Just In
- 10 hrs ago
ಜನವರಿ 1ರಿಂದ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ
- 10 hrs ago
ಸ್ಪಾಟ್ ಟೆಸ್ಟ್ನಲ್ಲಿ ಕಂಡು ಬಂದ ಬಿಎಸ್-6 ಹೀರೋ ಗ್ಲ್ಯಾಮರ್ ಬೈಕ್
- 11 hrs ago
ಹೋಂಡಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ
- 11 hrs ago
ಅಂಬಾನಿಗೆ ಭದ್ರತೆ ನೀಡುತ್ತಿರುವ ಕಾರುಗಳ ಬೆಲೆ ಎಷ್ಟು ಗೊತ್ತಾ?
Don't Miss!
- Lifestyle
ಶುಕ್ರವಾರವಾದ ದಿನ ಭವಿಷ್ಯ 6-12-2019
- News
ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಟೀಕೆ
- Movies
ಈ ಷರತ್ತಿಗೆ ಓಕೆ ಅಂದ್ರೆ 'ಅರ್ಜುನ್ ರೆಡ್ಡಿ' ನಿರ್ದೇಶಕನ ಜೊತೆ ರಣ್ಬೀರ್ ಚಿತ್ರ!
- Sports
ರನ್ ಬೆನ್ನತ್ತುವ ಪರೀಕ್ಷೆಗೆ ಭಾರತ ಸಿದ್ದ: ವಿರಾಟ್ ಕೊಹ್ಲಿ
- Finance
ವಿಶ್ವದ ಬೃಹತ್ ಕಂಪನಿಗಳನ್ನು ಮುನ್ನಡೆಸುತ್ತಿರುವ ಟಾಪ್ 10 ಭಾರತೀಯರು
- Technology
ಗೂಗಲ್ ಫೋಟೋಸ್ ನಲ್ಲಿ ಇದೀಗ ಚಾಟ್ ಫೀಚರ್- ಇದರಲ್ಲಿ ನೀವೇನು ಮಾಡಬಹುದು?
- Education
ಅರಣ್ಯ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ...ತಿಂಗಳಿಗೆ 60,000/-ರೂ ವೇತನ
- Travel
ಭಾರತದಲ್ಲಿ ಖಗೋಳ ಛಾಯಾಚಿತ್ರಗ್ರಹಣ ಮಾಡಲು ಇಲ್ಲಿವೆ ಬೆಸ್ಟ್ ಸ್ಥಳಗಳು
ಬಿಡುಗಡೆಯಾದ ಕೇವಲ 8 ದಿನದಲ್ಲಿ ಟಾಪ್ 10 ಕಾರು ಮಾರಾಟದಲ್ಲಿ ಸ್ಥಾನ ಪಡೆದ ಕಿಯಾ ಮೋಟಾರ್ಸ್
ಭಾರೀ ನೀರಿಕ್ಷೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಕಾರು ಮಾರಾಟವನ್ನು ಆರಂಭಿಸಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಆರ್ಥಿಕ ಸಂಕಷ್ಟದ ನಡುವೆಯೂ ಸೆಲ್ಟೊಸ್ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಕೇವಲ 8 ದಿನಗಳಲ್ಲಿ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದೆ.

ಹೌದು, ಕಿಯಾ ಮೋಟಾರ್ಸ್ ಸಂಸ್ಥೆಯು ಕಳೆದ ತಿಂಗಳು ಆಗಸ್ಟ್ 22ರಂದು ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಕಾರನ್ನು ಬಿಡುಗಡೆ ಮಾಡಿದ್ದು, ಅಗಸ್ಟ್ ಅವಧಿಯಲ್ಲಿ ತನ್ನ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಎಂಜಿ ಹೆಕ್ಟರ್, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಟಾಟಾ ಹ್ಯಾರಿಯರ್ ಕಾರುಗಳನ್ನು ಹಿಂದಿಕ್ಕಿ ಬರೋಬ್ಬರಿ 6,239 ಯುನಿಟ್ ಮಾರಾಟ ಮಾಡುವ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ನಂ.1 ಸ್ಥಾನಕ್ಕೇರಿದೆ.

ಈ ಮೂಲಕ ದೇಶದ ಎರಡೇ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಹ್ಯುಂಡೈ ಸ್ಥಾನವನ್ನು ತನ್ನದಾಗಿಸಿಕೊಳ್ಳಲಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಮಾರುತಿ ಸುಜುಕಿಗೂ ಪೈಪೋಟಿ ನೀಡುವ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

ಗ್ರಾಹಕರ ಬೇಡಿಕೆಯೆಂತೆ ಅತ್ಯುತ್ತಮ ಕಾರು ಉತ್ಪನ್ನಗಳನ್ನು ಕೈಗೆಟುಕುವ ಬೆಲೆಗಳಲ್ಲಿ ಅಭಿವೃದ್ದಿಪಡಿಸುವಲ್ಲಿ ಯಶಸ್ವಿಯಾಗಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಯುರೋಪ್ ಮತ್ತು ಅಮೆರಿಕಾದಲ್ಲಿ ಭಾರೀ ಬೇಡಿಕೆ ಹೊಂದಿದ್ದು, ಇದೀಗ ಭಾರತದಲ್ಲಿ ಬಿಡುಗಡೆ ಮಾಡಲಾಗಿರುವ ಸೆಲ್ಟೊಸ್ ಕೂಡಾ ಹಲವು ಕಾರಣಗಳಿಗಾಗಿ ನೀರಿಕ್ಷೆಗೂ ಮೀರಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಇನ್ನು ಸೆಲ್ಟೊಸ್ ಕಾರುಗಳು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 15.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಿದ್ದು ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 5 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 8 ವೆರಿಯೆಂಟ್‌ಗಳನ್ನು ಹೊಂದಿದೆ. 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗೆ ಅನ್ವಯದಂತೆ ಕಿಯಾ ಸೆಲ್ಟೊಸ್ ಕಾರು ಸುಧಾರಿತ ಎಂಜಿನ್ ಮಾದರಿಯನ್ನು ಪಡೆದುಕೊಂಡಿದ್ದು, ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆಯ ಜೊತೆಗೆ ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ.

ಎಂಜಿನ್ ಸಾಮರ್ಥ್ಯ
ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ನೀಡಲಾಗಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ನೀಡಲಾಗಿದೆ. ಇದರಲ್ಲಿ ಟೆಕ್ ಲೈನ್ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಯು 115-ಬಿಎಚ್‌ಪಿಯೊಂದಿಗೆ 250-ಎನ್ಎಂ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 138-ಬಿಎಚ್‌ಪಿ ಮತ್ತು 242-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.
MOST READ:ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಸುರಕ್ಷಾ ಸೌಲಭ್ಯಗಳು
ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.
MOST READ: 26 ವರ್ಷಗಳ ಬಳಿಕ ಸ್ವಂತ ಕಾರು ಖರೀದಿಸಿದ ಮಹೀಂದ್ರಾ ಎಂಡಿ

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.
MOST READ: ಹೊಸ ಮೋಟಾರ್ ವೆಹಿಕಲ್ ಕಾಯ್ದೆ ಜಾರಿ- ಮೊದಲ ದಿನವೇ ಬೆಚ್ಚಿಬಿದ್ದ ವಾಹನ ಸವಾರರು..!

ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕಿಯಾ ಸೆಲ್ಟೊಸ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.