Just In
- 3 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 5 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 5 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 7 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಗಲಿರುವ ಕಿಯಾ ಸೆಲ್ಟೊಸ್ ಕಾರಿನ ಎಂಜಿನ್ ಮತ್ತು ವಿನ್ಯಾಸ ಮಾಹಿತಿ ಬಹಿರಂಗ
ಕಿಯಾ ಸಂಸ್ಥೆಯು ಕಳೆದ ವಾರವಷ್ಟೇ ತನ್ನ ಬಹುನೀರಿಕ್ಷಿತ ಸೆಲ್ಟೊಸ್ ಕಂಪ್ಯಾಕ್ಟ್ ಎಸ್ಯುವಿ ಕಾರನ್ನು ಬಹಿರಂಗಪಡಿಸಿದ್ದು, ಇದೀಗ ಹೊಸ ಕಾರಿನ ಪ್ರಮುಖ ತಾಂತ್ರಿಕ ವೈಶಿಷ್ಟ್ಯತೆಗಳ ಕುರಿತಾಗಿ ಕೆಲವು ಮಾಹಿತಿಗಳನ್ನು ಬಿಟ್ಟುಕೊಟ್ಟಿದೆ. ಕಾರಿನ ಬಹುತೇಕ ವಿನ್ಯಾಸವು ಹ್ಯುಂಡೈ ಕ್ರೆಟಾದಂತೆಯೇ ಇದ್ದರೂ ಸಹ ಗಾತ್ರದಲ್ಲಿ ಮತ್ತು ಎಂಜಿನ್ ಆಯ್ಕೆಯಲ್ಲಿ ಕೆಲವು ವಿಶೇಷತೆಗಳನ್ನು ಹೊಂದಿರಲಿದೆ.
ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಗುರುತರ ಬದಲಾವಣೆ ತರುವ ಉದ್ದೇಶದಿಂದಲೇ ಮಾರುಕಟ್ಟೆಯಲ್ಲಿರುವ ಇತರೆ ಪ್ರತಿಸ್ಪರ್ಧಿ ಕಾರುಗಳಿಂತಲೂ ವಿನೂತನ ಡ್ರೈವ್ ಟೆಕ್ನಾಲಜಿ ಜೊತೆಗೆ ಹಲವು ಹೊಸ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಸೆಲ್ಟೊಸ್ ಕಾರನ್ನು ಮಾರುಕಟ್ಟೆಗೆ ಪರಿಚಯಿಸಿರುವ ಕಿಯಾ ಸಂಸ್ಥೆಯು ಅತಿ ಕಡಿಮೆ ಬೆಲೆಯಲ್ಲಿ ಐಷಾರಾಮಿ ಮಾದರಿಯ ಕಾರುನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.
ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವಿಲ್ಲ.
ಹಾಗೆಯೇ ಸೆಲ್ಟೊಸ್ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ.
ಕಾರಿನ ಒಳಾಂಗಣ ವಿನ್ಯಾಸ
ಕಿಯಾ ಸದ್ಯಕ್ಕೆ ಸೆಲ್ಟೊಸ್ ಕಾರಿನ ಹೊಸ ವಿನ್ಯಾಸಗಳನ್ನು ಮಾತ್ರವೇ ಪ್ರದರ್ಶನ ಮಾಡಿದ್ದು, ಬಿಡುಗಡೆಯ ದಿನದ ತನಕ ಕಾರಿನ ಒಳವಿನ್ಯಾಸಗಳನ್ನು ಬಹಿರಂಗಪಡಿಸದಿರಲು ನಿರ್ಧರಿಸಿದೆ. ಹೀಗಾಗಿ ಕಾರಿನ ಒಳಾಂಗಣ ಮಾಹಿತಿ ನೀಡಿದೆಯಾದರೂ ಒಳಾಂಗಣ ಚಿತ್ರಗಳನ್ನು ಮಾತ್ರ ರಹಸ್ಯವಾಗಿಟ್ಟಿದೆ. ಕೆಲವು ಮಾಹಿತಿಗಳ ಪ್ರಕಾರ ಕಾರಿನಲ್ಲಿ 10.25-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, 360 ಡಿಗ್ರಿ ವ್ಯೂ ಮಾನಿಟರ್, ಹೆಡ್ ಅಪ್ ಡಿಸ್ಪ್ಲೇ, ಸನ್ರೂಫ್ ಮತ್ತು 8-ಸ್ಪಿಕರ್ಸ್ ಬಾಷ್ ಸೌಂಡ್ ಸಿಸ್ಟಂ ಹೊಂದಿರಲಿದೆಯೆಂತೆ.
ಕಾರಿನ ಉದ್ದಳತೆ
ಕ್ರೆಟಾ ಕಾರಿಗಿಂತ 45-ಎಂಎಂ ಹೆಚ್ಚು ಉದ್ದವಾಗಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್ಬೆಸ್, 1,620-ಎಂಎಂ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಎಸ್ಯುವಿ ಪ್ರಿಯರನ್ನು ಸೆಳೆಯಲಿದೆ.
ಇದರ ಜೊತೆಗೆ ಹೈ ಎಂಡ್ ವೆರಿಯೆಂಟ್ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ನಲ್ಲಿ ಬ್ಲ್ಯೂ ಲಿಂಕ್ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.
ಎಂಜಿನ್ ಸಾಮರ್ಥ್ಯ
ಸೆಲ್ಟೊಸ್ ಕಾರು ಬಿಎಸ್-6 ಪ್ರೇರಿತ 1.5-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ 1.5-ಲೀಟರ್ ಸಿಆರ್ಡಿಐ ಡೀಸೆಲ್ ಎಂಜಿನ್ ಹೊಂದಿರಲಿದ್ದು, ಇದರೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆ ಸಹ ಒದಗಿಸಲಿದೆ. ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಇಲ್ಲವೇ 6-ಸ್ಟೆಪ್ ಟಾರ್ಕ್ ಕನರ್ವಟ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದಿರಲಿವೆ.
ಸುರಕ್ಷಾ ಸೌಲಭ್ಯಗಳು
ಶೇ.73ರಷ್ಟು ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಎಸ್ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಆಧುನಿಕ ತಂತ್ರಜ್ಞಾನ ಪ್ರೇರಣೆ ಹೊಂದಿದೆ.
MOST READ: ರೂ.10 ಲಕ್ಷದೊಳಗೆ ದೊರೆಯಲಿರುವ ಈ ಕಾರು 300ಕಿ.ಮಿ ಮೈಲೇಜ್ ನೀಡುತ್ತೆ..!
ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)
ಅಗಸ್ಟ್ ಆರಂಭದಲ್ಲಿ ಸೆಲ್ಟೊಸ್ ಕಾರು ಬಿಡುಗಡೆಯಾಗಲಿದ್ದು, ಕಾರಿನ ಬೆಲೆಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
ಇನ್ನು ಕಿಯಾ ಸಂಸ್ಥೆಯು ಸೆಲ್ಟೊಸ್ ಬಿಡುಗಡೆಯ ನಂತರ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಒಟ್ಟು 8 ಹೊಸ ಕಾರು ಆವೃತ್ತಿಗಳನ್ನು ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆ ಮಾಡಲಿದ್ದು, ಇದರಲ್ಲಿ 2 ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಈಗಾಗಲೇ ಸಿದ್ದತೆ ಮಾಡಿಕೊಂಡಿದೆ.