ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಹೊಸ ವಾಹನಗಳ ಎಂಜಿನ್‌ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದ್ದು, 2020ರ ಏಪ್ರಿಲ್ 1ಕ್ಕೆ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮವು ಹೊಸ ಸಂಚಲನಕ್ಕೆ ಕಾರಣವಾಗಿದೆ.

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸಲು ಅಂತಿಮ ಹಂತದಲ್ಲಿ ಸಿದ್ದತೆಯಲ್ಲಿವೆ.

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಇದರಲ್ಲಿ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಮರಾಜೋ, ಅಲ್ಟುರಾಸ್ ಜಿ4, ಬಲೆರೊ ಮತ್ತು ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಮಹೀಂದ್ರಾ ಹೊಸ ಕಾರುಗಳು ಮುಂದಿನ ನಾಲ್ಕು ತಿಂಗಳು ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ.

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಈಗಾಗಲೇ ಮಾರುತಿ ಸುಜುಕಿ ಸಂಸ್ಥೆಯು ತಮ್ಮಲ್ಲಿರುವ ವ್ಯಾಗನ್ ಆರ್, ಸ್ವಿಫ್ಟ್, ಡಿಜೈರ್, ಆಲ್ಟೋ ಸೇರಿದಂತೆ ಇನ್ನು ಹಲವಾರು ಕಾರುಗಳನ್ನು ಬಿಎಸ್-6 ಎಂಜಿನ್ ಅಳವಡಿಸಿ ಬಿಡುಗಡೆ ಮಾಡಲಾಗಿದ್ದು, ಇದೀಗ ಮಹೀಂದ್ರಾ ಸಂಸ್ಥೆಯು ಮೊದಲ ಬಾರಿಗೆ ತನ್ನ ಎಕ್ಸ್‌ಯುವಿ 300 ಮತ್ತು ಆಲ್ಟುರಾಸ್ ಜಿ4 ಎಸ್‌ಯುವಿ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಯೋಜನೆಯಲ್ಲಿದೆ.

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಅಲ್ಟುರಾಸ್ ಜಿ4 ಕಾರು ಸ್ಪಾಟ್ ಟೆಸ್ಟಿಂಗ್ ವೇಳೆ ಚೆನ್ನೈನಲ್ಲಿ ಕಾಣಿಸಿಕೊಂಡಿದ್ದು, ಈ ಬಾರಿ ಹೊಸ ಅಲಾಯ್ ವ್ಹೀಲ್‍ಗಳನ್ನು ಸಹ ಪಡೆದುಕೊಂಡಿದೆ. ಈ ಕಾರನ್ನು ಬಿಡುಗಡೆಯ ಹೊತ್ತಿಗೆ ಬಿಎಸ್-6 ಎಂಜಿನ್‍ಗೆ ಸರಿಹೊಂದುವ ಇಂಧನವು ಸಹ ದೊರೆಯಲಿದ್ದು, ಈಗಾಗಲೇ ಪ್ರಮುಖ ನಗರಗಳಲ್ಲಿ ಹೊಸ ಇಂಧನ ಮಾರಾಟಕ್ಕೆ ಲಭ್ಯವಿದೆ.

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಎಂಜಿನ್ ಸಾಮರ್ಥ್ಯ

ಮಹೀಂದ್ರಾ ಆಲ್ಟುರಾಸ್ ಜಿ4 ಕಾರು 2WD ಮತ್ತು 4WD ವರ್ಷನ್‍‍ಗಳಲ್ಲಿ ಲಭ್ಯವಿದ್ದು, 2.2 ಲೀಟರ್ 4 ಸಿಲಿಂಡರ್ ಡೀಸೆಲ್ ಎಂಜಿನ್ ಸಹಾಯದಿಂದ 178-ಬಿಹೆಚ್‍ಪಿ ಮತ್ತು 420-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ. ಈ ಎಂಜಿನ್ ಅನ್ನು ಮರ್ಸಿಡೀಸ್ ಬೆಂಝ್‍ನಿಂದ ಎರವಲು ಪಡೆದ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಇನ್ನು ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಮಹೀಂದ್ರಾ ಆಲ್ಟುರಾಸ್ ಜಿ4 ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಎಸ್‍ಯುವಿ ಕಾರುಗಳಿಗೆ ಪೈಪೋಟಿ ನೀಡುತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 26.95 ಲಕ್ಷಕ್ಕೆ ಹಾಗೂ ಟಾಪ್ ಎಂಡ್ ಮಾದರಿಯನ್ನು ರೂ. 29.95 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಕಾರಿನ ಡಿಸೈನ್‌ನಲ್ಲಿ ಈ ಹಿಂದಿನ ಸ್ಯಾಂಗ್‌ಯಾಂಗ್ ರೆಕ್ಸ್‌ಸ್ಟಾನ್ ಜಿ4 ಕಾರಿನ ಕೆಲವು ವಿನ್ಯಾಸಗಳನ್ನು ಎರವಲು ಪಡೆಯಲಾಗಿದ್ದು, ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೈಬೀಮ್ ಮತ್ತು ಲೋ ಬೀಮ್ ಲೈಟ್ಸ್, 18-ಇಂಚಿನ ಫೈವ್ ಸ್ಪೋಕ್ ಅಲಾಯ್ ವೀಲ್ಹ್‌ಗಳು, ಫಾಗ್ ಲ್ಯಾಂಪ್ ಜೊತೆ ಕಾರ್ನರ್ ಲೈಟಿಂಗ್ ಸೌಲಭ್ಯ ಪಡೆದಿದೆ.

MOST READ: ಶೀಘ್ರದಲ್ಲೇ ಸ್ಕ್ರ್ಯಾಪಿಂಗ್ ನೀತಿ ಜಾರಿ- ಹೊಸ ಉದ್ಯಮಕ್ಕೆ ಕೈಜೋಡಿಸಿದ ಮಾರುತಿ ಸುಜುಕಿ ಮತ್ತು ಟೊಯೊಟಾ

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಅಲ್ಟುರಾಸ್ ಜಿ4 ಕಾರುಗಳು ಕೇವಲ ಪ್ರೀಮಿಯಂ ಎಸ್‌ಯುವಿ ಮಾದರಿಯಷ್ಟೇ ಅಲ್ಲದೇ ಆಫ್ ರೋಡ್ ವೈಶಿಷ್ಟ್ಯತೆಯನ್ನು ಸಹ ಹೊಂದಿರುವ ಈ ಕಾರುಗಳಲ್ಲಿ ಹಿಂಬದಿ ಚಕ್ರಗಳಿಗೂ ಗೇರ್‌ಬಾಕ್ಸ್ ಶಕ್ತಿ ಪೂರೈಕೆಯ ಸೌಲಭ್ಯವಿದ್ದು, ಇದು ಕಠಿಣ ಪರಿಸ್ಥಿತಿಗಳಲ್ಲೂ ಸರಾಗವಾಗಿ ನುಗ್ಗಬಲ್ಲ ಬಲಿಷ್ಠ ಕಾರು ಮಾದರಿಯಾಗಲಿದೆ.

MOST READ: ಖದೀಮರಿಗೆ ಎಸ್‍‍ಯುವಿ ಕಾರುಗಳೇ ಯಾಕೆ ಹೆಚ್ಚು ಟಾರ್ಗೆಟ್?

ರೋಡ್ ಟೆಸ್ಟಿಂಗ್‌‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಅಲ್ಟುರಾಸ್ ಜಿ4 ಬ್ಯುಸಿ

ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 9 ಏರ್‍‍ಬ್ಯಾಗ್, ಎಬಿಎಸ್, ಇಬಿಡಿ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಅಡ್ವಾನ್ಸ್ಡ್ ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಮ್, ಲೇನ್ ಡಿಪಾರ್ಚುರ್ ವಾರ್ನಿಂಗ್, ಲೇನ್ ಚೇಂಜ್ ಅಸ್ಸಿಸ್ಟ್, ಟ್ರಾಫಿಕ್ ಸೇಫ್ಟಿ ಅಸ್ಸಿಸ್ಟ್, ಐಎಸ್ಒಎಫ್ಐಎಕ್ಸ್ ಚೈಲ್ಡ್-ಸೀಟ್ ಮೌಂಟ್ ಸೀಟ್, ಹಿಲ್ ಕ್ಲೈಮ್ / ಡಿಸೆಂಟ್ ಅಸಿಸ್ಟ್ಸ್ ಮತ್ತು ಹೈ ಬೀಮ್ ಅಸ್ಸಿಸ್ಟ್ ಅನ್ನು ಅಳವಡಿಸಲಾಗಿದೆ.

Source: Zigwheels

Article Published On: Tuesday, September 17, 2019, 14:16 [IST]
English summary
Mahindra Alturas G4 BS-VI Spied Testing In India Ahead Of Launch: Spy Pics & Other Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+