ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಕಿಯಾ ಸೆಲ್ಟೊಸ್
ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಮೋಟಾರ್ಸ್ ನಿರ್ಮಾಣದ ಸೆಲ್ಟೊಸ್ ಆವೃತ್ತಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಮೂಲಕ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ಗರಿಷ್ಠ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಅಗ್ರಸ್ಥಾನಕ್ಕೇರಿದೆ.

ಪ್ರಯಾಣಿಕರ ಸುರಕ್ಷಾ ವಿಭಾಗದಲ್ಲಿ ಗರಿಷ್ಠ ಮಟ್ಟದ ಅಂಕವನ್ನು ಪಡೆದುಕೊಂಡಿರುವ ಕಿಯಾ ಸೆಲ್ಟೊಸ್ ಕಾರು 5 ರೇಟಿಂಗ್ ತನ್ನದಾಸಿಕೊಂಡಿದ್ದು, ವಿವಿಧ ವಿಭಾಗಗಳಲ್ಲಿ ನಡೆಸಲಾದ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೆಲ್ಟೊಸ್ ಅತ್ಯುತ್ತಮ ಪ್ರದರ್ಶನ ತೊರಿದೆ. ಅಪಘಾತಗಳ ಸಂದರ್ಭದಲ್ಲಿ ವಯಸ್ಕರಿಗೆ ಶೇ.85ರಷ್ಟು ಸುರಕ್ಷತೆ ಸಿಗಲಿದ್ದರೆ ಮಕ್ಕಳಿಗೆ ಶೇ.83ರಷ್ಟು, ಪಾದಾಚಾರಿಗಳಿಗೆ ಶೇ.61ರಷ್ಟು ಸುರಕ್ಷತೆ ಒದಗಿಸಲು ಶಕ್ತವಾಗಿರುವ ಸೆಲ್ಟೊಸ್ ಕಾರು ಆರಂಭಿಕ ಕಾರು ಆವೃತ್ತಿಯಲ್ಲೇ ಬೆಸ್ಟ್ ಇನ್ ಸೆಗ್ಮೆಂಟ್ ಫೀಚರ್ಸ್ ಪಡೆದುಕೊಂಡಿದೆ.

ಇನ್ನು ಸೆಲ್ಟೊಸ್ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗರಿಷ್ಠ ಬೇಡಿಕೆಯೊಂದಿಗೆ ನಂ.1 ಸ್ಥಾನಕ್ಕೇರಿದ್ದು, ಅತಿ ಕಡಿಮೆ ಅವಧಿಯಲ್ಲಿ 45 ಸಾವಿರ್ ಯುನಿಟ್ ಮಾರಾಟಗೊಳ್ಳುವ ಮೂಲಕ ಅಚ್ಚರಿಯ ಬೆಳವಣೆಗೆ ಸಾಧಿಸಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ. ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.
ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.
MOST READ: ಗಂಡನಿಗೆ ಸರ್‍ಪ್ರೈಸ್ ಗಿಫ್ಟ್ ನೀಡಿದ ಹೆಂಡತಿ..!

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.
MOST READ: ಇನ್ಮುಂದೆ ಅರ್ಜಿ ಸಲ್ಲಿಸಿದ ದಿನವೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್ ಟೆಸ್ಟ್..!

ಸುರಕ್ಷಾ ಸೌಲಭ್ಯಗಳು
ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.
MOST READ: ಕಳ್ಳತನವಾಗಿದ್ದ ಕಾರು ಫಾಸ್ಟ್‌ಟ್ಯಾಗ್‌ನಿಂದಾಗಿ ವಾಪಸ್ ಸಿಕ್ಕಿದ್ದೆ ಒಂದು ರೋಚಕ

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ಜನವರಿ 1ರಿಂದ ಸೆಲ್ಟೊಸ್ ಮತ್ತಷ್ಟು ದುಬಾರಿ
ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ನಂ.1 ಸ್ಥಾನಕ್ಕೇರಿರುವ ಸೆಲ್ಟೊಸ್ ಕಾರು ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ದುಬಾರಿ ಬೆಲೆ ಪಡೆದುಕೊಳ್ಳುತ್ತಿದ್ದು, ಜನವರಿ 1ರ ನಂತರ ಸೆಲ್ಟೊಸ್ ಖರೀದಿಸುವ ಗ್ರಾಹಕರು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೆಲೆಗಿಂತ ರೂ.50 ಸಾವಿರದಿಂದ ರೂ.70 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.


Click it and Unblock the Notifications