2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಮಹೀಂದ್ರಾ ಸಂಸ್ಥೆಯು ಸದ್ಯ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಅಧಿಪತ್ಯ ಸಾಧಿಸುತ್ತಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳು ಭಾರೀ ಜನಪ್ರಿಯತೆ ಗಳಿಸುವಲ್ಲಿ ಯಶಸ್ವಿಯಾಗಿವೆ. ಹೀಗಾಗಿ ತನ್ನ ಜನಪ್ರಿಯ ಕಾರುಗಳನ್ನು ಮತ್ತಷ್ಟು ಗ್ರಾಹಕ ಸ್ನೇಹಿಯಾಗಿಸಲು ಮುಂದಾಗಿರುವ ಮಹೀಂದ್ರಾ ಸಂಸ್ಥೆಯು ಮುಂಬರುವ ಕೆಲವೇ ದಿನಗಳಲ್ಲಿ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಹೌದು, ಮಹೀಂದ್ರಾ ಸಂಸ್ಥೆಯು ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಉನ್ನತಿಕರಿಸುತ್ತಿದ್ದು, ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳಿಂತಲೂ ನ್ಯೂ ಜನರೇಷನ್ ಆವೃತ್ತಿಗಳು ಸಾಕಷ್ಟು ಸುಧಾರಿತ ಗುಣಮಟ್ಟದ ಬಿಡಿಭಾಗಗಳು, ಎಂಜಿನ್ ಸೌಲಭ್ಯ ಮತ್ತು ಪರ್ಫಾಮೆನ್ಸ್‌ನಲ್ಲಿ ಗ್ರಾಹಕರ ಆಕರ್ಷಣೆಗೆ ಕಾರಣವಾಗಲಿವೆ.

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ವಾಹನಗಳ ಎಂಜಿನ್‌ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದೆ.

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2020ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಇದರಲ್ಲಿ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಹೊಸ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ.

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಹಾಗೆಯೇ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಹಾಗೆಯೇ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

2020ಕ್ಕೆ ಬಿಡುಗಡೆಯಾಗಲಿವೆ ಮಹೀಂದ್ರಾ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್..!

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ರೂ. 1.50 ಲಕ್ಷದಿಂದ ರೂ.2.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

Kannada
English summary
Mahindra Likely To Unveil Next-gen XUV500, Thar, Scorpio At 2020 Delhi Auto Expo. Read in Kannada.

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more