ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದು, ನವೆಂಬರ್ ಅವಧಿಯ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆಯೊಂದಿಗೆ ನಂ.1 ಸ್ಥಾನಕ್ಕೇರಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಕಳೆದ ಎರಡು ತಿಂಗಳಿನಿಂದ ಕಾರು ಮಾರಾಟದಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಕಿಯಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಕಾರಿನ ಉತ್ಪಾದನೆಯನ್ನು ಹೆಚ್ಚಿಸಿದ್ದು, ಬುಕ್ಕಿಂಗ್ ಮಾಡಿದ ಒಂದೇ ವಾರದಲ್ಲಿ ಹೊಸ ಕಾರನ್ನು ವಿತರಣೆ ಮಾಡುವ ಭರವಸೆ ನೀಡುತ್ತಿದೆ. ಇದರಿಂದ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಇತರೆ ಕಾರು ಉತ್ಪಾದನಾ ಸಂಸ್ಥೆಗಳಿಗಿಂತಲೂ ಅತಿ ಕಡಿಮೆ ಕಾಯುವಿಕೆ ಅವಧಿಯೊಂದಿಗೆ ಭರ್ಜರಿ ಮಾರಾಟ ದಾಖಲಿಸುತ್ತಿದ್ದು, ನವೆಂಬರ್ ಅವಧಿಯಲ್ಲಿ 14,005 ಯುನಿಟ್ ಮಾರಾಟ ಮಾಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 6 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 9 ವೆರಿಯೆಂಟ್‌ಗಳನ್ನು ಹೊಂದಿದೆ. ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ಗಸ್ತು ನಿರ್ವಹಣೆಗಾಗಿ ಮತ್ತೊಂದು ಅತ್ಯಾಧುನಿಕ ಕಾರು ಖರೀದಿಸಲಿದ್ದಾರೆ ದುಬೈ ಪೊಲೀಸರು..!

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

MOST READ: ದುಬಾರಿ ಕಾರಿನ ಟ್ಯಾಕ್ಸ್ ಉಳಿಸಲು ಈತ ಮಾಡಿದ್ದೇನು ಗೊತ್ತಾ?

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಕಿಯಾ ಸೆಲ್ಟೊಸ್ ಇದೀಗ ನಂ.1

ಜನವರಿ 1ರಿಂದ ಸೆಲ್ಟೊಸ್ ಮತ್ತಷ್ಟು ದುಬಾರಿ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ನಂ.1 ಸ್ಥಾನಕ್ಕೇರಿರುವ ಸೆಲ್ಟೊಸ್ ಕಾರು ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ದುಬಾರಿ ಬೆಲೆ ಪಡೆದುಕೊಳ್ಳುತ್ತಿದ್ದು, ಜನವರಿ 1ರ ನಂತರ ಸೆಲ್ಟೊಸ್ ಖರೀದಿಸುವ ಗ್ರಾಹಕರು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೆಲೆಗಿಂತ ರೂ.50 ಸಾವಿರದಿಂದ ರೂ.70 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

Most Read Articles

Kannada
English summary
Kia Motors India retails 14,005 units of Seltos in November2019. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X