ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಸುಮಾರು ಮೂರು ವರ್ಷಗಳ ಸತತ ಪರಿಶ್ರಮದೊಂದಿಗೆ ಕಾರು ಮಾರಾಟ ಜಾಲವನ್ನು ಅಚ್ಚುಕಟ್ಟಾಗಿ ಹೆಣೆದಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಪ್ರವೇಶಿಸಿದ್ದು, ಇದೀಗ ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಮೊದಲ ದಿನದಿಂದಲೂ ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದ ಸೆಲ್ಟೊಸ್ ಕಾರು ಗ್ರಾಹಕರ ನೀರಿಕ್ಷೆಯೆಂತೆಯೇ ಆಕರ್ಷಕ ಬೆಲೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಪ್ರೀಮಿಯಂ ಸೌಲಭ್ಯಗಳೊಂದಿಗೆ ಸ್ಪೋರ್ಟಿ ಲುಕ್‌ ಮತ್ತು ಬಲಿಷ್ಠ ಬಾಡಿ ಕಿಟ್ ಹೊಂದಿರುವ ಸೆಲ್ಟೊಸ್ ಕಾರು ಒಟ್ಟು ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಾಗಿದೆ. ಸಾಮಾನ್ಯ ಕಾರು ಖರೀದಿದಾರರಿಗೆ ಟೆಕ್ ಲೈನ್ ಮತ್ತು ಸ್ಪೋರ್ಟಿ ಕಾರು ಪ್ರಿಯರಿಗೆ ಜಿಟಿ ಲೈನ್ ಮಾದರಿಯನ್ನು ಖರೀದಿ ಮಾಡಬಹುದುದಾಗಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಸೆಲ್ಟೊಸ್ ಕಾರುಗಳು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 15.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಿದ್ದು, ಟೆಕ್ ಲೈನ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್ ಖರೀದಿ ಲಭ್ಯವಾದಲ್ಲಿ ಜಿಟಿ ಲೈನ್‌ನಲ್ಲಿ ಕೇವಲ ಪೆಟ್ರೋಲ್ ಆವೃತ್ತಿ ಮಾತ್ರವೇ ಖರೀದಿಗೆ ಲಭ್ಯವಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 5 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 8 ವೆರಿಯೆಂಟ್‌ಗಳನ್ನು ಹೊಂದಿದ್ದು, ಟೆಕ್ ಲೈನ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಮತ್ತು ಜಿಟಿ ಲೈನ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್ ಲಭ್ಯವಿವೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗೆ ಅನ್ವಯದಂತೆ ಕಿಯಾ ಸೆಲ್ಟೊಸ್ ಕಾರು ಸುಧಾರಿತ ಎಂಜಿನ್ ಮಾದರಿಯನ್ನು ಪಡೆದುಕೊಂಡಿದ್ದು, ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆಯ ಜೊತೆಗೆ ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಹೀಗಾಗಿ ಇದು ದೇಶದಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಬಿಎಸ್-6 ನಿಯಮವನ್ನು ಡೆಡ್‌ಲೈನ್‌ಗೂ ಮುನ್ನವೇ ಪರಿಚಯಿಸಿದ ಮೊದಲ ಕಾರು ಉತ್ಪಾದನಾ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಕಿಯಾ ಸೆಲ್ಟೊಸ್ ಕಾರುಗಳ ವೆರಿಯೆಂಟ್ ಮತ್ತು ಬೆಲೆ ಪಟ್ಟಿ(ಎಕ್ಸ್‌ಶೋರೂಂ ಪ್ರಕಾರ)

ವೆರಿಯೆಂಟ್ 1.5-ಲೀಟರ್ ಪೆಟ್ರೋಲ್ 1.5-ಲೀಟರ್ ಡೀಸೆಲ್ 1.4 ಟಿ-ಜಿಡಿಐ ಪೆಟ್ರೋಲ್
ಹೆಚ್‌ಟಿಇ ರೂ. 9.69 ಲಕ್ಷ ರೂ. 9.99 ಲಕ್ಷ -
ಹೆಚ್‌ಟಿಕೆ ರೂ. 9.99 ಲಕ್ಷ ರೂ. 11.19 ಲಕ್ಷ -
ಹೆಚ್‌ಟಿಕೆ ಪ್ಲಸ್ ರೂ. 11.99 ಲಕ್ಷ ರೂ. 12.19 ಲಕ್ಷ -
ಹೆಚ್‌ಟಿಕೆ ಪ್ಲಸ್ (6-ಸ್ಪೀಡ್ ಎಟಿ) - ರೂ. 13.19 ಲಕ್ಷ -
ಹೆಚ್‌ಟಿಎಕ್ಸ್ ರೂ. 12.79 ಲಕ್ಷ ರೂ. 13.79 ಲಕ್ಷ -
ಹೆಚ್‌ಟಿಎಕ್ಸ್(ಐವಿಟಿ) ರೂ. 13.79 ಲಕ್ಷ - -
ಹೆಚ್‌ಟಿಎಕ್ಸ್ ಪ್ಲಸ್ - ರೂ. 14.99 ಲಕ್ಷ -
ಹೆಚ್‌ಟಿಎಕ್ಸ್ ಪ್ಲಸ್(6-ಸ್ಪೀಡ್ ಎಟಿ) - ರೂ. 15.99 ಲಕ್ಷ -
ಜಿಟಿಕೆ - - ರೂ. 13.49 ಲಕ್ಷ
ಜಿಟಿಎಕ್ಸ್ - - ರೂ. 14.99 ಲಕ್ಷ
ಜಿಟಿಎಕ್ಸ್ (7 ಸ್ಪೀಡ್ ಡಿಸಿಟಿ) - - ರೂ. 15.99 ಲಕ್ಷ
ಜಿಟಿಎಕ್ಸ್ ಪ್ಲಸ್ - - ರೂ. 15.99 ಲಕ್ಷ
ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಎಂಜಿನ್ ಸಾಮರ್ಥ್ಯ

ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ನೀಡಲಾಗಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ನೀಡಲಾಗಿದೆ. ಇದರಲ್ಲಿ ಟೆಕ್ ಲೈನ್ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಯು 115-ಬಿಎಚ್‌ಪಿಯೊಂದಿಗೆ 250-ಎನ್ಎಂ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 138-ಬಿಎಚ್‌ಪಿ ಮತ್ತು 242-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಸೆಲ್ಟೊಸ್ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಪೆಟ್ರೋಲ್ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಇನ್ನು ಸೆಲ್ಟೊಸ್ ಕಾರು ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಹಾಗೆಯೇ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಖರೀದಿಗೆ ಲಭ್ಯವಿರುವ ಬಣ್ಣಗಳು

ಸಿಂಗಲ್ ಟೋನ್ ಮತ್ತು ಡ್ಯುಯಲ್ ಟೋನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುವ ಸೆಲ್ಟೊಸ್ ಕಾರು ರೆಡ್, ಆರೇಂಜ್, ಗ್ಲ್ಯಾಸಿಯರ್ ವೈಟ್ ಕ್ಲಿಯರ್ ವೈಟ್, ಗ್ರೇ, ಸಿಲ್ವರ್ ಮತ್ತು ಬ್ಲ್ಯೂ ಆ್ಯಂಡ್ ಬ್ಲ್ಯಾಕ್ ಡ್ಯುಯಲ್ ಟೋನ್ ಆಯ್ಕೆ ಹೊಂದಿದೆ.

ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!

ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಸೆಲ್ಟೊಸ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

Most Read Articles

Kannada
English summary
Kia Seltos Launched In India With Prices Starting At Rs 9.69 Lakh. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more