ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಮಹೀಂದ್ರಾ ಕಂಪನಿಯು ತನ್ನ ಹೊಸ ಮರಾಜೊ ಎಂಪಿವಿಯನ್ನು ಸ್ಪಾಟ್ ಟೆಸ್ಟ್ ಮಾಡಿದೆ. ಚೆನ್ನೈ‍ನಲ್ಲಿ ಬಿಎಸ್-6 ಎಂಜಿನ್ ಅನ್ನು ಹೊಂದಿರುವ ಎಂಪಿವಿಯನ್ನು ಸ್ಪಾಟ್ ಟೆಸ್ಟ್ ನಡೆಸಿರುವುದನ್ನು ರಶ್‍‍ಲೇನ್ ಬಹಿರಂಗಪಡಿಸಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

2020ರ ಏಪ್ರಿಲ್ ತಿಂಗಳಲ್ಲಿ ಜಾರಿಗೆ ಬರಲಿರುವ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಮಹೀಂದ್ರಾ ಕಂಪನಿಯು ತನ್ನ ಸರಣಿಯ ಪ್ರಮುಖ ಕಾರುಗಳನ್ನು ನವೀಕರಿಸುವುದರಲ್ಲಿ ನಿರತವಾಗಿದೆ. ಇದರ ಸಲುವಾಗಿ ಮಹೀಂದ್ರಾ ಮರಾಜೊ ಎಂಪಿವಿಯನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಮಹೀಂದ್ರಾ ಮರಾಜೊ ಎಂಪಿವಿಯಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಿ ಅದನ್ನು ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಮಹೀಂದ್ರಾ ಮಾರಾಜೊದಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಹೀಂದ್ರಾ ಮರಾಜೊ ಎಂಪಿವಿ 1.5-ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಈ ಎಂಜಿನ್ 120 ಬಿ‍‍ಹೆಚ್‍‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‍‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಮೊದಲಿನಿಂದಲೂ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ ಎಂಬ ವದಂತಿಗಳಿತ್ತು. ಹೊಸ ಬಿಎಸ್-6 ಮರಾಜೊ ಆವೃತ್ತಿಯಲ್ಲಿ ಇತಂಹ ವದಂತಿಗಳಿವೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಮಾರುಕಟ್ಟೆಯಲ್ಲಿರುವ ಬಿಎಸ್-4 ಮರಾಜೊ ಎಂಪಿವಿಯು ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ವ್ಹೀಲ್, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೇಲ್ ಲೈಟ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರೇರ್ ಬಂಪರ್ ಹೊಂದಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಮಹೀಂದ್ರಾ ಮರಾಜೊ ಬಿಎಸ್-4 ಎಂಪಿ‍‍ವಿನಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್‍‍ನಲ್ಲಿ 7-ಇಂಚಿನ ಇನ್ಫೋಟೇನ್‍‍ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್‌ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವಾಯ್ಸ್‌ ಕಮಾಂಡ್‌ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಹೊಂದಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಇದರೊಂದಿಗೆ ವ್ಹೀಲ್ ಮೌಟೆಂಡ್ ಆಡಿಯೋ ಕಂಟ್ರೋಲರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತುಕ್ರೂಸ್ ಕಂಟ್ರೋಲ್ ಅನ್ನು ಹೊಂದಿದೆ. ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಂ2, ಎಂ4, ಎಂ6 ಮತ್ತು ಎಂ8 ಎನ್ನುವ ನಾಲ್ಕು ಮಾದರಿಗಳಿವೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಮಹೀಂದ್ರಾ ಮರಾಜೊ ಎಂಪಿವಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಈ ಎಂಪಿವಿಯಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಡಿಸ್ಕ್‌ಬ್ರೇಕ್, ಪಾರ್ಕಿಂಗ್ ಸೆನ್ಸಾರ್ ಅನ್ನು ನೀಡಲಾಗಿದೆ. ಮಹೀಂದ್ರಾ ಮರಾಜೊ ಬಿಎಸ್-6 ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ಆರಂಭಿಕೆ ಬೆಲೆಯು ರೂ.11 ಲಕ್ಷಗಳಾಗಿರಲಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಮರಾಜೊ

ಮಹೀಂದ್ರಾ ಮರಾಜೊ ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಇನೋವಾ ಕ್ರಿಸ್ಟಾ, ಮಾರುತಿ ಸುಜುಕಿ ಎರ್ಟಿಗಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Mahindra Marazzo BS6 variant spied testing in Chennai - Read in Kannada
Story first published: Monday, December 9, 2019, 18:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X