ನಮ್ಮ ಬೆಂಗಳೂರು ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಕಿಯಾ ಸಂಸ್ಥೆಯು ಕಳೆದ ವಾರವಷ್ಟೇ ತನ್ನ ಹೊಸ ಕಾರು ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಪ್ರದರ್ಶನಗೊಳಿಸಿದ್ದು, ಆಗಸ್ಟ್ 22ಕ್ಕೆ ಬಿಡುಗಡೆ ಮಾಡುವುದಾಗಿ ಮಾಹಿತಿ ಹಂಚಿಕೊಂಡಿದೆ. ಹೀಗಾಗಿ ಹೊಸ ಕಾರುಗಳನ್ನು ಅಧಿಕೃತ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿದ್ದು, ಬೆಂಗಳೂರಿನ ಬೆಳ್ಳಂದೂರಿನಲ್ಲಿ ಸಿದ್ದವಾಗುತ್ತಿರುವ ಕಿಯಾ ಅಧಿಕೃತ ಡೀಲರ್ಸ್‌ವೊಂದರಲ್ಲಿ ಡ್ಯುಯಲ್ ಟೋನ್ ಬಣ್ಣದ ಸೆಲ್ಟೊಸ್ ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗುರುತರ ಬದಲಾವಣೆ ತರುವ ಉದ್ದೇಶದಿಂದಲೇ ಮಾರುಕಟ್ಟೆಯಲ್ಲಿರುವ ಇತರೆ ಪ್ರತಿಸ್ಪರ್ಧಿ ಕಾರುಗಳಿಂತಲೂ ವಿನೂತನ ಡ್ರೈವ್ ಟೆಕ್ನಾಲಜಿ ಜೊತೆಗೆ ಹಲವು ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸೆಲ್ಟೊಸ್ ಕಾರನ್ನು ಮಾರುಕಟ್ಟೆಗೆ ಪರಿಚಯಿಸಿರುವ ಕಿಯಾ ಸಂಸ್ಥೆಯು ಅತಿ ಕಡಿಮೆ ಬೆಲೆಯಲ್ಲಿ ಐಷಾರಾಮಿ ಮಾದರಿಯ ಕಾರುನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವಿಲ್ಲ.

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಹಾಗೆಯೇ ಸೆಲ್ಟೊಸ್ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಮತ್ತು ಡ್ಯುಯಲ್ ಟೋನ್ ಸನ್ ರೂಫ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಕಾರಿನ ಒಳಾಂಗಣ ವಿನ್ಯಾಸ

ಕಿಯಾ ಸದ್ಯಕ್ಕೆ ಸೆಲ್ಟೊಸ್ ಕಾರಿನ ಹೊಸ ವಿನ್ಯಾಸಗಳನ್ನು ಮಾತ್ರವೇ ಪ್ರದರ್ಶನ ಮಾಡಿದ್ದು, ಬಿಡುಗಡೆಯ ದಿನದ ತನಕ ಕಾರಿನ ಒಳವಿನ್ಯಾಸಗಳನ್ನು ಬಹಿರಂಗಪಡಿಸದಿರಲು ನಿರ್ಧರಿಸಿದೆ. ಹೀಗಾಗಿ ಕಾರಿನ ಒಳಾಂಗಣ ಮಾಹಿತಿ ನೀಡಿದೆಯಾದರೂ ಒಳಾಂಗಣ ಚಿತ್ರಗಳನ್ನು ಮಾತ್ರ ರಹಸ್ಯವಾಗಿಟ್ಟಿದೆ. ಕೆಲವು ಮಾಹಿತಿಗಳ ಪ್ರಕಾರ ಕಾರಿನಲ್ಲಿ 10.25-ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, 360 ಡಿಗ್ರಿ ವ್ಯೂ ಮಾನಿಟರ್, ಹೆಡ್ ಅಪ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು 8-ಸ್ಪಿಕರ್ಸ್ ಬಾಷ್ ಸೌಂಡ್ ಸಿಸ್ಟಂ ಹೊಂದಿರಲಿದೆಯೆಂತೆ.

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತ 45-ಎಂಎಂ ಹೆಚ್ಚು ಉದ್ದವಾಗಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಇದರ ಜೊತೆಗೆ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ನಲ್ಲಿ ಬ್ಲ್ಯೂ ಲಿಂಕ್ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಎಂಜಿನ್ ಸಾಮರ್ಥ್ಯ

ಸೆಲ್ಟೊಸ್ ಕಾರು ಬಿಎಸ್-6 ಪ್ರೇರಿತ 1.5-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಹೊಂದಿರಲಿದ್ದು, ಇದರೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆ ಸಹ ಒದಗಿಸಲಿದೆ.

ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಇಲ್ಲವೇ 6-ಸ್ಟೆಪ್ ಟಾರ್ಕ್ ಕನರ್ವಟ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಲಿವೆ.

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಸುರಕ್ಷಾ ಸೌಲಭ್ಯಗಳು

ಶೇ.73ರಷ್ಟು ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಆಧುನಿಕ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

MOST READ: ಅಪಘಾತದ ವೇಳೆ ಏರ್‌ಬ್ಯಾಗ್ ಇದ್ರು ಫ್ಲಾಪ್- ಟೊಯೊಟಾ ವಿರುದ್ಧ ಕಾರು ಮಾಲೀಕನ ಆಕ್ರೋಶ..!

ನಮ್ಮ ಬೆಂಗಳೂರಿಗೆ ತಲುಪಿದ ಡ್ಯುಯಲ್ ಟೋನ್ ಬಣ್ಣದ ಕಿಯಾ ಸೆಲ್ಟೊಸ್

ಕಾರಿನ ಬೆಲೆಗಳು(ಅಂದಾಜು)

ಆಕರ್ಷಕ ಬೆಲೆಗಳಲ್ಲಿ ಸೆಲ್ಟೊಸ್ ಬಿಡುಗಡೆಯ ಸುಳಿವು ನೀಡಿರುವ ಕಿಯಾ ಸಂಸ್ಥೆಯು ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 16 ಲಕ್ಷ ನಿಗದಿ ಮಾಡಬಹುದೆಂದು ಅಂದಾಜಿಸಲಾಗಿದೆ. ಇನ್ನು ಕಿಯಾ ಸಂಸ್ಥೆಯು ಸೆಲ್ಟೊಸ್ ಬಿಡುಗಡೆಯ ನಂತರ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಒಟ್ಟು 8 ಹೊಸ ಕಾರು ಆವೃತ್ತಿಗಳನ್ನು ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆ ಮಾಡಲಿದ್ದು, ಇದರಲ್ಲಿ 2 ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಈಗಾಗಲೇ ಸಿದ್ದತೆ ಮಾಡಿಕೊಂಡಿದೆ.

Source: Kia Seltos Club India

Article Published On: Saturday, June 29, 2019, 11:32 [IST]
English summary
Kia Seltos Dual Tone Spied in Bengaluru. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+