ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಕಿಯಾ ಮೋಟಾರ್ಸ್ ಇಂಡಿಯಾ ಕಳೆದ ಆಗಸ್ಟ್ ತಿಂಗಳಲ್ಲಿ ಭಾರತದಲ್ಲಿ ಸೆಲ್ಟೋಸ್ ಎಸ್‍‍‍ಯುವಿಯನ್ನು ಬಿಡುಗಡೆಗೊಳಿಸಿತ್ತು. ಸದ್ಯಕ್ಕೆ ಕಿಯಾ ಸೆಲ್ಟೋಸ್ ಎಸ್‍ಯು‍ವಿಯ ಪ್ರಾರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.9.69 ಲಕ್ಷಗಳಾಗಿದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಮುಂದಿನ ವರ್ಷದ ಜನವರಿಯಿಂದ ಕಿಯಾ ಸೆಲ್ಟೋಸ್ ದುಬಾರಿಯಾಗಲಿದೆ. ಮೂಲಗಳ ವರದಿಯ ಪ್ರಕಾರ ಕಿಯಾ ಸೆಲ್ಟೋಸ್ ಬೆಲೆ ಏರಿಕೆ ಬಹುತೇಕ ಖಚಿತವಾಗಿದೆ. ಮುಂದಿನ ವರ್ಷದ ಜನವರಿ 1ರಿಂದ ಬೆಲೆ ಏರಿಕೆಯಾಗಲಿದೆ.ಕಿಯಾ ಸೆಲ್ಟೋಸ್ ಎಸ್‍‍ಯುವಿಯ ಮಾದರಿಗಳನ್ನು ಅವಲಂಬಿಸಿ ಬೆಲೆಗಳನ್ನು ರೂ.50,000 ದಿಂದ 70,000ಗಳವರೆಗೆ ಹೆಚ್ಚಿಸಬಹುದು ಎಂದು ಮೂಲಗಳು ತಿಳಿಸಿವೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

2020ರ ಜನವರಿ 1 ರಂದು ಅಥವಾ ನಂತರದಲ್ಲಿ ಹೊಸ ಕಿಯಾ ಸೆಲ್ಟೋಸ್ ಖರೀದಿಸುವಾಗ ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಈ ವರ್ಷದ ಡಿಸೆಂಬರ್‍‍ವರೆಗೆ ಕಿಯಾ ಸೆಲ್ಟೋಸ್ ಎಸ್‍‍ಯುವಿಯ ವಿತರಣೆಯನ್ನು ಪಡೆಯುವ ಗ್ರಾಹಕರಿಗೆ ಬೆಲೆ ಏರಿಕೆಯು ಯಾವುದೇ ಪರಿಣಾಮ ಬೀರುವುದಿಲ್ಲ. ಕಿಯಾ ಸೆಲ್ಟೋಸ್ ಬೆಲೆ ಏರಿಕೆಗೆ ಕಾರಣ ದೇಶಿಯ ಮಾರುಕಟ್ಟೆಯಲ್ಲಿ ಎಸ್‍‍ಯುವಿಯ ಪರಿಚಯಾತ್ಮಕ ಅವಧಿಯು ಅಂತ್ಯವಾಗಿದೆ ಎಂದು ನಮ್ಮ ಮೂಲಗಳು ಖಚಿತಪಡಿಸಿದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಕಂಪನಿಯು ಬೆಲೆಗಳನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಭಾರತದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಗೆ ಭಾರೀ ಬೇಡಿಕೆಯಿಂದಾಗಿ ಬೆಲೆ ಏರಿಕೆ ವಿಳಂಬವಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಕೊರಿಯಾದ ಕಾರು ತಯಾರಕರಿಂದ ಬಿಡುಗಡೆಯಾದ ಮೊದಲ ಕಾರು ಕಿಯಾ ಸೆಲ್ಟೋಸ್ ಆಗಿದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಕಿಯಾ ಸೆಲ್ಟೋಸ್ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾದಾಗಿನಿಂದ ಎಸ್‍‍ಯುವಿ ಸೆಗ್‍‍ಮೆಂಟ್‍‍ನಲ್ಲಿ ಹೆಚ್ಚು ಮಾರಾಟವಾಗುವ ಎಸ್‍‍ಯುವಿ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಕಿಯಾ ಸೆಲ್ಟೋಸ್ ಹಿಂದಿನ ತಿಂಗಳಲ್ಲಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟೆಯಲ್ಲಿ 12,000 ಯುನಿ‍‍‍ಟ್‍ಗಳು ಮಾರಾಟವಾಗುವ ಮೂಲಕ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಕಿಯಾ ಸೆಲ್ಟೋಸ್‍ ಎಸ್‍‍ಯು‍ವಿಯನ್ನು ಬಿಎಸ್-6 ಎಂಜಿನ್‍‍ನ ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್ , 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‍‍ಗಳು ಸೇರಿವೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಎಸ್‍‍ಯು‍ವಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿ‍ಎಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಎಲ್ಲಾ ಎಂಜಿನ್‍ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿ‍ಟಿ, 1.5 ಲೀಟರ್ ಡೀಸೆಲ್‍ಗೆ ಐವಿ‍ಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಎಸ್‍ಯುವಿಯ ಸುರಕ್ಷತಾ ಫೀಚರ್ಸ್‍‍ಗಳು

ಕಿಯಾ ಸೆಲ್ಟೋಸ್ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನದ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ಎಸ್‍‍ಯು‍ವಿಯ ಫೀಚರ್ಸ್‍‍ಗಳು

ಸೆಲ್ಟೋಸ್‍‍ನ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಅಡ್ಜಸ್ಟ್ ಮಾಡಬಹುದಾದ ಚಾಲಕನ ಸೀಟು, ರೇರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಅನ್ನು ಅಳವಡಿಸಲಾಗಿದೆ.

ದುಬಾರಿಯಾಗಲಿದೆ ಬಹುಬೇಡಿಕೆಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದ ಕಿಯಾ ಸೆಲ್ಟೊಸ್ ದೇಶಿಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Kia Seltos Price Hike From January 2020: Prices To Increase By Up To Rs 70,000 - Read in Kannada
Story first published: Thursday, November 28, 2019, 12:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X