ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಸಂಸ್ಥೆಯು ಇದೇ ತಿಂಗಳು 22ರಂದು ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಖರೀದಿಗೆ ಈಗಾಗಲೇ ಬುಕ್ಕಿಂಗ್ ಕೂಡಾ ಆರಂಭವಾಗಿದೆ. ಸೆಲ್ಟೊಸ್ ಕಾರು ಜಿಟಿ ಲೈನ್ ಮತ್ತು ಟೆಕ್ ಲೈನ್ ಎನ್ನುವ ಎರಡು ವೆರಿಯೆಂಟ್‌‌ಗಳಲ್ಲಿ ಖರೀದಿಗೆ ಲಭ್ಯವಾಗುತ್ತಿದ್ದು, ಎರಡು ಮಾದರಿಯಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಆಯ್ಕೆಗಳನ್ನು ನೀಡುವುದು ಬಹುತೇಕ ಖಚಿತವಾಗಿದೆ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಈ ಹಿಂದೆ ಸೆಲ್ಟೊಸ್ ಟೆಕ್ ಲೈನ್ ಮಾದರಿಯಲ್ಲಿ ಮಾತ್ರವೇ ಡಿಸೇಲ್ ಮತ್ತು ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡುವುದಾಗಿ ಹೇಳಿದ್ದ ಕಿಯಾ ಸಂಸ್ಥೆಯು ಜಿಟಿ ಲೈನ್ ಮಾದರಿಯಲ್ಲಿ ಪೆಟ್ರೋಲ್ ವರ್ಷನ್ ಮಾತ್ರವೇ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ಗ್ರಾಹಕರ ಭಾರೀ ಬೇಡಿಕೆಯ ಮೇರೆಗೆ ಜಿಟಿ ಲೈನ್‌ನಲ್ಲೂ ಡೀಸೆಲ್ ಎಂಜಿನ್ ಬಿಡುಗಡೆಗೊಳಿಸುವುದಾಗಿ ಹೇಳಿಕೊಂಡಿರುವ ಕಿಯಾ ಸಂಸ್ಥೆಯು ಡಿಸೇಲ್ ವರ್ಷನ್ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಸಹ ಆರಂಭಿಸಿದೆ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಸೆಲ್ಟೊಲ್ ಕಾರುಗಳಲ್ಲಿ ಟೆಕ್ ಲೈನ್ ಸಾಮಾನ್ಯ ಮಾದರಿಯ ಕಾರು ಆವೃತ್ತಿಯಾಗಿದ್ದರೆ ಜಿಟಿ ಲೈನ್ ಮಾದರಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಅಭಿವೃದ್ಧಿಗೊಳಿಸಲಾಗಿದೆ. ಜಿಟಿ ಲೈನ್ ಕಾರು ಸ್ಪೋರ್ಟಿ ವಿನ್ಯಾಸದ ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರಲಿದ್ದು, ಡೀಸೆಲ್ ಮಾದರಿಯು ಸೆಲ್ಟೊಸ್ ಮಾದರಿಯ ಟಾಪ್ ಎಂಡ್ ಆವೃತ್ತಿಯಾಗಲಿರಲಿದೆ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 3 ವೆರಿಯೆಂಟ್‌ಗಳನ್ನು ಹೊಂದಿದ್ದು, ಪೆಟ್ರೋಲ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್‌ ಖರೀದಿಗೆ ಲಭ್ಯವಿದ್ದಲ್ಲಿ ಡೀಸೆಲ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್, ಜಿಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳನ್ನು ಖರೀದಿಸಬಹುದಾಗಿದೆ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಸೆಲ್ಟೊಸ್ ಟೆಕ್ ಲೈನ್ ಮಾದರಿಯಲ್ಲಿ ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ನೀಡಲಾಗಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ವರ್ಷನ್ ಕೂಡಾ ಖರೀದಿ ಮಾಡಬಹುದಾಗಿದೆ. ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಇನ್ನು ಸೆಲ್ಟೊಸ್ ಕಾರಿನಲ್ಲಿ ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಹಾಗೆಯೇ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

MOST READ: ಕಾರು ಖರೀದಿಗೆ ಇದು ಸುವರ್ಣಾವಕಾಶ- ರೂ.4 ಲಕ್ಷದ ತನಕ ಡಿಸ್ಕೌಂಟ್ ಘೋಷಿಸಿದ ಹೋಂಡಾ

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್, ಡ್ಯುಯಲ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.

MOST READ: ಅಪಘಾತದ ವೇಳೆ ಏರ್‌ಬ್ಯಾಗ್ ಇದ್ರು ಫ್ಲಾಪ್- ಟೊಯೊಟಾ ವಿರುದ್ಧ ಕಾರು ಮಾಲೀಕನ ಆಕ್ರೋಶ..!

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಸೆಲ್ಟೊಸ್ ಜಿಟಿ ಲೈನ್ ಮಾದರಿಯಲ್ಲೂ ಡಿಸೇಲ್ ಎಂಜಿನ್ ಆಯ್ಕೆ ನೀಡಿದ ಕಿಯಾ ಮೋಟಾರ್ಸ್

ಕಾರಿನ ಬೆಲೆಗಳು(ಅಂದಾಜು)

ಹೊಸ ಕಾರಿನಲ್ಲಿ ಒದಗಿಸಲಾಗಿರುವ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಸೆಲ್ಟೊಸ್ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.16 ಲಕ್ಷಕ್ಕೆ ಖರೀದಿಗೆ ಲಭ್ಯವಾಗಲಿವೆ ಎನ್ನಲಾಗಿದ್ದು, ಮಧ್ಯಮ ಕ್ರಮಾಂಕರ ಎಸ್‌ಯುವಿಯಲ್ಲಿ ಅತ್ಯುತ್ತಮ ಕಾರು ಮಾದರಿಯಾಗಿ ಸದ್ದು ಮಾಡಲಿದೆ.

Article Published On: Friday, August 16, 2019, 17:20 [IST]
English summary
Kia Opens Bookings For GT-Line Diesel Variant Of The Seltos Ahead Of Launch In India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+