ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಕಿಯಾ ಮೋಟಾರ್ಸ್ ಸಂಸ್ಥೆಯು ಅಗಸ್ಟ್ 22ಕ್ಕೆ ಬಹುನೀರಿಕ್ಷಿತ ಸೆಲ್ಟೊಸ್ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ರಸ್ತೆಗಿಳಿಸುತ್ತಿರುವ ಸೆಲ್ಟೊಸ್ ಕಾರು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಸೆಲ್ಟೊಸ್ ಹೊಸ ಕಾರು ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭಿಸಲಾಗಿದ್ದು, ಬುಕ್ಕಿಂಗ್ ಆರಂಭವಾದ ಒಂದೇ ದಿನದಲ್ಲಿ ಬರೋಬ್ಬರಿ 6,046 ಗ್ರಾಹಕರು ರೂ. 25 ಸಾವಿರ ಮುಂಗಡದೊಂದಿಗೆ ಸೆಲ್ಟೊಸ್ ಖರೀದಿಗಾಗಿ ಬೇಡಿಕೆ ಸಲ್ಲಿಸಿದ್ದಾರೆ. ಸೆಲ್ಟೊಸ್ ಕಾರು ಬಿಡುಗಡೆಯಾಗುವ ಹೊತ್ತಿಗೆ ಬುಕ್ಕಿಂಗ್ ಪ್ರಮಾಣವು 25 ಸಾವಿರ ಗಡಿದಾಟುವ ನೀರಿಕ್ಷೆಯಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಡೀಸೆಲ್ ಮತ್ತು ಪೆಟ್ರೋಲ್ ಎರಡೂ ಎಂಜಿನ್‌ ಮಾದರಿಗಳಲ್ಲೂ ಖರೀದಿ ಲಭ್ಯವಿರುವ ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ 5 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 3 ವೆರಿಯೆಂಟ್‌ಗಳನ್ನು ಪಡೆದುಕೊಂಡಿರಲಿದೆ. ಪೆಟ್ರೋಲ್‌ನಲ್ಲಿ ಜಿಟಿಕೆ, ಜಿಟಿಎಕ್ಸ್ ಮತ್ತು ಜಿಟಿಕೆ ಪ್ಲಸ್ ವೆರಿಯೆಂಟ್‌ ಖರೀದಿಗೆ ಲಭ್ಯವಿದ್ದಲ್ಲಿ ಡೀಸೆಲ್‌ನಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳನ್ನು ಖರೀದಿಸಬಹುದಾಗಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಸೆಲ್ಟೊಸ್ ಕಾರು ಬಿಎಸ್-6 ಪ್ರೇರಿತ 1.5-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಹೊಂದಿರಲಿದ್ದು, ಇದರೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಒದಗಿಸಲಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಸ್ಮಾರ್ಟ್ ಸ್ಟ್ರೀಮ್ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿರಲಿದೆ. ಇನ್ನು ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಹಾಗೆಯೇ ಸೆಲ್ಟೊಸ್ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಮತ್ತು ಡ್ಯುಯಲ್ ಸನ್‌ರೂಫ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಸುರಕ್ಷಾ ಸೌಲಭ್ಯಗಳು

ಶೇ.73ರಷ್ಟು ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತಲೂ 45-ಎಂಎಂ ಹೆಚ್ಚುವರಿ ಉದ್ದ ಪಡೆದಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಎತ್ತರ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಕೂಡಾ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಕಾರಿನ ಬೆಲೆಗಳು(ಅಂದಾಜು)

ಆಕರ್ಷಕ ಬೆಲೆಗಳಲ್ಲಿ ಸೆಲ್ಟೊಸ್ ಕಾರು ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿರುವ ಕಿಯಾ ಸಂಸ್ಥೆಯು ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಯನ್ನು ರೂ. 15 ಲಕ್ಷಕ್ಕೆ ನಿಗದಿ ಮಾಡಬಹುದೆಂದು ಅಂದಾಜಿಸಲಾಗಿದೆ.

ವರ್ಷದ ಕಾರು ಕೀರ್ತಿಗೆ ಪಾತ್ರವಾಗಲಿರುವ ಕಿಯಾ ಸೆಲ್ಟೊಸ್ ಸ್ಪೆಷಲ್ ಏನು?

ಒಟ್ಟಿನಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಅತ್ಯುತ್ತಮ ಮಾದರಿಯಾಗಲಿರುವ ಕಿಯಾ ಸೆಲ್ಟೊಸ್ ಕಾರು ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಎಸ್‌ಯುವಿ ಮಾದರಿಗೂ ಈ ಕಾರು ಉತ್ತಮ ಪೈಪೋಟಿಯಾಗುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Kia Seltos — Top Things To Know About India’s Most-Awaited SUV Of 2019.
Story first published: Tuesday, July 23, 2019, 18:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more