ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಜಗತ್ತಿನ 8ನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಭಾರತದಲ್ಲಿ ಪ್ರಥಮ ಬಾರಿಗೆ ತನ್ನ ವಾಣಿಜ್ಯ ಚಟುವಟಿಕೆಗಳಿಗೆ ಚಾಲನೆ ನೀಡುತ್ತಿದ್ದು, 2019ರ ಅಗಸ್ಟ್ ಹೊತ್ತಿಗೆ ತನ್ನ ಮೊದಲ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ದಕ್ಷಿಣ ಕೊರಿಯಾ ಮೂಲದ ಕಿಯಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಭಾರತೀಯ ಆಟೋ ಉದ್ಯಮದಲ್ಲಿ ಬಹುದೊಡ್ಡ ಬದಲಾವಣೆ ತರಲಿರುವ ಬಹುನೀರಿಕ್ಷಿತ ಕಾರು ಉತ್ಪಾದನಾ ಸಂಸ್ಥೆ ಅಂದ್ರೆ ತಪ್ಪಾಗುದಿಲ್ಲ. ಈಗಾಗಲೇ ಭಾರತದಲ್ಲಿ ಮೊದಲ ಹಂತವಾಗಿ ಬಿಡುಗಡೆಯಾಗುವ ತನ್ನ ಹೊಸ ಕಾರು ಉತ್ಪನ್ನಗಳ ಬಗ್ಗೆ ಮಾಹಿತಿ ಹೊರಹಾಕಿರುವ ಕಿಯಾ ಸಂಸ್ಥೆಯು ಸದ್ಯದಲ್ಲೇ ಮಾರುಕಟ್ಟೆಗೆ ಪ್ರವೇಶಿಸುವ ತವಕದಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಕಿಯಾ ಇಂಡಿಯಾ ಸಂಸ್ಥೆಯು ವಿವಿಧ ಮಾದರಿಯ ಒಟ್ಟು 8 ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಇದರಲ್ಲಿ ಮೊದಲಿಗೆ ಮಾರುಕಟ್ಟೆಗೆ ಲಗ್ಗೆಯಿಡುವುದೇ ಎಸ್‌ಪಿ2ಐ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ಎಸ್‌ಪಿಐ2 ಕಾರು ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸುವ ತವಕದಲ್ಲಿದ್ದು, ನಿನ್ನೆಯಿಂದಲೇ ಹೊಸ ಕಾರು ಉತ್ಪಾದನೆಗೆ ಅಧಿಕೃತ ಚಾಲನೆ ಸಿಕ್ಕಿದೆ.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಆಂಧ್ರಪ್ರದೇಶದ ಅನಂತಪುರದಲ್ಲಿ ಆರಂಭಗೊಂಡಿರುವ ಕಾರು ಉತ್ಪಾದನಾ ಘಟಕವು ಸಹ ಸಾಕಷ್ಟು ವಿಶೇಷತೆಗಳಿಗೆ ಕಾರಣವಾಗಿದ್ದು, ಪ್ರತಿವರ್ಷ 3 ಲಕ್ಷ ಕಾರುಗಳನ್ನು ಉತ್ಪಾದನೆ ಮಾಡುವ ಘಟಕದ ನಿರ್ಮಾಣಕ್ಕೆ ಬರೋಬ್ಬರಿ 7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಕಿಯಾ ಸಂಸ್ಥೆಯು 2018ರ ದೆಹಲಿ ಆಟೋ ಮೇಳದಲ್ಲೂ ಸಹ ತನ್ನ ಬಹುನೀರಿಕ್ಷಿತ ಹೊಸ ಕಾರುಗಳನ್ನು ಪ್ರದರ್ಶನ ಮಾಡಿ ಕಾರು ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದಲ್ಲದೇ ಕೈಗೆಟುಕುವ ಬೆಲೆಗಳಲ್ಲಿ ಮಧ್ಯಮ ಗಾತ್ರದ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿತ್ತು.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಅದರಂತೆ ಇದೀಗ ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಕಾರು ಉತ್ಪನ್ನಗಳನ್ನು ಸಿದ್ದಗೊಳಿಸುತ್ತಿದ್ದು, ಮೊದಲ ಕಾರಿನ ಆರಂಭಿಕ ಉತ್ಪಾದನಾ ಸಮಾರಂಭವನ್ನು ನಿನ್ನೆಯಷ್ಟೇ ಭರ್ಜರಿಯಾಗಿ ಚಾಲನೆ ನೀಡಲಾಯ್ತು. ಈ ವೇಳೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕಿಯಾ ಕೊರಿಯಾ ಅಂಬಾಸಿಡರ್ ಶಿನ್ ಬೊಂಗಕಿಲ್ ಕೂಡಾ ಭಾಗಿಯಾಗಿದ್ದು ಸಾಕಷ್ಟು ವಿಶೇಷವಾಗಿತ್ತು.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಮತ್ತೊಂದು ಪ್ರಮುಖ ವಿಚಾರ ಅಂದ್ರೆ ಆಂಧ್ರ ಸರ್ಕಾರದ ಜೊತೆ ಕೆಲವು ಮಹತ್ವದ ಒಡಂಬಡಿಕೆಗಳನ್ನು ಮಾಡಿಕೊಂಡಿರುವ ಕಿಯಾ ಸಂಸ್ಥೆಯು ಮೂಲಭೂತ ಸೌಕರ್ಯಗಳಿಗೆ ಪರ್ಯಾಯವಾಗಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಹಕರಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಇನ್ನು ಕಿಯಾ ಮೋಟಾರ್ಸ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಎಸ್‌ಯುವಿ, ಸೆಡಾನ್ ಮತ್ತು ಐಷಾರಾಮಿ ಕಾರುಗಳನ್ನು ಸಿದ್ದಗೊಳಿಸಿದ್ದು, ಇನೋವಾ ಕ್ರಿಸ್ಟಾ ಕಾರುಗಳ ಪ್ರತಿಸ್ಪರ್ಧಿಯಾಗಿರುವ ಗ್ರ್ಯಾಂಡ್ ಕಾರ್ನಿವಾಲ್ ಕಾರಿನ ಮೇಲೂ ಭಾರೀ ನೀರಿಕ್ಷೆ ಇಟ್ಟುಕೊಳ್ಳಲಾಗಿದೆ.

MOST READ: ಭಾರತದಲ್ಲಿ ಹಾರುವ ಕಾರುಗಳನ್ನು ಬಿಡಲು ಸಿದ್ದವಾದ ಪಿಎಲ್-ವಿ ಲಿಬರ್ಟಿ

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಇದರೊಂದಿಗೆ ಕಿಯಾ ಎಸ್‌ಪಿ2ಐ ಕಾನ್ಸೆಪ್ಟ್, ಸ್ಟೊನಿಕ್, ಗ್ರ್ಯಾಂಡ್ ಕಾರ್ನಿವಾಲ್, ಸ್ಟಿಂಗರ್, ಸೆರಾಟೊ ಕಾರುಗಳು ಗ್ರಾಹಕರ ಅಭಿರುಚಿಗೆ ತಕ್ಕಂತೆ ಸಿದ್ದವಾಗಿದ್ದು, ಭವಿಷ್ಯದ ವಾಹನ ಮಾದರಿಗಳಾದ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೂ ಯೋಜನೆ ರೂಪಿಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಇದರಲ್ಲಿ ಟೊಯೊಟಾ ಇನೋವಾ ಕ್ರಿಸ್ಟಾಗೆ ಪೈಪೋಟಿ ನೀಡುವ ಉದ್ದೇಶದಿಂದ ಗ್ರ್ಯಾಂಡ್ ಕಾರ್ನಿವಾಲ್ ಅಭಿವೃದ್ಧಿ ಮಾಡಲಾಗುತ್ತಿದ್ದು, ಇದು 7 ಸೀಟರ್, 9 ಸೀಟರ್ ಮತ್ತು 11 ಸೀಟರ್ ವೈಶಿಷ್ಟ್ಯತೆಯನ್ನು ಹೊಂದಿಯಂತೆ. ಹೀಗಾಗಿ ಈ ಕಾರು ಟೂರಿಸ್ಟ್ ಬಳಕೆಯ ವಾಹನ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ಸಾಧ್ಯತೆಯಿದೆ.

MOST READ: ಬ್ರೇಕ್ ಫೇಲ್ ಆದಾಗ ಜೀವ ಉಳಿಸಿಕೊಳ್ಳಲು ಈ ಟಿಪ್ಸ್ ಖಂಡಿತ ನಿಮ್ಮ ಸಹಾಯಕ್ಕೆ ಬರುತ್ತೆ..!

ಭಾರತದಲ್ಲಿ ಬಿಡುಗಡೆಯಾಗುವ ಕಿಯಾ ಮೊದಲ ಕಾರು ಉತ್ಪಾದನೆಗೆ ಭರ್ಜರಿ ಚಾಲನೆ

ಒಟ್ಟಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬದಲಾವಣೆ ತರುವ ಉದ್ದೇಶದೊಂದಿದೆ ಬೃಹತ್ ಯೋಜನೆ ಹೊತ್ತು ಬಂದಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಮಾರುತಿ ಸುಜುಕಿ ಮತ್ತು ಹ್ಯುಂಡೈ ಸಂಸ್ಥೆಗಳಿಗೆ ತ್ರೀವ ಪೈಪೋಟಿ ನೀಡುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದೆ ಅಂದ್ರೆ ತಪ್ಪಾಗುವುದಿಲ್ಲ.

Most Read Articles

Kannada
Read more on ಕಿಯಾ kia motors
English summary
New Kia SP2i SUV Showcased — Trial Production Starts At Kia Motors India’s Anantapur Plant. Read in Kannada.
Story first published: Wednesday, January 30, 2019, 10:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X