ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳ ಬಿಎಸ್-6 ಮಾದರಿಗಳನ್ನು ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸಿದ್ದು, ವರ್ಷಾಂತ್ಯದೊಳಗೆ ಹೊಸ ತಲೆಮಾರಿನ ಸ್ಕಾರ್ಪಿಯೋ ಸೇರಿದಂತೆ ಒಟ್ಟು ಏಳು ಬಿಎಸ್-6 ಕಾರು ಆವೃತ್ತಿಗಳನ್ನು ರಸ್ತೆಗಿಳಿಸಲಿದೆ.

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳ ಬಿಡುಗಡೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದ್ದು, ಡೆಡ್‌ಲೈನ್‌ಗೂ ಮುನ್ನವೇ ಮಹೀಂದ್ರಾ ಕೂಡಾ ತನ್ನ ಹೊಸ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ. ಇದರಲ್ಲಿ ನೆಕ್ಸ್ಟ್ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ300, ಟಿಯುವಿ300, ಟಿಯುವಿ300 ಪ್ಲಸ್ ಪ್ರಮುಖವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೊಸ ಆವೃತ್ತಿಯು ಸಾಕಷ್ಟು ವಿಭಿನ್ನತೆ ಹೊಂದಿರಲಿವೆ.

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದ್ದು, ಮಹೀಂದ್ರಾ ಕೂಡಾ ನೆಕ್ಸ್ಟ್ ಜನರೇಷನ್ ಕಾರು ಮಾದರಿಗಳ ಜೊತೆಗೆ ಫೇಸ್‌ಲಿಫ್ಟ್ ಕಾರು ಮಾದರಿಯನ್ನು ಸಹ ಹೊಸ ನಿಯಮಕ್ಕೆ ಅನುಗುಣವಾಗಿ ಬಿಡುಗಡೆ ಮಾಡಲು ನಿರ್ಧರಿಸಿದೆ.

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಈ ಹಿನ್ನೆಲೆಯಲ್ಲಿ ಹೊಸ ಎಂಜಿನ್ ಮಾದರಿಯನ್ನು ಜೋಡಿಸಲಾಗಿರುವ ಟಿಯುವಿ300 ಪ್ಲಸ್ ಮಾದರಿಯನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಚೆನ್ನೈ ಹೊರವಲಯದಲ್ಲಿ ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾದ ಅಂತಿಮ ಹಂತದ ಟೆಸ್ಟಿಂಗ್ ಪೂರ್ಣಗೊಳಿಸಲಾಗುತ್ತಿದೆ.

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಇದರಲ್ಲಿ ಮಹೀಂದ್ರಾ ನಿರ್ಮಾಣದ ಟಿಯುವಿ300 ಪ್ಲಸ್, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ನ್ಯೂ ಜನರೇಷನ್ ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಮಹೀಂದ್ರಾ ಹೊಸ ಕಾರುಗಳು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ.

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಹೀಗಾಗಿ ಬಿಡುಗಡೆಯ ಉದ್ದೇಶಕ್ಕಾಗಿಯೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದೆ.

MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿ‍ಎಲ್ ಕಳೆದುಕೊಂಡ ಡ್ರೈವರ್..!

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳ ಎಲ್ಲಾ ಆವೃತ್ತಿಯಲ್ಲೂ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಹಾಗೆಯೇ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!

ಮಹತ್ವದ ಬದಲಾವಣೆಯೊಂದಿಗೆ ಬರಲಿದೆ 2020ರ ಮಹೀಂದ್ರಾ ಸ್ಕಾರ್ಪಿಯೋ

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

Source: Gaadiwaadi

Most Read Articles

Kannada
English summary
Mahindra New Scorpio Spied Closely On Test Again In India.
Story first published: Friday, November 22, 2019, 19:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X