ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಬಿಎಸ್-6 ಎಂಜಿನ್ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿರುವ ಮಹೀಂದ್ರಾ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳನ್ನು ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಉನ್ನತೀಕರಣ ಕೈಗೊಂಡಿರುವುದಲ್ಲದೇ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೂ ಶೀಘ್ರದಲ್ಲೇ ಚಾಲನೆ ನೀಡಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದ್ದು, ಮಹೀಂದ್ರಾ ಕೂಡಾ ನೆಕ್ಸ್ಟ್ ಜನರೇಷನ್ ಕಾರು ಮಾದರಿಗಳ ಜೊತೆಗೆ ಫೇಸ್‌ಲಿಫ್ಟ್ ಮಾದರಿಯನ್ನು ಸಹ ಹೊಸ ನಿಯಮಕ್ಕೆ ಅನುಗುಣವಾಗಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಹೀಗಾಗಿ ಮುಂಬರುವ ಒಂದು ವರ್ಷದೊಳಗೆ ನೆಕ್ಸ್ ಜನರೇಷನ್ ಮಾದರಿಗಳಾದ ಎಕ್ಸ್‌ಯುವಿ500, ಥಾರ್, ಬೊಲೆರೊ, ಸ್ಕಾರ್ಪಿಯೋ, ಫೇಸ್‌ಲಿಫ್ಟ್ ಮಾದರಿಗಳಾದ ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಹೊಸದಾಗಿ ಎಕ್ಸ್‌ಯುವಿ300 7 ಸೀಟರ್ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಇದಲ್ಲದೇ ಫೋರ್ಡ್ ಜೊತೆ ಹೊಸ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸಹಭಾಗಿತ್ವ ಯೋಜನೆಯಲ್ಲಿ ಆಸ್ಪೈರ್ ಎಲೆಕ್ಟ್ರಿಕ್ ಮತ್ತು ಕೆಯುವಿ100 ಎಲೆಕ್ಟ್ರಿಕ್ ಕಾರನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿ ಬಿಡುಗಡೆ ಮಾಡಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

2018ರ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಕೆಯುವಿ100 ಎಲೆಕ್ಟ್ರಿಕ್ ಕಾರು ಅತ್ಯುತ್ತಮ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕೆಯುವಿ100 ಕಾರುಗಳು ಸಾಮಾನ್ಯ ಕೆಯುವಿ100 ಮಾದರಿಯ ಹೋಲಿಕೆ ಇದ್ದರೂ ಎಂಜಿನ್ ವಿಭಾಗದಲ್ಲಿ ಮಹತ್ವರ ಬದಲಾವಣೆ ಪರಿಚಯಿಸಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಮಧ್ಯಮ ಗಾತ್ರದ ಮೈಕ್ರೊ ಎಸ್‌ಯುವಿ ಆಯ್ಕೆ ಮಾಡುವ ಗ್ರಾಹಕರಿಗೆ ಉತ್ತಮ ಆಯ್ಕೆಯನ್ನು ನೀಡುತ್ತಿರುವ ಮಹೀಂದ್ರಾ ಸಂಸ್ಥೆಯು ಹೊಸ ಎಲೆಕ್ಟ್ರಿಕ್ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಲೀಥಿಯಂ ಅಯಾನ್ 16 kWh ಬ್ಯಾಟರಿ ಸೌಲಭ್ಯವನ್ನು ಪಡೆದುಕೊಂಡಿರಲಿದೆಯೆಂತೆ. ಸದ್ಯ ಮಹೀಂದ್ರಾ ಸಂಸ್ಥೆಯು ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಉತ್ಪನ್ನಗಳ ಮೇಲೆ ಗಮನಹರಿಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಅಕ್ಟೋಬರ್ 1ರಿಂದ ಜಾರಿಗೆಯಾಗಿರುವ ಹೊಸ ಸುರಕ್ಷಾ ನಿಯಮದ ಪ್ರಕಾರ ಪ್ರತಿಯೊಂದು ವಾಹನ ಉತ್ಪಾದನಾ ಸಂಸ್ಥೆಗಳು ಸಹ ತಮ್ಮ ಹೊಸ ವಾಹನಗಳಲ್ಲಿ ಗರಿಷ್ಠ ಮಟ್ಟದ ಸುರಕ್ಷತೆಯನ್ನು ನೀಡಬೇಕಿದ್ದು, ಹೊಸ ನಿಯಮವನ್ನು ಪಾಲಿಸಲು ಸಾಧ್ಯವಾಗದ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಬೇಕಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಈ ಹಿನ್ನೆಲೆಯಲ್ಲಿ ಮಹೀಂದ್ರಾ ಕೂಡಾ ಹೊಸ ನಿಯಮ ಪಾಲಿಸಲು ಸಾಧ್ಯವಾಗದ ಇ2ಒ ಪ್ಲಸ್ ಕಾರನ್ನು ಉತ್ಪಾದನೆಯಿಂದ ಕೈಬಿಟ್ಟಿದ್ದು, ಹೊಸ ನಿಯಮಗಳಿಗೆ ಅನುಗುಣವಾಗಿ ಕೆಯುವಿ100 ಎಲೆಕ್ಟ್ರಿಕ್ ಸೇರಿದಂತೆ ಇನ್ನು ಹಲವು ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಸದ್ಯಕ್ಕೆ ಇ-ವೆರಿಟೊ ಸೆಡಾನ್ ಕಾರನ್ನು ಮಾತ್ರವೇ ಮಾರಾಟ ಮಾಡುತ್ತಿರುವ ಮಹೀಂದ್ರಾ ಸಂಸ್ಥೆಯು ಮುಂಬರುವ ಫೆಬ್ರುವರಿ ಹೊತ್ತಿಗೆ ಕೆಯುವಿ100 ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, 40ಕೆವಿ ಮೋಟಾರ್ ಮೂಲಕ 120-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲ ವೈಶಿಷ್ಟ್ಯತೆಯನ್ನು ಅಳವಡಿಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಇದರಿಂದ ಕೆಯುವಿ100 ಎಲೆಕ್ಟ್ರಿಕ್ ಹೊಸ ಕಾರು ಪ್ರತಿ ಚಾರ್ಜ್‌ಗೆ 120 ಕಿ.ಮಿ ಮೈಲೇಜ್ ನೀಡುವ ಗುಣಲಕ್ಷಣಗಳನ್ನು ಹೊಂದಿದ್ದು, ಸಾಮಾನ್ಯ ಕಾರಿನ ಮಾದರಿಯಲ್ಲೇ ವೇಗ ಮತ್ತು ಎಂಜಿನ್ ಕಾರ್ಯಕ್ಷಮತೆ ಒದಗಿಸಲು ಇದು ಸಹಕಾರಿಯಾಗಿದೆ. ಜೊತೆಗೆ ಇ-ವೆರಿಟೊ ಕಾರಿಗಿಂತಲೂ ಉತ್ತಮ ಫೀಚರ್ಸ್‌ಗಳನ್ನು ಹೊಂದರಲಿದ್ದು, ಡಿಸಿ ಚಾರ್ಜಿಂಗ್ ಸೌಲಭ್ಯಗಳೊಂದಿಗೆ ಮಾರುತಿ ಸುಜುಕಿ ಸಂಸ್ಥೆಯ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರಿಗೆ ಇದು ಪೈಪೋಟಿಯಾಗಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಕೆಯುವಿ100 ಎಲೆಕ್ಟ್ರಿಕ್

ಇನ್ನು ಕಾರಿನ ಒಳವಿನ್ಯಾಸದ ಕುರಿತಾಗಿ ಹೇಳುವುದಾದರೇ ಹೊಸ ಕಾರು ಸಾಮಾನ್ಯ ಕಾರಿನ ಮಾದರಿಯಲ್ಲೇ ಆಸನ ಸೌಲಭ್ಯವನ್ನು ಹೊಂದಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣಗಾಗಿ ಗುಣಮಟ್ಟದ ಸುರಕ್ಷಾ ಸೌಲಭ್ಯಗಳು ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.8 ಲಕ್ಷದಿಂದ ರೂ. 10 ಲಕ್ಷ ಬೆಲೆಯಲ್ಲಿ ದೊರಲಿದೆ.

Source: Team BHP

Most Read Articles

Kannada
English summary
Mahindra eKUV100 Spied Testing Ahead Of Launch In India. Read in Kannada.
Story first published: Tuesday, October 22, 2019, 19:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X