ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಕಿಯಾ ಸಂಸ್ಥೆಯು ಕಳೆದ ವಾರವಷ್ಟೇ ತನ್ನ ಬಹುನೀರಿಕ್ಷಿತ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ್ದು, ಅಗಸ್ಟ್ 22ಕ್ಕೆ ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಹೀಗಾಗಿ ಕಾರಿನ ತಾಂತ್ರಿಕ ಸೌಲಭ್ಯಗಳನ್ನು ಮತ್ತೊಂದು ಸುತ್ತಿನ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಕಿಯಾ ಸಂಸ್ಥೆಯು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳನ್ನೇ ವಿನೂತನ ಮಾದರಿಯ ಸೌಲಭ್ಯಗಳನ್ನು ನೀಡುವ ಭರವಸೆ ನೀಡಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಸೆಲ್ಟೊಸ್ ಕಾರಿನ ಅನಾವರಣ ಕಾರ್ಯಕ್ರಮದಲ್ಲಿ ಕಾರಿನ ಹೊರಭಾಗದ ತಾಂತ್ರಿಕ ಸೌಲಭ್ಯಗಳ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದರೂ ಸಹ ಇಂಟಿರಿಯರ್ ಕುರಿತಾಗಿ ಕಿಯಾ ಸಂಸ್ಥೆಯು ಗೌಪ್ಯತೆ ಕಾಯ್ದುಕೊಂಡಿತ್ತು. ಆದರೆ ಇದೀಗ ರೋಡ್ ಟೆಸ್ಟಿಂಗ್ ವೇಳೆ ಸೆಲ್ಟೊಸ್ ಕಾರಿನ ಇಂಟಿರಿಯರ್ ಡಿಸೈನ್ ಮತ್ತು ಚಾಲನಾ ತಂತ್ರಜ್ಞಾನ ಮಾಹಿತಿ ಕುರಿತಾದ ಚಿತ್ರಗಳು ಸೋರಿಕೆಯಾಗಿದ್ದು, ಮಾಹಿತಿಗಳ ಪ್ರಕಾರ ಕಾರಿನಲ್ಲಿ 10.25-ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, 360 ಡಿಗ್ರಿ ವ್ಯೂ ಮಾನಿಟರ್, ಹೆಡ್ ಅಪ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು 8-ಸ್ಪಿಕರ್ಸ್ ಬಾಷ್ ಸೌಂಡ್ ಸಿಸ್ಟಂ ಹೊಂದಿರಲಿದೆಯೆಂತೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಇದರ ಹೊರತಾಗಿ ಹೊಸ ಸೆಲ್ಟೊಸ್ ಕಾರಿನಲ್ಲಿ ಇನ್ನು ಏನೆೇಲ್ಲಾ ಹೊಸ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದೆ ಎನ್ನುವುದು ಬಿಡುಗಡೆಗೂ ಮುನ್ನವಷ್ಟೇ ಪೂರ್ಣ ಮಾಹಿತಿ ದೊರೆಯಲಿದ್ದು, ಒಟ್ಟಿನಲ್ಲಿ ಪ್ರತಿಸ್ಪರ್ಧಿ ಕಾರುಗಳಿಂತಲೂ ಸೆಲ್ಟೊಸ್‌ನಲ್ಲಿ ವಿನೂತನ ಡ್ರೈವ್ ಟೆಕ್ನಾಲಜಿ ಜೊತೆಗೆ ಹಲವು ಹೊಸ ಪ್ರೀಮಿಯಂ ಫೀಚರ್ಸ್‌ಗಳು ಹೊಂದಲಿರುವುದು ಮಾತ್ರ ಬಹುತೇಕ ಖಚಿತವಾಗಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಅನುಮಾನವಿಲ್ಲ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಹಾಗೆಯೇ ಸೆಲ್ಟೊಸ್ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಕಾರಿನ ಲುಕ್ ಹೆಚ್ಚಿಸಲು ಅಲ್ಲಲ್ಲಿ ಬ್ರಿಡ್ಜ್ ಕ್ರೋಮ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಮತ್ತು ಡ್ಯುಯಲ್ ಟೋನ್ ಸನ್ ರೂಫ್ ಕೂಡಾ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತ 45-ಎಂಎಂ ಹೆಚ್ಚು ಉದ್ದವಾಗಿರುವ ಸೆಲ್ಟೊಸ್ ಕಾರು 4,315-ಎಂಎಂ ಉದ್ದ, 1,800-ಎಂಎಂ ಅಗಲ, 2,610-ಎಂಎಂ ವೀಲ್ಹ್‌ಬೆಸ್, 1,620-ಎಂಎಂ ಮತ್ತು 190-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಬೂಟ್ ಸ್ಪೆಸ್ ಸಾಮರ್ಥ್ಯವು ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಇದರ ಜೊತೆಗೆ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ನಲ್ಲಿ ಬ್ಲ್ಯೂ ಲಿಂಕ್ ಪ್ಯಾಕೇಜ್ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆಯಲಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಎಂಜಿನ್ ಸಾಮರ್ಥ್ಯ

ಸೆಲ್ಟೊಸ್ ಕಾರು ಬಿಎಸ್-6 ಪ್ರೇರಿತ 1.5-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಹೊಂದಿರಲಿದ್ದು, ಇದರೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆ ಸಹ ಒದಗಿಸಲಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಇದರಲ್ಲಿ ಸಾಮಾನ್ಯ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಗಳನ್ನು ಹೊಂದಿದ್ದರೆ ಟರ್ಬೋ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಇಲ್ಲವೇ 6-ಸ್ಟೆಪ್ ಟಾರ್ಕ್ ಕನರ್ವಟ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಲಿವೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಸುರಕ್ಷಾ ಸೌಲಭ್ಯಗಳು

ಶೇ.73ರಷ್ಟು ಅತ್ಯುತ್ತಮ ಸ್ಟೀಲ್ ಪಡೆದುಕೊಂಡಿರುವ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಆಧುನಿಕ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಕಾರಿನ ಬೆಲೆಗಳು(ಅಂದಾಜು)

ಆಕರ್ಷಕ ಬೆಲೆಗಳಲ್ಲಿ ಸೆಲ್ಟೊಸ್ ಬಿಡುಗಡೆಯ ಸುಳಿವು ನೀಡಿರುವ ಕಿಯಾ ಸಂಸ್ಥೆಯು ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 16 ಲಕ್ಷ ನಿಗದಿ ಮಾಡಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಯಾಗುತ್ತಿರುವ ಕಿಯಾ ಸೆಲ್ಟೊಸ್ ಕಾರಿನ ಇಂಟಿರಿಯರ್ ಹೇಗಿರಲಿದೆ ಗೊತ್ತಾ?

ಇನ್ನು ಕಿಯಾ ಸಂಸ್ಥೆಯು ಸೆಲ್ಟೊಸ್ ಬಿಡುಗಡೆಯ ನಂತರ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಒಟ್ಟು 8 ಹೊಸ ಕಾರು ಆವೃತ್ತಿಗಳನ್ನು ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆ ಮಾಡಲಿದ್ದು, ಇದರಲ್ಲಿ 2 ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಈಗಾಗಲೇ ಸಿದ್ದತೆ ಮಾಡಿಕೊಂಡಿದೆ.

Source: Adi Zone/YouTube

Article Published On: Thursday, July 4, 2019, 10:53 [IST]
English summary
Kia Upcoming Seltos Interior Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+