ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ
ಮಹೀಂದ್ರಾ ಕಂಪನಿಯು ತನ್ನ ಹೊಸ ಮರಾಜೊ ಎಂಪಿವಿಯನ್ನು ಸ್ಪಾಟ್ ಟೆಸ್ಟ್ ಮಾಡಿದೆ. ಚೆನ್ನೈನಲ್ಲಿ ಬಿಎಸ್-6 ಎಂಜಿನ್ ಅನ್ನು ಹೊಂದಿರುವ ಎಂಪಿವಿಯನ್ನು ಸ್ಪಾಟ್ ಟೆಸ್ಟ್ ನಡೆಸಿರುವುದನ್ನು ರಶ್‍ಲೇನ್ ಬಹಿರಂಗಪಡಿಸಿದೆ.

2020ರ ಏಪ್ರಿಲ್ ತಿಂಗಳಲ್ಲಿ ಜಾರಿಗೆ ಬರಲಿರುವ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಮಹೀಂದ್ರಾ ಕಂಪನಿಯು ತನ್ನ ಸರಣಿಯ ಪ್ರಮುಖ ಕಾರುಗಳನ್ನು ನವೀಕರಿಸುವುದರಲ್ಲಿ ನಿರತವಾಗಿದೆ. ಇದರ ಸಲುವಾಗಿ ಮಹೀಂದ್ರಾ ಮರಾಜೊ ಎಂಪಿವಿಯನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತಿದೆ.

ಮಹೀಂದ್ರಾ ಮರಾಜೊ ಎಂಪಿವಿಯಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಿ ಅದನ್ನು ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಮಹೀಂದ್ರಾ ಮಾರಾಜೊದಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಹೀಂದ್ರಾ ಮರಾಜೊ ಎಂಪಿವಿ 1.5-ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದೆ.

ಈ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಮೊದಲಿನಿಂದಲೂ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ ಎಂಬ ವದಂತಿಗಳಿತ್ತು. ಹೊಸ ಬಿಎಸ್-6 ಮರಾಜೊ ಆವೃತ್ತಿಯಲ್ಲಿ ಇತಂಹ ವದಂತಿಗಳಿವೆ.

ಮಾರುಕಟ್ಟೆಯಲ್ಲಿರುವ ಬಿಎಸ್-4 ಮರಾಜೊ ಎಂಪಿವಿಯು ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ವ್ಹೀಲ್, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೇಲ್ ಲೈಟ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರೇರ್ ಬಂಪರ್ ಹೊಂದಿದೆ.

ಮಹೀಂದ್ರಾ ಮರಾಜೊ ಬಿಎಸ್-4 ಎಂಪಿವಿನಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್‍ನಲ್ಲಿ 7-ಇಂಚಿನ ಇನ್ಫೋಟೇನ್‍ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವಾಯ್ಸ್ ಕಮಾಂಡ್ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಹೊಂದಿದೆ.

ಇದರೊಂದಿಗೆ ವ್ಹೀಲ್ ಮೌಟೆಂಡ್ ಆಡಿಯೋ ಕಂಟ್ರೋಲರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತುಕ್ರೂಸ್ ಕಂಟ್ರೋಲ್ ಅನ್ನು ಹೊಂದಿದೆ. ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಂ2, ಎಂ4, ಎಂ6 ಮತ್ತು ಎಂ8 ಎನ್ನುವ ನಾಲ್ಕು ಮಾದರಿಗಳಿವೆ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಮಹೀಂದ್ರಾ ಮರಾಜೊ ಎಂಪಿವಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಈ ಎಂಪಿವಿಯಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಡಿಸ್ಕ್‌ಬ್ರೇಕ್, ಪಾರ್ಕಿಂಗ್ ಸೆನ್ಸಾರ್ ಅನ್ನು ನೀಡಲಾಗಿದೆ. ಮಹೀಂದ್ರಾ ಮರಾಜೊ ಬಿಎಸ್-6 ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ಆರಂಭಿಕೆ ಬೆಲೆಯು ರೂ.11 ಲಕ್ಷಗಳಾಗಿರಲಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಮಹೀಂದ್ರಾ ಮರಾಜೊ ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಇನೋವಾ ಕ್ರಿಸ್ಟಾ, ಮಾರುತಿ ಸುಜುಕಿ ಎರ್ಟಿಗಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications