Just In
- 1 hr ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 1 hr ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 1 hr ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 3 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ
ಮಹೀಂದ್ರಾ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳ ಬಿಎಸ್-6 ಮಾದರಿಗಳನ್ನು ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸಿದ್ದು, ವರ್ಷಾಂತ್ಯದೊಳಗೆ ಹೊಸ ತಲೆಮಾರಿನ ಸ್ಕಾರ್ಪಿಯೋ ಸೇರಿದಂತೆ ಒಟ್ಟು ಏಳು ಬಿಎಸ್-6 ಕಾರು ಆವೃತ್ತಿಗಳನ್ನು ರಸ್ತೆಗಿಳಿಸಲಿದೆ.
ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳ ಬಿಡುಗಡೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದ್ದು, ಡೆಡ್ಲೈನ್ಗೂ ಮುನ್ನವೇ ಮಹೀಂದ್ರಾ ಕೂಡಾ ತನ್ನ ಹೊಸ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ. ಇದರಲ್ಲಿ ನೆಕ್ಸ್ಟ್ ಜನರೇಷನ್ ಸ್ಕಾರ್ಪಿಯೋ, ಎಕ್ಸ್ಯುವಿ300, ಟಿಯುವಿ300, ಟಿಯುವಿ300 ಪ್ಲಸ್ ಪ್ರಮುಖವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೊಸ ಆವೃತ್ತಿಯು ಸಾಕಷ್ಟು ವಿಭಿನ್ನತೆ ಹೊಂದಿರಲಿವೆ.
2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದ್ದು, ಮಹೀಂದ್ರಾ ಕೂಡಾ ನೆಕ್ಸ್ಟ್ ಜನರೇಷನ್ ಕಾರು ಮಾದರಿಗಳ ಜೊತೆಗೆ ಫೇಸ್ಲಿಫ್ಟ್ ಕಾರು ಮಾದರಿಯನ್ನು ಸಹ ಹೊಸ ನಿಯಮಕ್ಕೆ ಅನುಗುಣವಾಗಿ ಬಿಡುಗಡೆ ಮಾಡಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಹೊಸ ಎಂಜಿನ್ ಮಾದರಿಯನ್ನು ಜೋಡಿಸಲಾಗಿರುವ ಟಿಯುವಿ300 ಪ್ಲಸ್ ಮಾದರಿಯನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಚೆನ್ನೈ ಹೊರವಲಯದಲ್ಲಿ ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾದ ಅಂತಿಮ ಹಂತದ ಟೆಸ್ಟಿಂಗ್ ಪೂರ್ಣಗೊಳಿಸಲಾಗುತ್ತಿದೆ.
ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.
ಇದರಲ್ಲಿ ಮಹೀಂದ್ರಾ ನಿರ್ಮಾಣದ ಟಿಯುವಿ300 ಪ್ಲಸ್, ಸ್ಕಾರ್ಪಿಯೋ, ಎಕ್ಸ್ಯುವಿ500, ಎಕ್ಸ್ಯುವಿ300 ಮತ್ತು ನ್ಯೂ ಜನರೇಷನ್ ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಮಹೀಂದ್ರಾ ಹೊಸ ಕಾರುಗಳು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ.
ಹೀಗಾಗಿ ಬಿಡುಗಡೆಯ ಉದ್ದೇಶಕ್ಕಾಗಿಯೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಸ್ಕಾರ್ಪಿಯೋ, ಎಕ್ಸ್ಯುವಿ500, ಎಕ್ಸ್ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳ ಎಲ್ಲಾ ಆವೃತ್ತಿಯಲ್ಲೂ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.
MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ
ಹಾಗೆಯೇ 6 ಏರ್ಬ್ಯಾಗ್ಗಳು(ಟಾಪ್ ಎಂಡ್ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್ಗಳಲ್ಲಿ ಸನ್ರೂಫ್, ರೂಫ್ ರೈಲ್ಸ್, ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!
ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್ಯುವಿ500, ಎಕ್ಸ್ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.
Source: Gaadiwaadi