ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಹಲವು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ ಕಿಯಾ ಮೋಟಾರ್ಸ್ ನಿರ್ಮಾಣದ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸದ್ಯ ದಾಖಲೆ ಪ್ರಮಾಣದ ಮಾರಾಟವನ್ನು ಕಂಡಿದ್ದು, ಇದೇ ಮೊದಲ ಬಾರಿಗೆ ಹೊಸ ಕಾರು ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತದಲ್ಲೇ ನಿರ್ಮಾಣ ಮಾಡಲಾದ ಸೆಲ್ಟೊಸ್ ಕಾರುಗಳನ್ನು ಮಧ್ಯಪ್ರಾಚ್ಯ ಮತ್ತು ದಕ್ಷಿಣ ಏಷ್ಯಾ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆಗೆ ಚಾಲನೆ ನೀಡಿದ್ದು, ನಿನ್ನೆಯಷ್ಟೇ ಮೊದಲ ಹಂತವಾಗಿ 471 ಸೆಲ್ಟೊಸ್ ಯುನಿಟ್‌ಗಳನ್ನು ಚೆನ್ನೈ ಬಂದರು ಮೂಲಕ ಅಧಿಕೃತ ರಫ್ತು ಕೈಗೊಂಡಿದೆ. ಹೊಸ ಸೆಲ್ಟೊಸ್ ಬಿಡುಗಡೆ ನಂತರ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಸೆಲ್ಟೊಸ್ ಕಾರು ಭಾರತದಲ್ಲಿ ಮಾತ್ರವಲ್ಲದೇ ವಿದೇಶಿ ಮಾರುಕಟ್ಟೆಗಳಲ್ಲೂ ಭಾರೀ ಬೇಡಿಕೆ ಹರಿದುಬರುತ್ತಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಅಗಸ್ಟ್ 22ರಂದು ಬಿಡುಗಡೆಗೊಂಡ ನಂತರ ಮೊದಲ ತಿಂಗಳಿನಲ್ಲೇ 6 ಸಾವಿರ ಯುನಿಟ್ ಮಾರಾಟ ದಾಖಲಿಸಿದ್ದ ಸೆಲ್ಟೊಸ್ ಕಾರು ಸೆಪ್ಟೆಂಬರ್ ಅವಧಿಯಲ್ಲೂ ದಾಖಲೆ ಪ್ರಮಾಣದ ಕಾರು ಮಾರಾಟವಾಗಿದ್ದು, ಎರಡನೇ ತಿಂಗಳ ಅವಧಿಯಲ್ಲಿ ಒಟ್ಟು 7,750 ಕಾರುಗಳನ್ನು ಮಾರಾಟ ಮಾಡುವ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಪ್ರತಿ ಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ. ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಸೆಲ್ಟೊಸ್ ಕಾರು ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

MOST READ: ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

MOST READ: ಜಿಎಸ್‌ಟಿ ಇಳಿಕೆ ಹಿನ್ನಲೆಯಲ್ಲಿ ಟೆಕ್ನೊ ಎಲೆಕ್ಟ್ರಾ ಸ್ಕೂಟರ್‌ಗಳ ಬೆಲೆ ಕಡಿತ

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ದುಬಾರಿ ಬೆಲೆಯ ಹಾರ್ಲೆ ಡೇವಿಡ್‍‍ಸನ್ ಬೈಕ್ ಖರೀದಿಸಿದ ರಾಜ್‍‍ಕುಮಾರ್ ರಾವ್

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

More from DriveSpark

Article Published On: Wednesday, October 16, 2019, 13:19 [IST]
English summary
Korean auto manufacturer Kia Motors, has begun its export operation from India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+