ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಮಹೀಂದ್ರಾ ಸಂಸ್ಥೆಯು ಸೆಪ್ಟೆಂಬರ್ 2018 ರಂದು ವಿಶೇಷವಾದ ವಿನ್ಯಾಸವುಳ್ಳ ಮರಾಜೊ ಎಂಪಿವಿ ಕಾರನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಕಾರಿಗೆ ಮಾರುಕಟ್ಟೆಯಲ್ಲಿ ಡಿಮ್ಯಾಂಡ್ ಅಧಿಕವಾದ ಕಾರಣ ನಾಶಿಕ್‍ನಲಿನ ಮಹೀಂದ್ರಾ ಪ್ಲಾಂಟ್‍‍ನಲ್ಲಿ ಇಲ್ಲಿಯ ವರೆಗು ಸುಮಾರು 25,000 ಮರಾಜೊ ಕಾರುಗಳನ್ನು ಉತ್ಪಾದನೆ ಮಾಡಲಾಗಿದೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಮಹೀಂದ್ರಾ ಸಂಸ್ಥೆಯು ಈ ನಿರ್ಣಯವನ್ನು ಖರೀದಿ ಮಾಡಿದ ಗ್ರಾಹಕರಿಗೆ ಕಾಯುವಿಕೆಯ ಅವಧಿಯನ್ನು ಕಡಿಮೆ ಮಾಡುವ ಸಲುವಾಗಿ ತೆಗೆದುಕೊಂಡಿದ್ದು, ಇದೀಗ ಈ ಕಾರನ್ನು ಖರೀದಿಸಿದವರಿಗೆ ಸುಮಾರು 4 ರಿಂದ 6 ವಾರಗಳ ಕಾಯುವಿಕೆಯ ಅವಧಿಯನ್ನು ನೀಡಲಾಗಿದೆ. ಮಹೀಂದ್ರಾ ಸಂಸ್ಥೆಯು ಮರಾಜೊ ಕಾರುಗಳನ್ನು ಬಿಡುಗಡೆ ಮಾಡಿದಾಗ ಅವುಗಳಿಗೆ ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 9.99 ಲಕ್ಷದ ಬೆಲೆಯನ್ನು ನಿಗದಿ ಮಾಡಲಾಗಿತ್ತು. ಆದರೆ ಬೆಲೆ ಏರಿಕೆಯ ನಂತರ ಸಂಸ್ಥೆಯು ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 10.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ನಿಗದಿ ಮಾಡಲಾಗಿದೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಇನ್ನು ಮರಾಜೊ' ಅಂದ್ರೆ ಸ್ಪಾನಿಷ್ ಭಾಷೆಯಲ್ಲಿ ತಿಮಿಂಗಿಲ ಎಂದರ್ಥ. ಇದೇ ಆಕಾರವನ್ನು ಹೊಂದಿರುವ ಈ ಕಾರು ಸಹ ಸದ್ದುಗದ್ದಲವಿಲ್ಲದೇ ಸರಾಗವಾಗಿ ನುಗ್ಗಬಲ್ಲ ಗುಣಹೊಂದಿದ್ದು, ಎಂಟ್ರಿ ಲೆವಲ್ ಎಂಪಿವಿ ಮಾರುತಿ ಸುಜುಕಿ ಎರ್ಟಿಗಾ ಹಾಗೂ ದುಬಾರಿ ಬೆಲೆಯ ಇನೋವಾ ಕ್ರಿಸ್ಟಾ ಕಾರುಗಳ ನಡುವಿನ ಅಂತರವನ್ನು ತುಂಬಲು ಈ ಹೊಸ ಉತ್ಪನ್ನವನ್ನು ಸಿದ್ದಗೊಳಿಸಲಾಗಿದೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾ ಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಕಾರಿನ ಒಳಾಂಗಣ

ವಿನ್ಯಾಸ ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್‌ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಾಯ್ಸ್‌ ಕಮಾಂಡ್‌ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ. ಇದೀಗ ಹೆಚ್ಚುವರಿಯಾಗಿ ಆ್ಯಪಲ್ ಕಾರ್ ಪ್ಲೇ ಸೇರಿದಂತೆ ಪ್ರಮುಖ ಬದಲಾವಣೆ ಮುಂದಾಗಿದೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ತುರ್ತುನಿರ್ವಹಣಾ ಕರೆ ಸೌಲಭ್ಯ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತುಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಎಂಜಿನ್ ಸಾಮರ್ಥ್ಯ

ಮಹೀಂದ್ರಾ ಮರಾಜೊ ಕಾರುಗಳು 1.5-ಲೀಟರ್(1500 ಸಿಸಿ) ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 120-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಹೊಸ ಮರಾಜೊ ಕಾರು 7- ಸೀಟರ್ ಮತ್ತು 8-ಸೀಟರ್ ಮಾದರಿಗಳು ಖರೀದಿಸಬಹುದಾಗಿದ್ದು, ಸದ್ಯದಲ್ಲೇ ಎಎಂಟಿ(ಆಟೋಮ್ಯಾಟಿಕ್ ಗೇರ್‌ಬಾಕ್ಸ್) ವರ್ಷನ್‌ಗಳು ಬಿಡುಗಡೆಯಾಗುವ ಬಗ್ಗೆ ಮಹೀಂದ್ರಾ ಸುಳಿವು ನೀಡಿದೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಕಾರಿನ ಮೇಲೆ ಗರಿಷ್ಠ

ವಾರಂಟಿ ಹೊಸ ಕಾರಿನ ಮೇಲೆ 3 ವರ್ಷ ಅಥವಾ 1 ಲಕ್ಷ ಕಿ.ಮೀ ವರೆಗೆ ವಾರಂಟಿ ದೊರೆಯಲಿದ್ದು, ಹೊಸ ಕಾರುಗಳು ಪ್ರತಿ ಲೀಟರ್ ಡೀಸೆಲ್‌ಗೆ 17.6 ಕಿ.ಮೀ ಮೈಲೇಜ್ ನೀಡುವ ಮೂಲಕ ಅತಿ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರಲಿವೆ.

ಬೆಲೆ ಏರಿಕೆಯ ನಂತರವೂ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೊ ಕಾರಿಗೆ ಹೆಚ್ಚಿದ ಡಿಮ್ಯಾಂಡ್..

ಸುರಕ್ಷಾ ಸೌಲಭ್ಯಗಳು

ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಸೌಲಭ್ಯವನ್ನು ಇರಿಸಲಾಗಿದೆ.

More from DriveSpark

Article Published On: Thursday, April 11, 2019, 9:31 [IST]
English summary
25,000th unit of the Mahindra Marazzo rolls out of Nashik Factory. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+