 ಲಕ್ಷಕ್ಕೆ ನಿಗದಿ ಮಾಡಬಹುದೆಂದು ಅಂದಾಜಿಸಲಾಗಿದೆ.