Just In
- 43 min ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- 2 hrs ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 3 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 3 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಕಿಯಾ ಸೆಲ್ಟೊಸ್
ಸೆಲ್ಟೊಸ್ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಗರಿಷ್ಠ ಬೇಡಿಕೆಯೊಂದಿಗೆ ನಂ.1 ಸ್ಥಾನಕ್ಕೇರಿದ್ದು, ಇದೀಗ ಅತಿ ಕಡಿಮೆ ಅವಧಿಯಲ್ಲಿ 40 ಸಾವಿರ್ ಯುನಿಟ್ ಮಾರಾಟಗೊಳ್ಳುವ ಮೂಲಕ ಅಚ್ಚರಿಯ ಬೆಳವಣೆಗೆ ಸಾಧಿಸಿದೆ.
ಕಳೆದ ಎರಡು ತಿಂಗಳಿನಿಂದ ಕಾರು ಮಾರಾಟದಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಕಿಯಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಸೆಲ್ಟೊಸ್ ಕಾರಿನ ಉತ್ಪಾದನೆಯನ್ನು ಹೆಚ್ಚಿಸಿದ್ದು, ಬುಕ್ಕಿಂಗ್ ಮಾಡಿದ ಒಂದೇ ವಾರದಲ್ಲಿ ಹೊಸ ಕಾರನ್ನು ವಿತರಣೆ ಮಾಡುವ ಭರವಸೆ ನೀಡುತ್ತಿದೆ. ಇದರಿಂದ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಇತರೆ ಕಾರು ಉತ್ಪಾದನಾ ಸಂಸ್ಥೆಗಳಿಗಿಂತಲೂ ಅತಿ ಕಡಿಮೆ ಕಾಯುವಿಕೆ ಅವಧಿಯೊಂದಿಗೆ ಭರ್ಜರಿ ಮಾರಾಟ ದಾಖಲಿಸುತ್ತಿದ್ದು, ನವೆಂಬರ್ ಅವಧಿಯಲ್ಲಿ 14,005 ಯುನಿಟ್ ಮಾರಾಟದೊಂದಿಗೆ ಇದುವರೆಗೆ 40 ಸಾವಿರ ಯುನಿಟ್ ಮಾರಾಟ ಗುರಿ ತಲುಪಿದೆ.
ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.
ಆಕರ್ಷಕ ಬೆಲೆ, ಸುಧಾರಿತ ತಂತ್ರಜ್ಞಾನ ಬಳಕೆಯಿಂದಾಗಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಹೊಂದುತ್ತಿರುವ ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.
ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್ನಲ್ಲಿ ಒಟ್ಟು 6 ವೆರಿಯೆಂಟ್ಗಳನ್ನು ಮತ್ತು ಪೆಟ್ರೋಲ್ ಎಂಜಿನ್ನಲ್ಲಿ 9 ವೆರಿಯೆಂಟ್ಗಳನ್ನು ಹೊಂದಿದೆ. ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.
ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.
ಹೈ ಎಂಡ್ ವೆರಿಯೆಂಟ್ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.
MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?
ಸುರಕ್ಷಾ ಸೌಲಭ್ಯಗಳು
ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಎಸ್ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.
MOST READ: ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್
ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ
ಜನವರಿ 1ರಿಂದ ಸೆಲ್ಟೊಸ್ ಮತ್ತಷ್ಟು ದುಬಾರಿ
ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಸದ್ಯ ನಂ.1 ಸ್ಥಾನಕ್ಕೇರಿರುವ ಸೆಲ್ಟೊಸ್ ಕಾರು ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ದುಬಾರಿ ಬೆಲೆ ಪಡೆದುಕೊಳ್ಳುತ್ತಿದ್ದು, ಜನವರಿ 1ರ ನಂತರ ಸೆಲ್ಟೊಸ್ ಖರೀದಿಸುವ ಗ್ರಾಹಕರು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೆಲೆಗಿಂತ ರೂ.50 ಸಾವಿರದಿಂದ ರೂ.70 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.