ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಕಿಯಾ ಮೋಟಾರ್ಸ್, ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಆಗಸ್ಟ್ 22ರಂದು ಬಿಡುಗಡೆಗೊಳಿಸಿತ್ತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ 6,200 ಯುನಿಟ್‌ಗಳ ಮಾರಾಟವಾಗಿ ಹೊಸ ದಾಖಲೆ ನಿರ್ಮಿಸಿದೆ.

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಸೆಲ್ಟೋಸ್‌ನ ಮಾರಾಟ ಪ್ರಮಾಣವು ಕಿಯಾ ಮೋಟಾರ್ಸ್ ಅನ್ನು ಭಾರತದ ಅತ್ಯುತ್ತಮ ಚೊಚ್ಚಲ ವಾಹನ ತಯಾರಕ ಕಂಪನಿಯನ್ನಾಗಿ ಮಾಡಲಿದೆ. ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭಾರತದ ಯಾವುದೇ ಕಂಪನಿಯು ಇದುವರೆಗೂ 6,200 ಯುನಿಟ್ ವಾಹನಗಳನ್ನು ಮಾರಾಟ ಮಾಡಿರಲಿಲ್ಲ. ಸೆಲ್ಟೋಸ್ ಎಸ್‍‍ಯುವಿಯ ಆರಂಭಿಕ ಬೆಲೆಯು ರೂ.9.69 ಲಕ್ಷಗಳಾಗಿದೆ. ಮಾರಾಟದಲ್ಲಿ ಸೆಲ್ಟೋಸ್ ಎಸ್‍‍ಯುವಿ ಹ್ಯುಂಡೈ ಕ್ರೆಟಾವನ್ನು ಹಿಂದಿಕ್ಕಿದೆ.

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಬಿಡುಗಡೆಯಾದ ಮೊದಲ ತಿಂಗಳಲ್ಲಿ ಕ್ರೆಟಾ ಎಸ್‍‍ಯುವಿಯನ್ನು ಹಿಂದಿಕ್ಕಿದೆ. ಕ್ರೆಟಾ ಎಸ್‍‍ಯುವಿ ತನ್ನದೇ ಕಂಪನಿಯ ಹ್ಯುಂಡೈ ವೆನ್ಯೂ ಎಸ್‍‍ಯುವಿಯಿಂದ ತೀವ್ರ ಸ್ಪರ್ಧೆಯನ್ನು ಎದುರಿಸುತ್ತಿದೆ. ಇದರ ಜೊತೆಗೆ ಟಾಟಾ ಹ್ಯಾರಿಯರ್ ಹಾಗೂ ಎಂಜಿ ಹೆಕ್ಟರ್ ಎಸ್‍‍ಯುವಿಗಳಿಂದ ಪೈಪೋಟಿಯನ್ನು ಎದುರಿಸುತ್ತಿದೆ.

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

2019ರ ಆಗಸ್ಟ್ ತಿಂಗಳಿನಲ್ಲಿ ಕ್ರೆಟಾದ ಎಷ್ಟು ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂಬುದನ್ನು ಕಾದು ನೋಡಬೇಕಿದೆ. ಕಿಯಾ ಸೆಲ್ಟೋಸ್ ಹೆಚ್ಚಿನ ಬೇಡಿಕೆಯನ್ನು ಪಡೆದಿದೆ. ಈಗಾಗಲೇ 25,000ಕ್ಕೂ ಹೆಚ್ಚು ಬುಕ್ಕಿಂಗ್‍‍ಗಳನ್ನು ಮಾಡಲಾಗಿದೆ. ಇದರಿಂದಾಗಿ ಆಂಧ್ರಪ್ರದೇಶದ ಅನಂತಪುರದಲ್ಲಿರುವ ಕಿಯಾ ಮೋಟಾರ್ಸ್ ಉತ್ಪಾದನಾ ಘಟಕದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಸುವ ಒತ್ತಡ ಎದುರಾಗಲಿದೆ.

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ವೇಟಿಂಗ್ ಪಿರಿಯಡ್‍‍ಗಳನ್ನು ಸಮರ್ಥವಾಗಿ ನಿಭಾಯಿಸಲು, ಕಿಯಾ ಮೋಟಾರ್ಸ್ ಶೀಘ್ರದಲ್ಲೇ ತನ್ನ ಉತ್ಪಾದನಾ ಘಟಕದಲ್ಲಿ ಎರಡನೇ ಶಿಫ್ಟ್ ಅನ್ನು ಆರಂಭಿಸಲಿದೆ. ಇದರಿಂದಾಗಿ ಉತ್ಪಾದನೆಯಲ್ಲಿ ಹೆಚ್ಚಳವಾಗಲಿದೆ. ದೇಶಿಯ ಮಾರುಕಟ್ಟೆಯಲ್ಲಿರುವ ಸೆಲ್ಟೋಸ್, ಬೆಲೆಗಳಿಗೆ ತಕ್ಕಂತೆ ವಿವಿಧ ಮಾದರಿಗಳಲ್ಲಿ ಲಭ್ಯವಿದೆ.

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಸೆಲ್ಟೋಸ್ ಎಸ್‍‍ಯುವಿಯಲ್ಲಿ ನೀಡಲಾಗುತ್ತಿರುವ ಮೆಕಾನಿಕಲ್‌ ಅಂಶಗಳನ್ನು ಈ ಸೆಗ್‍‍ಮೆಂಟಿನಲ್ಲಿ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾಗುತ್ತಿದೆ. ಈ ಮೆಕಾನಿಕಲ್ ಅಂಶಗಳು ಬೇರೆ ಕಂಪನಿಯ ಮೆಕಾನಿಕಲ್ ಅಂಶಗಳಿಗಿಂತ ವಿಭಿನ್ನವಾಗಿವೆ. ಸೆಲ್ಟೋಸ್ ಎಸ್‍‍ಯುವಿಯನ್ನು 2 ಪೆಟ್ರೋಲ್ ಹಾಗೂ 1 ಡೀಸೆಲ್ ಎಂಜಿನ್ ಸೇರಿದಂತೆ, 3 ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಈ ಎಲ್ಲಾ ಎಂಜಿನ್‍‍ಗಳನ್ನು ಬಿಎಸ್ 6 ಮಾಲಿನ್ಯ ನಿಯಮಗಳಿಗೆ ತಕ್ಕಂತೆ ಅಭಿವೃದ್ಧಿಪಡಿಸಲಾಗಿದೆ. ಗೇರ್‌ಬಾಕ್ಸ್‌ಗಳ ಬಗ್ಗೆ ಹೇಳುವುದಾದರೆ, ಸೆಲ್ಟೋಸ್ ಎಸ್‍‍ಯುವಿಯಲ್ಲಿ ನಾಲ್ಕು ಆಯ್ಕೆಗಳಿವೆ. ಪ್ರತಿಯೊಂದು ಎಂಜಿನ್ ವಿಭಿನ್ನವಾದ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದೆ.

MOST READ: ಜೆ‍‍ಸಿ‍‍ಬಿ ಯಂತ್ರವು ಹಳದಿ ಬಣ್ಣದಲ್ಲೇ ಏಕಿರುತ್ತೆ?

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ರೇಂಜ್ ಸ್ಟಾರ್ಟರ್ 1.5 ಲೀಟರಿನ 4 ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಎಂಜಿನ್ ಆಗಿದ್ದು, ಈ ಎಂಜಿನ್ 115 ಬಿಹೆಚ್‌ಪಿ ಪವರ್ ಹಾಗೂ 144 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನಲ್ಲಿ 6 ಸ್ಪೀಡಿನ ಮ್ಯಾನುವಲ್ ಹಾಗೂ ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳಿರಲಿವೆ.

MOST READ: ಪೆಟ್ರೋಲ್ ಬಂಕ್‍‍ನಿಂದ ಹೊರಡುವ ಮುನ್ನ ಎಚ್ಚರ..!

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಸ್ಪೋರ್ಟಿಯರ್ ಪೆಟ್ರೋಲ್ ಎಂಜಿನ್ 1.4 ಲೀಟರಿನ 4 ಸಿಲಿಂಡರ್ ಟರ್ಬೋಚಾರ್ಜ್ಡ್ ಯುನಿಟ್ ಆಗಿದ್ದು, 142 ಬಿಹೆಚ್‌ಪಿ ಪವರ್ ಹಾಗೂ 242 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಹೊಂದಿದೆ.

MOST READ: ಕಾರ್ ಕದ್ದಿದ್ದು ಆಯ್ತು, ಈಗ ಖದೀಮರ ಕಣ್ಣು ಲೊಗೊ ಮೇಲೆ..!

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಡೀಸೆಲ್ ಎಂಜಿನ್ 1.5 ಲೀಟರಿನ 4 ಸಿಲಿಂಡರ್ ಯುನಿಟ್ ಆಗಿದ್ದು, 115 ಬಿಹೆಚ್‌ಪಿ ಪವರ್ ಹಾಗೂ 250 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಡೀಸೆಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳನ್ನು ಹೊಂದಿದೆ. ಈ ಎಲ್ಲಾ ಎಂಜಿನ್‌ಗಳು ಸೆಲ್ಟೋಸ್‍‍ನ ಮುಂಭಾಗದ ವ್ಹೀಲ್‍‍ಗಳನ್ನು ಚಲಾಯಿಸುತ್ತವೆ.

ಬಿಡುಗಡೆಯಾದ ಮೊದಲ ತಿಂಗಳಲ್ಲೇ ಹೊಸ ದಾಖಲೆ ಬರೆದ ಕಿಯಾ ಸೆಲ್ಟೋಸ್

ಸೆಲ್ಟೋಸ್‍‍ನಲ್ಲಿ ಹಲವಾರು ಫೀಚರ್‍‍ಗಳನ್ನು ಅಳವಡಿಸಲಾಗಿದೆ. ವೆಂಟಿಲೇಷನ್ ಹೊಂದಿರುವ ಎಲೆಕ್ಟ್ರಿಕ್ ಸೀಟುಗಳು, ಎಲೆಕ್ಟ್ರಿಕ್ ಸನ್‌ರೂಫ್, ಕನೆಕ್ಟೆಡ್ ಕಾರ್ ವೈಶಿಷ್ಟ್ಯಗಳನ್ನು ಹೊಂದಿರುವ ದೊಡ್ಡ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೆನ್‌ಮೆಂಟ್ ಯುನಿಟ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಲೆದರ್ ಸೀಟ್, ಹೆಡ್ಸ್ ಅಪ್ ಡಿಸ್‍‍ಪ್ಲೇ ಹಾಗೂ 360 ಡಿಗ್ರಿಯ ಪಾರ್ಕಿಂಗ್ ಕ್ಯಾಮೆರಾ ಸೇರಿ ಹಲವಾರು ಫೀಚರ್‍‍ಗಳನ್ನು ಈ ಎಸ್‍‍ಯುವಿ ಹೊಂದಿದೆ.

Most Read Articles

Kannada
English summary
Kia Seltos SUV has a record breaking first month of sales - Read in kannada
Story first published: Monday, September 2, 2019, 11:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X