ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಜಗತ್ತಿನಾದ್ಯಂತ ನೂರಾರು ಕಾರು ಉತ್ಪಾದನಾ ಸಂಸ್ಥೆಗಳು ತಮ್ಮದೇ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಇವುಗಳಲ್ಲೇ ಕೆಲವೇ ಕಾರುಗಳು ಮಾತ್ರ ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯಬಲ್ಲ ಗುಣವಿಶೇಷತೆ ಹೊಂದಿವೆ. ಈ ಹಿನ್ನಲೆ ಬೆಲೆ ಮತ್ತು ಕಾರು ಉತ್ಪಾದನಾ ಗುಣಮಟ್ಟದ ಆಧಾರದ ಮೇಲೆ ನೀಡಲಾಗುವ ವಲ್ಡ್ ಕಾರ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾರತೀಯ ಮಾರುಕಟ್ಟೆಯಲ್ಲಿನ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್‌ಗೊಂಡಿವೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆ, ಗ್ರಾಹಕರ ವಿಶ್ವಾಸದ ಆಧಾರದ ಮೇಲೆ 2020ರ ವಲ್ಡ್ ಕಾರ್ ಆಫ್ ದಿ ಇಯರ್ ಪ್ರಶಸ್ತಿಗಾಗಿ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್ ಮಾಡಲಾಗಿದ್ದು, ಮುಂಬರುವ ಜನವರಿಯಲ್ಲಿ ನಡೆಯಲಿರುವ ಫ್ರಾಂಕ್‌‌ಫರ್ಟ್(ಜರ್ಮನಿ) ಇಂಟರ್‌ನ್ಯಾಷನಲ್ ಆಟೋಮೇಳದಲ್ಲಿ ಅಂತಿಮ ಹೆಸರನ್ನು ಬಹಿರಂಗ ಪಡೆಯಲಾಗುತ್ತದೆ. ವಿಶ್ವ ಆಟೋ ಉದ್ಯಮದಲ್ಲಿ ಕಾರ್ ಆಫ್ ದಿ ಇಯರ್ ಪ್ರಶಸ್ತಿಯು ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪರ್ಫಾಮೆನ್ಸ್, ಲಗ್ಷುರಿ ಮತ್ತು ಅರ್ಬನ್ ವಿಭಾಗದಲ್ಲಿ ವಿವಿಧ ಕಾರು ಮಾದರಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಇದೀಗ ಆಯ್ಕೆ ಮಾಡಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ವೆನ್ಯೂ ಕಾರುಗಳು ಆಕರ್ಷಕ ಬೆಲೆಗಳೊಂದಿಗೆ ಅತ್ಯುತ್ತಮ ತಾಂತ್ರಿಕ ಸೌಲಭ್ಯವನ್ನು ಪಡೆದುಕೊಂಡಿದ್ದು, ಗ್ರಾಹಕರ ವಿಶ್ವಾಸದ ಆಧಾರದ ಮೇಲೆ ವಲ್ಡ್ ಕಾರ್ ಆಫ್ ದಿ ಇಯರ್ ಪ್ರಶಸ್ತಿಗೆ ನಾಮಿನೆಟ್ ಮಾಡಲಾಗಿದೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಇನ್ನು ಹ್ಯುಂಡೈ ಸಂಸ್ಥೆಯು ಕಳೆದ ಮೇ ತಿಂಗಳಿನಲ್ಲಿ ಬಿಡುಗಡೆ ಮಾಡಿರುವ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 4 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ವೆನ್ಯೂ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.50,000 ದಿಂದ ಟಾಪ್ ಎಂಡ್ ಆವೃತ್ತಿಯು ರೂ.11,10,500 ಬೆಲೆ ಪಡೆದುಕೊಂಡಿದೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ಮಾತ್ರ ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ವೆರಿಯೆಂಟ್‌ಗಳಲ್ಲಿ ವೆನ್ಯೂ ಖರೀದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್‌ಗಳು ಸಾಮಾನ್ಯ ಮಾದರಿಯ ಕಾರುಗಳಗಾಗಿ ಮಾರಾಟಗೊಳ್ಳಲಿದ್ದರೆ, ಕಡಿಮೆ ಎಂಜಿನ್ ಸಾಮಾರ್ಥ್ಯದ 1.0-ಲೀಟರ್ ಪೆಟ್ರೋಲ್ ಆವೃತ್ತಿಯು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನೆಯೊಂದಿಗ ವೆನ್ಯೂ ಟಾಪ್ ಎಂಡ್ ಮಾದರಿಯಾಗಿ ಹೊರಹೊಮ್ಮಿದೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 120-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಆಯ್ಕೆ ಮಾಡಬಹುದಾಗಿದೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ವೆನ್ಯೂ ತಾಂತ್ರಿಕ ವೈಶಿಷ್ಟ್ಯತೆ ಹ್ಯುಂಡೈ ವೆನ್ಯೂ ಕಾರಿನಲ್ಲಿ 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಬ್ಲೂ ಲಿಂಕ್ ಪ್ಯಾಕೇಜ್‌ನಲ್ಲಿ ಜಿಯೋ ಫೆನ್ಸ್, ಎರ್ಮಜೆನ್ಸಿ ಅಸಿಸ್ಟ್, ಕಾರ್ ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದೆ. ಸಿಗ್ನಿಚೆಕ್ ಕಾಸ್‌ಕ್ಲ್ಯಾಡಿಂಗ್ ಹೆಕ್ಸಾಗೊನಲ್ ಫ್ರಂಟ್ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಸಣ್ಣ ಎಳೆಯಂತಿರುವ ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್ ಕಳೆಭಾಗದಲ್ಲಿ ಹೊಂದಿಕೊಂಡಂತಿರುವ ಎಲ್ಇಡಿ ಡಿಆರ್‌ಎಲ್ಎಸ್ ಮತ್ತು 16-ಇಂಚಿನ ಟೈರ್ ಸೌಲಭ್ಯವು ಎಸ್‌ಯುವಿ ಪ್ರಿಯರನ್ನು ಸೆಳೆಯಲಿವೆ.

MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಇನ್ನು ವಲ್ಡ್ ಕಾರ್ ಆಫ್ ದಿ ಇಯರ್ ಪ್ರಶಸ್ತಿಗಾಗಿ ನಾಮಿನೆಟ್‌ಗೊಂಡಿರುವ ಕಿಯಾ ಸೆಲ್ಟೊಸ್ ಕೂಡಾ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಎನ್ನುವಂತ ಹಲವು ಫೀಚರ್ಸ್‌ನೊಂದಿಗೆ ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಗೊಳ್ಳುವ ಮೂಲಕ ಕೆಲವೇ ದಿನಗಳಲ್ಲಿ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

MOST READ: ಕೇವಲ 40 ರೂಪಾಯಿ ಆಸೆಗೆ ಬರೋಬ್ಬರಿ 40 ಲಕ್ಷ ಕಳೆದುಕೊಂಡ ಹ್ಯುಂಡೈ ಕಾರು ಚಾಲಕ..!

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದ್ದು, ಟೆಕ್ ಲೈನ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಮತ್ತು ಜಿಟಿ ಲೈನ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್, ಜಿಟಿಕೆ ಪ್ಲಸ್ ಎಎಂಟಿ ವೆರಿಯೆಂಟ್‌ಗಳಲ್ಲಿ ಲಭ್ಯವಿವೆ.

MOST READ: ಕಾರ್ ರೀಪೆರಿಗೆ 3 ಲಕ್ಷ ಕೇಳಿದ್ದ ಡೀಲರ್ಸ್ ಅಸಲಿಯತ್ತು ಬಯಲಾಗಿದ್ದು ಲೋಕಲ್ ಗ್ಯಾರೇಜ್‌ನಲ್ಲಿ..!

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಸೆಲ್ಟೊಸ್ ಕಾರುಗಳು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷ ಆರಂಭಿಕ ಮತ್ತು ಟಾಪ್ ಎಂಡ್ ಮಾದರಿಯು ರೂ.16.99 ಲಕ್ಷ ಬೆಲೆಯನ್ನು ಹೊಂದಿದ್ದು, ಟೆಕ್ ಲೈನ್‌ ಕಾರು ಮಾದರಿಗಳು ಸಾಮಾನ್ಯ ಚಾಲನಾ ತಂತ್ರಜ್ಞಾನ ಹೊಂದಿದ್ದರೆ ಜಿಟಿ ಲೈನ್‌ ಕಾರುಗಳು ಸಾಮಾನ್ಯ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ವೈಶಿಷ್ಟ್ಯತೆ ಹೊಂದಿವೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಭಾರೀ ನೀರಿಕ್ಷೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಕಾರು ಮಾರಾಟವನ್ನು ಆರಂಭಿಸಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಆರ್ಥಿಕ ಸಂಕಷ್ಟದ ನಡುವೆಯೂ ಸೆಲ್ಟೊಸ್ ಮಾರಾಟದಲ್ಲಿ ಹೊಸ ದಾಖಲೆಗೆ ಸಾಕ್ಷಿಯಾಗಿದ್ದು, ಸೆಪ್ಟೆಂಬರ್ 22ರಿಂದ 31ರ ಒಳಗೆ ಬರೋಬ್ಬರಿ 6,200 ಕಾರುಗಳನ್ನು ಮಾರಾಟ ಮಾಡುವ ಮೂಲಕ ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗಾಗಿ ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೆಲ್ಟೊಸ್ ನಾಮಿನೆಟ್

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

Most Read Articles

Kannada
English summary
Kia Seltos & Hyundai Venue Nominated For The 2020 World Car of The Year Award.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X