Just In
- 21 min ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 37 min ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 1 hr ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 2 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Movies Shrirasthu Shubhamasthu:ದೀಪಿಕಾಗೆ ಉತ್ತರ ಕೊಡೋಕೆ ಆಗ್ತಿಲ್ಲ; ಇತ್ತ ಹೆಂಡತಿಗೆ ಸಮಾಧಾನ ಮಾಡೋಕೆ ಆಗ್ತಿಲ್ಲ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!
ಸುಮಾರು ಮೂರು ವರ್ಷಗಳ ಸತತ ಪರಿಶ್ರಮದೊಂದಿಗೆ ಕಾರು ಮಾರಾಟ ಜಾಲವನ್ನು ಅಚ್ಚುಕಟ್ಟಾಗಿ ಹೆಣೆದಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಪ್ರವೇಶಿಸಿದ್ದು, ಇದೀಗ ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದೆ.
ಮೊದಲ ದಿನದಿಂದಲೂ ಕಂಪ್ಯಾಕ್ಟ್ ಎಸ್ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದ ಸೆಲ್ಟೊಸ್ ಕಾರು ಗ್ರಾಹಕರ ನೀರಿಕ್ಷೆಯೆಂತೆಯೇ ಆಕರ್ಷಕ ಬೆಲೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಪ್ರೀಮಿಯಂ ಸೌಲಭ್ಯಗಳೊಂದಿಗೆ ಸ್ಪೋರ್ಟಿ ಲುಕ್ ಮತ್ತು ಬಲಿಷ್ಠ ಬಾಡಿ ಕಿಟ್ ಹೊಂದಿರುವ ಸೆಲ್ಟೊಸ್ ಕಾರು ಒಟ್ಟು ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಾಗಿದೆ. ಸಾಮಾನ್ಯ ಕಾರು ಖರೀದಿದಾರರಿಗೆ ಟೆಕ್ ಲೈನ್ ಮತ್ತು ಸ್ಪೋರ್ಟಿ ಕಾರು ಪ್ರಿಯರಿಗೆ ಜಿಟಿ ಲೈನ್ ಮಾದರಿಯನ್ನು ಖರೀದಿ ಮಾಡಬಹುದುದಾಗಿದೆ.
ಸೆಲ್ಟೊಸ್ ಕಾರುಗಳು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 15.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಿದ್ದು, ಟೆಕ್ ಲೈನ್ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್ ಖರೀದಿ ಲಭ್ಯವಾದಲ್ಲಿ ಜಿಟಿ ಲೈನ್ನಲ್ಲಿ ಕೇವಲ ಪೆಟ್ರೋಲ್ ಆವೃತ್ತಿ ಮಾತ್ರವೇ ಖರೀದಿಗೆ ಲಭ್ಯವಿದೆ.
ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್ನಲ್ಲಿ ಒಟ್ಟು 5 ವೆರಿಯೆಂಟ್ಗಳನ್ನು ಮತ್ತು ಪೆಟ್ರೋಲ್ ಎಂಜಿನ್ನಲ್ಲಿ 8 ವೆರಿಯೆಂಟ್ಗಳನ್ನು ಹೊಂದಿದ್ದು, ಟೆಕ್ ಲೈನ್ನಲ್ಲಿ ಹೆಚ್ಟಿಇ, ಹೆಚ್ಟಿಕೆ, ಹೆಚ್ಟಿಕೆ ಪ್ಲಸ್, ಹೆಚ್ಟಿಎಕ್ಸ್, ಹೆಚ್ಟಿಎಕ್ಸ್ ಪ್ಲಸ್ ಮತ್ತು ಜಿಟಿ ಲೈನ್ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್ ಲಭ್ಯವಿವೆ.
2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗೆ ಅನ್ವಯದಂತೆ ಕಿಯಾ ಸೆಲ್ಟೊಸ್ ಕಾರು ಸುಧಾರಿತ ಎಂಜಿನ್ ಮಾದರಿಯನ್ನು ಪಡೆದುಕೊಂಡಿದ್ದು, ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆಯ ಜೊತೆಗೆ ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಹೀಗಾಗಿ ಇದು ದೇಶದಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಬಿಎಸ್-6 ನಿಯಮವನ್ನು ಡೆಡ್ಲೈನ್ಗೂ ಮುನ್ನವೇ ಪರಿಚಯಿಸಿದ ಮೊದಲ ಕಾರು ಉತ್ಪಾದನಾ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಕಿಯಾ ಸೆಲ್ಟೊಸ್ ಕಾರುಗಳ ವೆರಿಯೆಂಟ್ ಮತ್ತು ಬೆಲೆ ಪಟ್ಟಿ(ಎಕ್ಸ್ಶೋರೂಂ ಪ್ರಕಾರ)
ವೆರಿಯೆಂಟ್ | 1.5-ಲೀಟರ್ ಪೆಟ್ರೋಲ್ | 1.5-ಲೀಟರ್ ಡೀಸೆಲ್ | 1.4 ಟಿ-ಜಿಡಿಐ ಪೆಟ್ರೋಲ್ |
ಹೆಚ್ಟಿಇ | ರೂ. 9.69 ಲಕ್ಷ | ರೂ. 9.99 ಲಕ್ಷ | - |
ಹೆಚ್ಟಿಕೆ | ರೂ. 9.99 ಲಕ್ಷ | ರೂ. 11.19 ಲಕ್ಷ | - |
ಹೆಚ್ಟಿಕೆ ಪ್ಲಸ್ | ರೂ. 11.99 ಲಕ್ಷ | ರೂ. 12.19 ಲಕ್ಷ | - |
ಹೆಚ್ಟಿಕೆ ಪ್ಲಸ್ (6-ಸ್ಪೀಡ್ ಎಟಿ) | - | ರೂ. 13.19 ಲಕ್ಷ | - |
ಹೆಚ್ಟಿಎಕ್ಸ್ | ರೂ. 12.79 ಲಕ್ಷ | ರೂ. 13.79 ಲಕ್ಷ | - |
ಹೆಚ್ಟಿಎಕ್ಸ್(ಐವಿಟಿ) | ರೂ. 13.79 ಲಕ್ಷ | - | - |
ಹೆಚ್ಟಿಎಕ್ಸ್ ಪ್ಲಸ್ | - | ರೂ. 14.99 ಲಕ್ಷ | - |
ಹೆಚ್ಟಿಎಕ್ಸ್ ಪ್ಲಸ್(6-ಸ್ಪೀಡ್ ಎಟಿ) | - | ರೂ. 15.99 ಲಕ್ಷ | - |
ಜಿಟಿಕೆ | - | - | ರೂ. 13.49 ಲಕ್ಷ |
ಜಿಟಿಎಕ್ಸ್ | - | - | ರೂ. 14.99 ಲಕ್ಷ |
ಜಿಟಿಎಕ್ಸ್ (7 ಸ್ಪೀಡ್ ಡಿಸಿಟಿ) | - | - | ರೂ. 15.99 ಲಕ್ಷ |
ಜಿಟಿಎಕ್ಸ್ ಪ್ಲಸ್ | - | - | ರೂ. 15.99 ಲಕ್ಷ |
ಎಂಜಿನ್ ಸಾಮರ್ಥ್ಯ
ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸಿಆರ್ಡಿಐ ಡೀಸೆಲ್ ಎಂಜಿನ್ ನೀಡಲಾಗಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ನೀಡಲಾಗಿದೆ. ಇದರಲ್ಲಿ ಟೆಕ್ ಲೈನ್ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಯು 115-ಬಿಎಚ್ಪಿಯೊಂದಿಗೆ 250-ಎನ್ಎಂ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 138-ಬಿಎಚ್ಪಿ ಮತ್ತು 242-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಸೆಲ್ಟೊಸ್ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಪೆಟ್ರೋಲ್ ಎಂಜಿನ್ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ಹೊಂದಿದೆ.
ಇನ್ನು ಸೆಲ್ಟೊಸ್ ಕಾರು ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.
ಹಾಗೆಯೇ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.
ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.
ಹೈ ಎಂಡ್ ವೆರಿಯೆಂಟ್ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.
ಸುರಕ್ಷಾ ಸೌಲಭ್ಯಗಳು
ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಎಸ್ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.
ಕಾರಿನ ಉದ್ದಳತೆ
ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್ಯುವಿ ಪ್ರಿಯರನ್ನು ಸೆಳೆಯಲಿದೆ.
ಖರೀದಿಗೆ ಲಭ್ಯವಿರುವ ಬಣ್ಣಗಳು
ಸಿಂಗಲ್ ಟೋನ್ ಮತ್ತು ಡ್ಯುಯಲ್ ಟೋನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುವ ಸೆಲ್ಟೊಸ್ ಕಾರು ರೆಡ್, ಆರೇಂಜ್, ಗ್ಲ್ಯಾಸಿಯರ್ ವೈಟ್ ಕ್ಲಿಯರ್ ವೈಟ್, ಗ್ರೇ, ಸಿಲ್ವರ್ ಮತ್ತು ಬ್ಲ್ಯೂ ಆ್ಯಂಡ್ ಬ್ಲ್ಯಾಕ್ ಡ್ಯುಯಲ್ ಟೋನ್ ಆಯ್ಕೆ ಹೊಂದಿದೆ.
ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಸೆಲ್ಟೊಸ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.