ತಿಂಗಳಿಗೆ ಮೂರು ಸಾವಿರ ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಮಹೀಂದ್ರಾ ಸಂಸ್ಥೆಯು 2018ರ ಸೆಪ್ಟೆಂಬರ್‍ ಮಾಸದಲ್ಲಿ ನಮ್ಮ ಹೊಸ ಮರಾಜೊ ಎಂಪಿವಿ ಕಾರನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಎರ್‍‍ಟಿಗಾ ಎಂಪಿವಿ ಕಾರುಗಳಿಗೆ ಪೈಪೋಟಿ ನೀಡುತ್ತಿದೆ. ಬಿಡುಗಡೆಗೊಂಡ ಸುಮಾರು 6 ತಿಂಗಳಿನಲ್ಲಿ 20000ಕ್ಕು ಹೆಚ್ಚಿನ ಮರಾಜೊ ಕಾರುಗಳು ಮಾರಾಟವಾಗಿದ್ಯಂತೆ.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಮಹೀಂದ್ರಾ ಮರಾಜೊ ಕಾರು 7 ಮತ್ತು 8 ಸೀಟರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಹಲವಾರು ವೈಶಿಷ್ಟ್ಯತೆಗಳೊಂದಿಗೆ ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 9.99 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಮಾರಾಟ ವರದಿಗಳ ಪ್ರಕಾರ ಪ್ರತೀ ತಿಂಗಳೂ 3000 ಮರಾಜೊ ಕಾರುಗಳು ಮಾರಾಟವಾಗುತ್ತಿದ್ದು, ಈ ಕಾರಿನಲ್ಲಿ ಏನುಂಟು ಏನಿಲ್ಲ ಎಂಬುದನ್ನು ತಿಳಿಯಲು ಮುಂದಕ್ಕೆ ಓದಿರಿ..

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಮಹೀಂದ್ರಾ ಸಂಸ್ಥೆಯು ಈ ನಿರ್ಣಯವನ್ನು ಖರೀದಿ ಮಾಡಿದ ಗ್ರಾಹಕರಿಗೆ ಕಾಯುವಿಕೆಯ ಅವಧಿಯನ್ನು ಕಡಿಮೆ ಮಾಡುವ ಸಲುವಾಗಿ ತೆಗೆದುಕೊಂಡಿದ್ದು, ಇದೀಗ ಈ ಕಾರನ್ನು ಖರೀದಿಸಿದವರಿಗೆ ಸುಮಾರು 4 ರಿಂದ 6 ವಾರಗಳ ಕಾಯುವಿಕೆಯ ಅವಧಿಯನ್ನು ನೀಡಲಾಗಿದೆ.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಇನ್ನು ಮರಾಜೊ' ಅಂದ್ರೆ ಸ್ಪಾನಿಷ್ ಭಾಷೆಯಲ್ಲಿ ತಿಮಿಂಗಿಲ ಎಂದರ್ಥ. ಇದೇ ಆಕಾರವನ್ನು ಹೊಂದಿರುವ ಈ ಕಾರು ಸಹ ಸದ್ದುಗದ್ದಲವಿಲ್ಲದೇ ಸರಾಗವಾಗಿ ನುಗ್ಗಬಲ್ಲ ಗುಣಹೊಂದಿದ್ದು, ಎಂಟ್ರಿ ಲೆವಲ್ ಎಂಪಿವಿ ಮಾರುತಿ ಸುಜುಕಿ ಎರ್ಟಿಗಾ ಹಾಗೂ ದುಬಾರಿ ಬೆಲೆಯ ಇನೋವಾ ಕ್ರಿಸ್ಟಾ ಕಾರುಗಳ ನಡುವಿನ ಅಂತರವನ್ನು ತುಂಬಲು ಈ ಹೊಸ ಉತ್ಪನ್ನವನ್ನು ಸಿದ್ದಗೊಳಿಸಲಾಗಿದೆ.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾ ಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಕಾರಿನ ಒಳಾಂಗಣ

ವಿನ್ಯಾಸ ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್‌ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಾಯ್ಸ್‌ ಕಮಾಂಡ್‌ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ. ಇದೀಗ ಹೆಚ್ಚುವರಿಯಾಗಿ ಆ್ಯಪಲ್ ಕಾರ್ ಪ್ಲೇ ಸೇರಿದಂತೆ ಪ್ರಮುಖ ಬದಲಾವಣೆ ಮುಂದಾಗಿದೆ.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ತುರ್ತುನಿರ್ವಹಣಾ ಕರೆ ಸೌಲಭ್ಯ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಎಂಜಿನ್ ಸಾಮರ್ಥ್ಯ

ಮಹೀಂದ್ರಾ ಮರಾಜೊ ಕಾರುಗಳು 1.5-ಲೀಟರ್(1500 ಸಿಸಿ) ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 120-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಹೊಸ ಮರಾಜೊ ಕಾರು 7- ಸೀಟರ್ ಮತ್ತು 8-ಸೀಟರ್ ಮಾದರಿಗಳು ಖರೀದಿಸಬಹುದಾಗಿದ್ದು, ಸದ್ಯದಲ್ಲೇ ಎಎಂಟಿ(ಆಟೋಮ್ಯಾಟಿಕ್ ಗೇರ್‌ಬಾಕ್ಸ್) ವರ್ಷನ್‌ಗಳು ಬಿಡುಗಡೆಯಾಗುವ ಬಗ್ಗೆ ಮಹೀಂದ್ರಾ ಸುಳಿವು ನೀಡಿದೆ.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಕಾರಿನ ಮೇಲೆ ಗರಿಷ್ಠ ವಾರಂಟಿ

ಹೊಸ ಕಾರಿನ ಮೇಲೆ 3 ವರ್ಷ ಅಥವಾ 1 ಲಕ್ಷ ಕಿ.ಮೀ ವರೆಗೆ ವಾರಂಟಿ ದೊರೆಯಲಿದ್ದು, ಹೊಸ ಕಾರುಗಳು ಪ್ರತಿ ಲೀಟರ್ ಡೀಸೆಲ್‌ಗೆ 17.6 ಕಿ.ಮೀ ಮೈಲೇಜ್ ನೀಡುವ ಮೂಲಕ ಅತಿ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರಲಿವೆ.

ತಿಂಗಳಿಗೆ 3000 ಮಹೀಂದ್ರಾ ಮಾರಾಜೊ ಕಾರುಗಳು ಮಾರಾಟವಾಗ್ತಿದ್ಯಂತೆ.!

ಸುರಕ್ಷಾ ಸೌಲಭ್ಯಗಳು

ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಸೌಲಭ್ಯವನ್ನು ಇರಿಸಲಾಗಿದೆ.

Most Read Articles

Kannada
English summary
Mahindra Marazzo Sales In India — New Sales Milestone Since Launch. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more