ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಹೊಸ ಸಂಚಲನವನ್ನು ಮೂಡಿಸಿದೆ. ಕಿಯಾ ಮೋಟಾರ್ಸ್ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿ ಭಾರತದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಕಿಯಾ ಸೆಲ್ಟೋಸ್ ಎಸ್‍‍ಯುವಿ ಹಲವಾರು ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‍‍ಗಳಿಂದ ಗ್ರಾಹಕರ ಗಮನಸೆಳೆದಿದೆ. ಭಾರತದ ಎಸ್‍‍ಯುವಿ ಸೆಗ್‍‍ಮೆಂಟ್‍‍ನಲ್ಲಿ ಕಿಯಾ ಸೆಲ್ಟೋಸ್ ಅತಿ ಹೆಚ್ಚು ಮಾರಾಟವಾಗುವ ವಾಹನವಾಗಿದೆ. ಇದೀಗ ಕಿಯಾ ಮೋಟಾರ್ಸ್ ಭಾರತದಲ್ಲಿ ಎಲೆಕ್ಟ್ರಿಕ್ ಸೆಲ್ಟೋಸ್ ಎಸ್‍‍ಯುವಿಯನ್ನು ಬಿಡುಗಡೆಗೊಳಿಸಲು ಚಿಂತನೆ ನಡೆಸಿದೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಭಾರತದಲ್ಲಿ ಈಗಾಗಲೇ ಹಲವಾರು ಪ್ರಮುಖ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುವುದರಲ್ಲಿ ನಿರತವಾಗಿವೆ. ಇನ್ನೂ ಕೆಲವು ಕಂಪನಿಗಳು ಈಗಾಗಲೇ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಿವೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಕೇವಲ ವಾಹನ ಉತ್ಪಾದಕರು ಅಲ್ಲದೇ ಗ್ರಾಹಕರು ಕೂಡ ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡಿದ್ದಾರೆ. ಇದ್ದರಿಂದ ಕಿಯಾ ಮೋಟಾರ್ಸ್ ಕಂಪನಿಯ ಯಶ್ವಸಿ ಸೆಲ್ಟೋಸ್ ಎಸ್‍‍ಯುವಿಯನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಚಿಂತಿಸಿದೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಆದರೆ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಕಾರು ಉತ್ಪಾದನೆಯ ಪ್ರಾರಂಭಿಕ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಿಯಾ ಮೋಟಾರ್ಸ್ ತನ್ನ ಎಲೆಕ್ಟ್ರಿಕ್ ಸೆಲ್ಟೋಸ್ ಎಸ್‍‍ಯುವಿಯನ್ನು ಉತ್ಪಾದಿಸಿ, ಮೊದಲ ವರ್ಷದಲ್ಲಿ ಕೇವಲ 10,000 ಸೀಮಿತ ಯುನಿಟ್‍‍ಗಳನ್ನು ಬಿಡುಗಡೆಗೊಳಿಸಲಿದೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಬೇಡಿಕೆಯ ಅನುಸಾರವಾಗಿ ನಂತರದ ಹಂತದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲಾಗುತ್ತದೆ. ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಕಾರಿನಲ್ಲಿ ಹ್ಯುಂಡೈ ಕೋನದ ಮಾದರಿಯ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿವೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಹ್ಯುಂಡೈ ಕೋನ ಕಾರ್ ನಲ್ಲಿ 64 ಕೆಡಬ್ಲ್ಯುಹೆಚ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿದೆ. ಹ್ಯುಂಡೈ ಕೋನಾ ಪೂರ್ಣ ಪ್ರಮಾಣದ ಚಾರ್ಚ್ ಮಾಡಿದರೆ 350 ಕಿ.ಮೀ ಚಲಿಸುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಿಯಾ ಸೆಲ್ಟೋಸ್‍ ಎಸ್‍‍ಯು‍ವಿಯನ್ನು ಬಿಎಸ್-6 ಎಂಜಿನ್‍‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍‍ಗಳು ಸೇರಿವೆ. ಎಸ್‍‍ಯು‍ವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿ‍ಎಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ಇನ್ನೂ 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಹೊಂದಿವೆ.

MOST READ: ನವೆಂಬರ್ ತಿಂಗಳಲ್ಲಿ ಮಾರಾಟವಾದ ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳೆಷ್ಟು ಗೊತ್ತಾ?

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

1.5 ಲೀಟರ್ ಪೆಟ್ರೋಲ್ ಸಿವಿ‍ಟಿ, 1.5 ಲೀಟರ್ ಡೀಸೆಲ್‍ಗೆ ಐವಿ‍ಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

ಎಲೆಕ್ಟ್ರಿಕ್ ಸೆಲ್ಟೋಸ್ ಬಿಡುಗಡೆಗೊಳಿಸಲಿದೆ ಕಿಯಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಿಯಾ ಸೆಲ್ಟೊಸ್ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ 500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Kia Seltos electric SUV launch planned - Read in Kannada
Story first published: Monday, December 23, 2019, 12:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X