ಪೆಟ್ರೋಲ್ ವರ್ಷನ್‌ನಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಬಿಎಸ್-6 ಕೆಯುವಿ100
ವರ್ಷಾಂತ್ಯದೊಳಗೆ ಬಿಎಸ್-6 ಎಂಜಿನ್ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಮಹೀಂದ್ರಾ ಕೂಡಾ ತನ್ನ ಜನಪ್ರಿಯ ಕಾರುಗಳನ್ನು ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಉನ್ನತೀಕರಣಗೊಳಿಸುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದ್ದು, ಮಹೀಂದ್ರಾ ಕೂಡಾ ನೆಕ್ಸ್ಟ್ ಜನರೇಷನ್ ಕಾರು ಮಾದರಿಗಳ ಜೊತೆಗೆ ಫೇಸ್‌ಲಿಫ್ಟ್ ಮಾದರಿಯನ್ನು ಸಹ ಹೊಸ ನಿಯಮಕ್ಕೆ ಅನುಗುಣವಾಗಿ ಬಿಡುಗಡೆ ಮಾಡಲು ನಿರ್ಧರಿಸಿದೆ.
ಹೀಗಾಗಿ ಮುಂಬರುವ ಒಂದು ವರ್ಷದೊಳಗೆ ನೆಕ್ಸ್ ಜನರೇಷನ್ ಮಾದರಿಗಳಾದ ಎಕ್ಸ್‌ಯುವಿ500, ಥಾರ್, ಬೊಲೆರೊ, ಸ್ಕಾರ್ಪಿಯೋ, ಫೇಸ್‌ಲಿಫ್ಟ್ ಮಾದರಿಗಳಾದ ಎಕ್ಸ್‌ಯುವಿ300, ಟಿಯುವಿ300 ಪ್ಲಸ್, ಕೆಯುವಿ100 ನೆಕ್ಸ್ಟ್ ಮತ್ತು ಹೊಸದಾಗಿ ಎಕ್ಸ್‌ಯುವಿ300 7 ಸೀಟರ್ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಇದಲ್ಲದೇ ಫೋರ್ಡ್ ಜೊತೆ ಹೊಸ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸಹಭಾಗಿತ್ವ ಯೋಜನೆಯಲ್ಲಿ ಆಸ್ಪೈರ್ ಎಲೆಕ್ಟ್ರಿಕ್ ಮತ್ತು ಕೆಯುವಿ100 ಎಲೆಕ್ಟ್ರಿಕ್ ಕಾರುಗಳನ್ನು 2020ರ ಮಧ್ಯಂತರದಲ್ಲಿ ಬಿಡುಗಡೆ ಮಾಡಲಿದೆ.

ಸದ್ಯ ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ವಾಹನಗಳ ಎಂಜಿನ್ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತಂದಿರುವುದು ಮಹೀಂದ್ರಾ ನೆಕ್ಸ್ಟ್ ಜನರೇಷನ್ ಮತ್ತು ಫೇಸ್‌ಲಿಫ್ಟ್ ಭಾರೀ ಬದಲಾವಣೆ ಹೊಂದಿರಲಿವೆ.

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 2020ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೊಸ ವಾಹನಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

ಇದರಲ್ಲಿ ಮಹೀಂದ್ರಾ ನಿರ್ಮಾಣದ ಫೇಸ್‌ಲಿಫ್ಟ್ ಮಾದರಿಗಳಾದ ಟಿಯುವಿ300 ಪ್ಲಸ್, ಎಕ್ಸ್‌ಯುವಿ300, ನ್ಯೂ ಜನರೇಷನ್ ಕಾರು ಮಾದರಿಗಳಾದ ಸ್ಕಾರ್ಪಿಯೋ, ಎಕ್ಸ್‌ಯುವಿ500, ಥಾರ್ ಮತ್ತು ಕೆಯುವಿ100 ನೆಕ್ಸ್ಟ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಮಹೀಂದ್ರಾ ಬಿಎಸ್-6 ಕಾರುಗಳು ಮುಂದಿನ ನಾಲ್ಕೈದು ತಿಂಗಳ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.15 ಸಾವಿರದಿಂದ ರೂ.30 ಸಾವಿರ ಮತ್ತು ಡೀಸೆಲ್ ಕಾರುಗಳು ರೂ.90 ಸಾವಿರದಿಂದ ರೂ. 2 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.
MOST READ: ನೀರು ಮತ್ತು ಆಲ್ಕೋಹಾಲ್‍ನಿಂದ ಚಲಿಸಲಿದೆ ಈ ಎಂಜಿನ್..!

ಈ ಹಿನ್ನಲೆಯಲ್ಲಿ ಮಹೀಂದ್ರಾ ಸಂಸ್ಥೆಯು ಹೈ ಎಂಡ್ ಕಾರುಗಳನ್ನು ಮಾತ್ರವೇ ಹೊಸದಾದ ಡೀಸೆಲ್ ಎಂಜಿನ್‌ನೊಂದಿಗೆ ಅಭಿವೃದ್ದಿಗೊಳಿಸುತ್ತಿದ್ದು, ಇನ್ನುಳಿದಂತೆ ಎಂಟ್ರಿ ಲೆವಲ್ ಕಾರು ಮಾದರಿಗಳಲ್ಲಿ ಪೆಟ್ರೋಲ್ ಮಾದರಿಯನ್ನು ಮಾತ್ರವೇ ಮುಂದುವರಿಸಲು ನಿರ್ಧರಿಸಿದೆ.
MOST READ: ಕಾರು ಅಪ್ಪಚ್ಚಿಯಾದರೂ ಬದುಕುಳಿದ ಕಾರು ಚಾಲಕ

ಕೆಯುವಿ100 ನೆಕ್ಸ್ಟ್ ಕಾರಿನಲ್ಲಿ ಇದುವರೆಗೆ ಡೀಸೆಲ್ ಆವೃತ್ತಿಯನ್ನು ಉನ್ನತೀಕರಣ ಮಾಡದಿರುವುದು ಇಂತಹ ಅನುಮಾನಕ್ಕೆ ಕಾರಣವಾಗಿದ್ದು, ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಕೆಯುವಿ100 ಮಾದರಿಯು ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಹೊಂದಿದೆ.
MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಒಂದು ವೇಳೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಣ್ಣ ಗಾತ್ರದ ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಉನ್ನತೀಕರಿಸಿದರೂ ಸಹ ಬೆಲೆ ದುಬಾರಿಯಾಗಲಿದ್ದು, ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತೆ.

ಇದರಿಂದ ಸಣ್ಣ ಗಾತ್ರದ ಕಾರುಗಳಲ್ಲಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಡೀಸೆಲ್ ಎಂಜಿನ್ ಆಯ್ಕೆ ಕೈಬಿಡುತ್ತಿದ್ದು, ಮಹೀಂದ್ರಾ ಮಾತ್ರವಲ್ಲದೇ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಸಂಸ್ಥೆಗಳು ಸಹ ಸಣ್ಣ ಕಾರುಗಳಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ ಹೇಳುತ್ತಿವೆ.
Source: Rushlane


Click it and Unblock the Notifications