ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ದಕ್ಷಿಣ ಕೊರಿಯಾ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಕಿಯಾ ಮೋಟಾರ್ಸ್ ಭಾರೀ ನೀರಿಕ್ಷೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲೂ ತನ್ನ ಕಾರ್ಯಾಚರಣೆ ಆರಂಭಿಸಿದ್ದು, ಅಗಸ್ಟ್ 22ರಂದು ಬಿಡುಗಡೆಯಾಗಲಿರುವ ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯ ಮೊದಲ ಉತ್ಪಾದನಾ ಆವೃತ್ತಿಯನ್ನು ಇಂದು ಅಧಿಕೃತವಾಗಿ ಅನಾವರಣಗೊಳಿಸಲಾಯ್ತು.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಪೆನುಗೊಂಡ ಬಳಿಯಿರುವ ಕಿಯಾ ಕಾರು ಉತ್ಪಾದನಾ ಘಟಕದಲ್ಲಿ ಸೆಲ್ಟೊಸ್ ಉತ್ಪಾದನಾ ಆವೃತ್ತಿ ಅನಾವರಣಗೊಳಿಸಲಾಗಿದ್ದು, ಹೊಸ ಕಾರು ಅನಾವರಣ ಕಾರ್ಯಾಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಕಿಯಾ ಅಬಾಂಸಿಡರ್ ಶಿನ್ ಬೊಂಗ್-ಕಿಲ್, ಕಿಯಾ ಮೋಟಾರ್ಸ್ ಇಂಡಿಯಾ ಮುಖ್ಯಸ್ಥ ಕೂಕ್‌ಯೂಮ್ ಶಿಮ್ ಮತ್ತು ಆಂಧ್ರಪ್ರದೇಶ ಸರ್ಕಾರದ ಜನಪ್ರತಿನಿಧಿಗಳು ಸಹ ಸೆಲ್ಟೊಸ್ ಕಾರು ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಕಿಯಾ ಕಾರು ಉತ್ಪಾದನಾ ಘಟಕವು ವಾರ್ಷಿಕವಾಗಿ ಬರೋಬ್ಬರಿ 3 ಲಕ್ಷ ಕಾರುಗಳನ್ನು ಉತ್ಪಾದನೆ ಮಾಡುವ ಸಾಮಾರ್ಥ್ಯವನ್ನು ಹೊಂದಿದ್ದು, ಇದಕ್ಕಾಗಿ ಬರೋಬ್ಬರಿ 7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ. ಗ್ರಾಹಕರ ಬೇಡಿಕೆಯೆಂತೆ ಕೈಗೆಟುಕುವ ಬೆಲೆಗಳಲ್ಲಿ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆ ಮಾಡಲಿರುವ ಕಿಯಾ ಸಂಸ್ಥೆಯು ಮೊದಲ ಹಂತವಾಗಿ ಸೆಲ್ಟೊಸ್ ಮತ್ತು ವಿವಿಧ ನಮೂನೆ ಕಾರುಗಳನ್ನು ರಸ್ತೆಗಿಳಿಸುವ ತವಕದಲ್ಲಿದೆ.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಕಿಯಾ ಸೆಲ್ಟೊಸ್ ಕಾರು ಟೆಕ್-ಲೈನ್ ಮತ್ತು ಜಿಟಿ-ಲೈನ್ ಎನ್ನುವ ಪ್ರಮುಖ ಎರಡು ಮಾದರಿಯಲ್ಲಿ ಮಾರಾಟವಾಗಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಎರಡೂ ಎಂಜಿನ್‌ ಮಾದರಿಗಳಲ್ಲೂ ಖರೀದಿ ಲಭ್ಯವಾಗಲಿದೆ. ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ 5 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 3 ವೆರಿಯೆಂಟ್‌ಗಳನ್ನು ಹೊಂದಿದ್ದು, ಪೆಟ್ರೋಲ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್‌ ಖರೀದಿಗೆ ಲಭ್ಯವಿದ್ದಲ್ಲಿ ಡೀಸೆಲ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳನ್ನು ಖರೀದಿಸಬಹುದಾಗಿದೆಯೆಂತೆ.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಪ್ರೀಮಿಯಂ ವಿಭಾಗದಲ್ಲಿ ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ವರ್ಷನ್ ಕೂಡಾ ಖರೀದಿ ಮಾಡಬಹುದಾಗಿದೆ. ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿರಲಿದೆ.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಸೆಲ್ಟೊಸ್ ಕಾರಿನಲ್ಲಿ ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಹಾಗೆಯೇ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

MOST READ: ಸಂಕಷ್ಟದಲ್ಲಿ ಆಟೋ ಉದ್ಯಮ- ಕಾರು ಉತ್ಪಾದನೆಗೆ ಬ್ರೇಕ್ ಹಾಕಿದ ಮಾರುತಿ ಸುಜುಕಿ..!

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಮತ್ತು ಡ್ಯುಯಲ್ ಸನ್‌ರೂಫ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ. ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಸುರಕ್ಷಾ ಸೌಲಭ್ಯಗಳು

ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

MOST READ: ನಮ್ಮ ಬೆಂಗಳೂರಿನಲ್ಲಿ ಅನಾವರಣಗೊಂಡ ಬಹುನೀರಿಕ್ಷಿತ ಕಿಯಾ ಸೆಲ್ಟೊಸ್!

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಖರೀದಿಗೆ ಲಭ್ಯವಾಗುವ ಬಣ್ಣಗಳು

ಸೆಲ್ಟೊಸ್ ಕಾರು ರೆಡ್, ಆರೇಂಜ್, ಗ್ಲ್ಯಾಸೆರ್ ವೈಟ್, ಕ್ಲಿಯರ್ ವೈಟ್, ಗ್ರೇ, ಸಿಲ್ವರ್, ಬ್ಲ್ಯೂ ಮತ್ತು ಬ್ಲ್ಯಾಕ್ ಸಿಂಗಲ್ ಟೋನ್ ಬಣ್ಣಗಳ ಜೊತೆಗೆ ರೆಡ್/ಬ್ಲ್ಯಾಕ್, ಗ್ಲ್ಯಾಸೆರ್ ವೈಟ್/ಬ್ಲ್ಯಾಕ್, ಗ್ಲ್ಯಾಸೆರ್ ವೈಟ್/ ಆರೇಂಜ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಒಟ್ಟಿನಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಅತ್ಯುತ್ತಮ ಮಾದರಿಯಾಗಲಿರುವ ಕಿಯಾ ಸೆಲ್ಟೊಸ್ ಕಾರು ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಎಸ್‌ಯುವಿ ಮಾದರಿಗೂ ಈ ಕಾರು ಉತ್ತಮ ಪೈಪೋಟಿಯಾಗುವ ನೀರಿಕ್ಷೆಯಲ್ಲಿದೆ.

ಅದ್ಧೂರಿಯಾಗಿ ಅನಾವರಣಗೊಂಡ ಕಿಯಾ ಸೆಲ್ಟೊಸ್ ಮೊದಲ ಉತ್ಪಾದನಾ ಆವೃತ್ತಿ

ಕಾರಿನ ಬೆಲೆಗಳು(ಅಂದಾಜು)

ಹೊಸ ಕಾರಿನಲ್ಲಿ ಒದಗಿಸಲಾಗಿರುವ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಸೆಲ್ಟೊಸ್ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.14.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಲಿವೆ ಎನ್ನಲಾಗಿದ್ದು, ಮಧ್ಯಮ ಕ್ರಮಾಂಕರ ಎಸ್‌ಯುವಿಯಲ್ಲಿ ಅತ್ಯುತ್ತಮ ಕಾರು ಮಾದರಿಯಾಗಿ ಸದ್ದು ಮಾಡಲಿದೆ.

Most Read Articles

Kannada
English summary
Kia Motors Begins Production Of Seltos In India: Rolls-Out First SUV From Factory Floor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X