ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಕಿಯಾ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮುಂದಿನ ತಿಂಗಳು ಅಗಸ್ಟ್ 22ಕ್ಕೆ ಬಿಡುಗಡೆಯಾಗುತ್ತಿದ್ದು, ಸದ್ಯ ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆ ಜೋರಾಗಿದೆ. ಬುಕ್ಕಿಂಗ್ ಆರಂಭವಾದ ಕೇವಲ ನಾಲ್ಕು ದಿನಗಳಲ್ಲಿ ದಾಖಲೆ ಪ್ರಮಾಣದ ಬೇಡಿಕೆ ಹರಿದು ಬಂದಿದ್ದು, ಇದೀಗ ಹೊಸ ಕಾರಿನ ಮೈಲೇಜ್ ಪ್ರಮಾಣದ ಕುರಿತಾಗಿ ಮಾಹಿತಿ ಲಭ್ಯವಾಗಿದೆ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

2020ರ ಏಪ್ರಿಲ್ 1ಕ್ಕೆ ಜಾರಿಗೆ ಬಲಿರುವ ಬಿಎಸ್-6 ನಿಯಮಾವಳಿಗಳಿಗೆ ಅನುಗುಣವಾಗಿ ಎಂಜಿನ್ ಸೌಲಭ್ಯವನ್ನು ಹೊಂದಿರುವ ಕಿಯಾ ಸೆಲ್ಟೊಸ್ ಕಾರು ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹ್ಯುಂಡೈ ಕ್ರೆಟಾ ಮಾದರಿಯಲ್ಲೇ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 16.4 ಕಿ.ಮಿ ಮತ್ತು ಡೀಸೆಲ್ ಆವೃತ್ತಿಯಲ್ಲಿರುವ ಕಾರು ಮಾದರಿಗಳು ಪ್ರತಿ ಲೀಟರ್‌ಗೆ ಗರಿಷ್ಠ 20.8 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲವು.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಇನ್ನು ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ 5 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 3 ವೆರಿಯೆಂಟ್‌ಗಳನ್ನು ಪಡೆದುಕೊಂಡಿರಲಿದ್ದು, ಪೆಟ್ರೋಲ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್‌ ಖರೀದಿಗೆ ಲಭ್ಯವಿದ್ದಲ್ಲಿ ಡೀಸೆಲ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳನ್ನು ಖರೀದಿಸಬಹುದಾಗಿದೆ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

1.5-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಹೊಂದಿರಲಿದ್ದು, ಇದರೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಒದಗಿಸಲಿದೆ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿರಲಿದೆ.

ಹೀಗಾಗಿ ಎಂಜಿನ್ ಆಯ್ಕೆಯಲ್ಲಿ ಉತ್ತಮ ಎನ್ನಿಸುವ ಸೆಲ್ಟೊಸ್‌ನಲ್ಲಿ ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಹಾಗೆಯೇ ಸೆಲ್ಟೊಸ್ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಮತ್ತು ಡ್ಯುಯಲ್ ಸನ್‌ರೂಫ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಹಾಗೆಯೇ ಸೆಲ್ಟೊಸ್ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಮತ್ತು ಡ್ಯುಯಲ್ ಸನ್‌ರೂಫ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಸುರಕ್ಷಾ ಸೌಲಭ್ಯಗಳು

ಶೇ.73ರಷ್ಟು ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಕಿಯಾ ಸೆಲ್ಟೊಸ್ ಕಾರಿನ ಅಧಿಕೃತ ಮೈಲೇಜ್ ಎಷ್ಟಿರಲಿದೆ ನೋಡಿ..

ಕಾರಿನ ಬೆಲೆಗಳು(ಅಂದಾಜು)

ಆಕರ್ಷಕ ಬೆಲೆಗಳಲ್ಲಿ ಸೆಲ್ಟೊಸ್ ಕಾರು ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿರುವ ಕಿಯಾ ಸಂಸ್ಥೆಯು ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಯನ್ನು ರೂ. 15 ಲಕ್ಷಕ್ಕೆ ನಿಗದಿ ಮಾಡಬಹುದೆಂದು ಅಂದಾಜಿಸಲಾಗಿದೆ.

Article Published On: Friday, July 19, 2019, 15:19 [IST]
English summary
Kia Seltos fuel efficiency details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+