ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಕಳೆದ ತಿಂಗಳು 22ರಂದು ಬಿಡುಗಡೆಗೊಂಡಿದ್ದ ಕಿಯಾ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಲ್ಲಿ ಇದೀಗ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16.99 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಸೆಲ್ಟೊಸ್ ಮಾದರಿಯು ಈ ಹಿಂದೆ ಬಿಡುಗಡೆಯಾದಾಗ ಜಿಟಿಎಕ್ಸ್ ಪ್ಲಸ್ ಮಾದರಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ಬಿಡುಗಡೆ ಮಾಡಿದ್ದ ಕಿಯಾ ಮೋಟಾರ್ಸ್ ಸಂಸ್ಥೆಯು ಇದೀಗ ಅದೇ ಆವೃತ್ತಿಯಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸಹ ಪರಿಚಯಿಸಿದ್ದು, ಪೆಟ್ರೋಲ್ ಮಾದರಿಯು 7-ಸ್ಪೀಡ್ ಡಿಟಿಸಿ ಆಟೋಮ್ಯಾಟಿಕ್ ಮತ್ತು ಡೀಸೆಲ್ ಆವೃತ್ತಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯ ಹೊಂದಿದೆ.

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದ್ದು, ಟೆಕ್ ಲೈನ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಮತ್ತು ಜಿಟಿ ಲೈನ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್, ಜಿಟಿಕೆ ಪ್ಲಸ್ ಎಎಂಟಿ ವೆರಿಯೆಂಟ್‌ಗಳಲ್ಲಿ ಲಭ್ಯವಿವೆ.

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಸೆಲ್ಟೊಸ್ ಕಾರುಗಳು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದ್ದು, ಟೆಕ್ ಲೈನ್‌ ಕಾರು ಮಾದರಿಗಳು ಸಾಮಾನ್ಯ ಚಾಲನಾ ತಂತ್ರಜ್ಞಾನ ಹೊಂದಿದ್ದರೆ ಜಿಟಿ ಲೈನ್‌ ಕಾರುಗಳು ಸಾಮಾನ್ಯ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ವೈಶಿಷ್ಟ್ಯತೆ ಹೊಂದಿವೆ.

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಮಾದರಿಯು ಬಿಎಸ್-6 ನಿಯಮ ಅನುಸಾರ ಅಭಿವೃದ್ಧಿಗೊಂಡಿರುವ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ, ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ. ಜಿಟಿ ಲೈನ್ ಹೊರತುಪಡಿಸಿ ಟೆಕ್ ಲೈನ್ ಕಾರುಗಳಲ್ಲಿ ಪ್ರತಿ ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತು ಬಂದಿದೆ.

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಇನ್ನು ಭಾರೀ ನೀರಿಕ್ಷೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಕಾರು ಮಾರಾಟವನ್ನು ಆರಂಭಿಸಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಆರ್ಥಿಕ ಸಂಕಷ್ಟದ ನಡುವೆಯೂ ಸೆಲ್ಟೊಸ್ ಮಾರಾಟದಲ್ಲಿ ಹೊಸ ದಾಖಲೆಗೆ ಸಾಕ್ಷಿಯಾಗಿದ್ದು, ಸೆಪ್ಟೆಂಬರ್ 22ರಿಂದ 31ರ ಒಳಗೆ ಬರೋಬ್ಬರಿ 6,200 ಕಾರುಗಳನ್ನು ಮಾರಾಟ ಮಾಡುವ ಮೂಲಕ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದೆ.

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ಭಾರತದಲ್ಲಿ ಬಿಡುಗಡೆಯಾಗಲಿರುವ 5 ಎಲೆಕ್ಟ್ರಿಕ್ ಕಾರುಗಳಿವು

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

MOST READ: ದಂಡದಿಂದ ತಪ್ಪಿಸಿಕೊಳ್ಳಲು ವಾಹನ ಸವಾರರಿಗೆ ಹೊಸ ಮಾರ್ಗ ಸೂಚಿಸಿದ ಬೆಂಗಳೂರು ಪೊಲೀಸರು..!

ಕಿಯಾ ಸೆಲ್ಟೊಸ್‌ನಲ್ಲಿ ಹೊಸದಾಗಿ ಜಿಟಿಎಕ್ಸ್ ಪ್ಲಸ್ ಎಎಂಟಿ ವರ್ಷನ್ ಬಿಡುಗಡೆ

ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಸೆಲ್ಟೊಸ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

More from DriveSpark

Article Published On: Monday, September 9, 2019, 14:13 [IST]
English summary
Kia Seltos GTX+ Automatic Launched In India: Priced At Rs 16.99 Lakh.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+