2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಭಾರತೀಯ ಆಟೋ ಉದ್ಯಮವು ಕಳೆದ 3 ವರ್ಷಗಳಿಂದಿಚೆಗೆ ಭಾರೀ ಬದಲಾವಣೆ ಕಾರಣವಾಗಿರುವುದಲ್ಲದೇ ಮುಂದಿನ ದಿನಗಳಲ್ಲಿ ಮತ್ತಷ್ಟು ಬದಲಾವಣೆಗೆ ಸಿದ್ದವಾಗುತ್ತಿದೆ. ಭವಿಷ್ಯದ ವಾಹನಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಆಟೋ ಉತ್ಪಾದನಾ ಸಂಸ್ಥೆಗಳು ಮೊದಲ ಬಾರಿಗೆ ಇಂಧನ ಆಧರಿತ ವಾಹನ ಉತ್ಪಾದನೆಯನ್ನು ತಗ್ಗಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿವೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

2030ರ ವೇಳೆಗೆ ಶೇ.100ರಷ್ಟು ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳ ಉತ್ಪಾದನೆ ಮತ್ತು ಮಾರಾಟದ ಗುರಿ ಹೊಂದಿರುವ ಭಾರತೀಯ ಆಟೋ ಉತ್ಪಾದನಾ ಸಂಸ್ಥೆಗಳು ಈಗಿನಿಂದಲೇ ವಾಹನ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, 2020ರ ಫೆಬ್ರುವರಿನಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌‍ಪೋದಲ್ಲಿ ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳು ಪ್ರದರ್ಶನಗೊಳ್ಳುವ ಮೂಲಕ ರಸ್ತೆಗಿಳಿಯಲು ಸಜ್ಜಾಗುತ್ತಿವೆ. ಹಾಗಾದರೆ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಎಲೆಕ್ಟ್ರಿಕ್ ಕಾರುಗಳು ಯಾವವು? ಮತ್ತು ಹೊಸ ಕಾರುಗಳ ತಾಂತ್ರಿಕ ಸೌಲಭ್ಯಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಕಿಯಾ ಸೊಲ್ ಎಲೆಕ್ಟ್ರಿಕ್

ಕಿಯಾ ಮೋಟಾರ್ಸ್ ಸಂಸ್ಥೆಯು ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಮತ್ತೈದು ಹೊಸ ಬ್ರಾಂಡ್ ಕಾರುಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಸೊಲ್ ಮತ್ತು ನಿರೋ ಎಲೆಕ್ಟ್ರಿಕ್ ಕಾರು ಮಾದರಿಗಳ ಸೇರಿದ್ದು, ಸೊಲ್ ಕಾರನ್ನು ರೂ.10 ಲಕ್ಷದೊಳಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. 2020ರ ಆಟೋ ಎಕ್ಸ್‌ಪೋದಲ್ಲಿ ಭಾಗಿಯಾಗಲಿರುವ ಸೊಲ್ ಕಾರು ಪ್ರತಿ ಚಾರ್ಚ್‌ಗೆ 180 ಕಿ.ಮೀ ನಿಂದ 200ಕಿ.ಮೀ ಮೈಲೇಜ್ ಪ್ರೇರಣೆ ಹೊಂದಿದ್ದು, ಹ್ಯಾಚ್‌ಬ್ಯಾಕ್ ಮಾದರಿಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಮಾರುತಿ ಸುಜುಕಿ ವ್ಯಾಗನ್ಆರ್ ಎಲೆಕ್ಟ್ರಿಕ್

ಸದ್ಯ ಬಿಡುಗಡೆಯ ಸಿದ್ದತೆಯಲ್ಲಿರುವ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರು ವಿಶೇಷ ತಂತ್ರಜ್ಞಾನದೊಂದಿಗೆ ಅಭಿವೃದ್ದಿ ಹೊಂದಿದ್ದು, ಹೊಸ ಕಾರು ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳ ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿ ಹೊಂದಿದೆ. ಅಲ್ಟ್ರಾ ಹೈ ಎಫಿಶಿಯೆನ್ಸಿ ಪವರ್‌ಟ್ರೈನ್ ಬ್ಯಾಟರಿ ಪ್ರೇರಣೆ ಹೊಂದಿರುವ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರಿನಲ್ಲಿ ಲೀಥಿಯಂ ಅಯಾನ್ ಪ್ರೇರಿತ 72 ವೊಲ್ಟ್, 25kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜಿಂಗ್ ಮಾಡಿದ್ದಲ್ಲಿ ಗರಿಷ್ಠವಾಗಿ 150 ರಿಂದ 160 ಕಿ.ಮಿ ಮೈಲೇಜ್ ಪಡೆಯಬಹುದು.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

2020ರ ಫೆಬ್ರುವರಿಯಲ್ಲಿ ದೆಹಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರ ಏಪ್ರಿಲ್ ಅಥವಾ ಮೇ ಆರಂಭದಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿರಲಿದ್ದು, ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.8 ಲಕ್ಷದಿಂದ ರೂ.11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಜನಪ್ರಿಯ ನೆಕ್ಸಾನ್ ಕಾರಿನ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಭರ್ಜರಿ ತಯಾರಿ ನಡೆಸುತ್ತಿದ್ದು, ಮುಂದಿನ ತಿಂಗಳು ಡಿಸೆಂಬರ್ 16ಕ್ಕೆ ನೆಕ್ಸಾನ್ ಫೇಸ್‌ಲಿಫ್ಟ್ ಕಾರಿನ ಜೊತೆಗೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಸಹ ಅನಾವರಣಗೊಳಿಸಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನ ಪ್ರೇರಣೆ ಹೊಂದಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಸ್ಪೀಡ್ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಅಳವಡಿಸಲಾಗಿದ್ದು, ಪ್ರತಿಸ್ಪರ್ಧಿ ಚಾರ್ಜ್‌ಗೆ ಗರಿಷ್ಠ 300ಕಿ.ಮೀ ಮೈಲೇಜ್ ನೀಡಲಿದೆ. ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಎಂದು ಅಂದಾಜಿಸಲಾಗಿದ್ದು, ದೆಹಲಿ ಆಟೋ ಎಕ್ಸ್‌ಪೋ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ದಾಖಲೆಗಳಿಲ್ಲದೇ ಶೋಕಿ ಮಾಡಲು ಹೋದ ಐಷಾರಾಮಿ ಕಾರು ಮಾಲೀಕನಿಗೆ ಬಿತ್ತು ಭಾರೀ ದಂಡ..!

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್

ಮುಂದಿನ ತಿಂಗಳು ಡಿಸೆಂಬರ್ 3ಕ್ಕೆ ಅನಾವರಣಗೊಳ್ಳುತ್ತಿರುವ ಸಾಮಾನ್ಯ ಆಲ್‌ಟ್ರೊಜ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರು ಮಾದರಿಯು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ಡ್ರೈವ್ ಟೆಕ್ನಾಲಜಿಯೊಂದಿಗೆ ಹ್ಯಾಚ್‌ಬ್ಯಾಕ್ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ವಾಹನ ಸವಾರರಿಗೆ ಸಿಹಿಸುದ್ದಿ- ಫಾಸ್ಟ್‌ಟ್ಯಾಗ್ ಕಡ್ಡಾಯ ಮತ್ತೆ ಮುಂದೂಡಿಕೆ..!

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಹೊಸ ಎಲೆಕ್ಟ್ರಿಕ್ ಕಾರಿನ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿಯಿಲ್ಲವಾದರೂ ಪ್ರತಿ ಚಾರ್ಜ್‌ಗೆ 180 ಕಿ.ಮೀ ಮೈಲೇಜ್ ಪ್ರೇರಣೆ ಹೊಂದಿರುವ ಆಲ್‌ಟ್ರೊಜ್ ಎಲೆಕ್ಟ್ರಿಕ್ ಆವೃತ್ತಿಯು 2020ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಫೋರ್ಡ್ ಜೊತೆ ಸೇರಿ ಹೊಸ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸಹಭಾಗಿತ್ವ ಯೋಜನೆ ಅಡಿಯಲ್ಲಿ ಆಸ್ಪೈರ್ ಎಲೆಕ್ಟ್ರಿಕ್, ಕೆಯುವಿ100 ಎಲೆಕ್ಟ್ರಿಕ್ ಮತ್ತು ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿ ಬಿಡುಗಡೆ ಮಾಡಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಕೆಯುವಿ100 ಎಲೆಕ್ಟ್ರಿಕ್ ಹೊಸ ಕಾರು ಲೀಥಿಯಂ ಅಯಾನ್ 16 kWh ಬ್ಯಾಟರಿ ಸೌಲಭ್ಯವನ್ನು ಪಡೆದಿದ್ದು, ಪ್ರತಿ ಚಾರ್ಜ್‌ಗೆ 120 ಕಿ.ಮಿ ಮೈಲೇಜ್ ನೀಡುವ ಗುಣಲಕ್ಷಣದೊಂದಿಗೆ ಸಾಮಾನ್ಯ ಕಾರಿನ ಮಾದರಿಯಲ್ಲೇ ವೇಗ ಮತ್ತು ಎಂಜಿನ್ ಕಾರ್ಯಕ್ಷಮತೆ ಒದಗಿಸಲು ಇದು ಸಹಕಾರಿಯಾಗಿದೆ. ಗುಣಮಟ್ಟದ ಸುರಕ್ಷಾ ಸೌಲಭ್ಯಗಳು ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.8 ಲಕ್ಷದಿಂದ ರೂ.10 ಲಕ್ಷ ಬೆಲೆಯಲ್ಲಿ ದೊರಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್

ಡಿ.5ಕ್ಕೆ ಅನಾವರಣಗೊಂಡ ನಂತರ 2020ರ ಜನವರಿವರಿ ಆರಂಭದಲ್ಲಿ ಇಜೆಡ್ಎಸ್ ಕಾರು ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದ್ದು, ಎಂಜಿ ಮೋಟಾರ್ ಸಂಸ್ಥೆಯು ಸೀಮಿತ ಅವಧಿಯೊಳಗೆ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಖರೀದಿಸುವ ಗ್ರಾಹಕರಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಹೇಳಿಕೊಂಡಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ಜೆಡ್ಎಸ್ ಕಾರು ಬಿಡುಗಡೆಗೂ ಮುನ್ನ ಇಜೆಡ್ಎಸ್ ಕಾರು ಬಿಡುಗಡೆಯಾಗಲಿದ್ದು, ತದನಂತರವಷ್ಟೇ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರವಷ್ಟೇ ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ರಸ್ತೆಗಿಳಿಯಲಿವೆ. ಇಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 320ರಿಂದ 350ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನವಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಹಾಗೆಯೇ ಇಜೆಡ್ಎಸ್ ಮೇಲೆ ಎಂಜಿ ಮೋಟಾರ್ ಸಂಸ್ಥೆಯು ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.17 ಲಕ್ಷದಿಂದ ರೂ.20 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

Most Read Articles

Kannada
English summary
List of Electric Cars to be unveiled at 2020 Auto Expo. Read in Kannada.
Story first published: Saturday, November 30, 2019, 18:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X