ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ300 7 ಸೀಟರ್ ವರ್ಷನ್
ಮಹೀಂದ್ರಾ ಈಗಾಗಲೇ ಎಸ್‌ಯುವಿ ಕಾರು ಮಾರಾಟದಲ್ಲಿ ಮುನ್ನಡೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ. ಈ ಕುರಿತು ಅಧಿಕೃತ ಮಾಹಿತಿ ಬಿಚ್ಚಿಟ್ಟಿರುವ ಮಹೀಂದ್ರಾ ಸಂಸ್ಥೆಯು 7 ಸೀಟರ್ ಮಾದರಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವುದಾಗಿ ಹೇಳಿಕೊಂಡಿರುವುದಲ್ಲದೇ ಹೊಸ ಕಾರನ್ನು ಎಸ್204 ಹೆಸರಿನಲ್ಲಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೂ ಚಾಲನೆ ನೀಡಿದೆ.

ಸ್ಯಾಂಗ್‌ಯಾಂಗ್ ಕಾರುಗಳ ಡಿಸೈನ್ ಕುರಿತಾಗಿ ಇತ್ತೀಚೆಗೆ ಯುರೋಪಿನ್ ಮಾಧ್ಯಮ ಸಂಸ್ಥೆಗಳು ಮಾಡಿದ ವರದಿಯಲ್ಲಿ ಮಾತೃಸಂಸ್ಥೆಯಾದ ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಕಾರು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೆಲವು ಮಹತ್ವದ ಬದಲಾವಣೆಗಳನ್ನು ಹೊಂದಲಿದೆ ಎಂದು ವರದಿ ಮಾಡಲಾಗಿತ್ತು. ಅದಕ್ಕೆ ಪೂರಕ ಎಂಬಂತೆ ಹೊಸ 7 ಸೀಟರ್ ಆವೃತ್ತಿಯನ್ನು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ300 ಮಾದರಿಯು 5-ಸೀಟರ್ ಮಾದರಿಯಲ್ಲಿ ಮಾರಾಟವಾಗುತ್ತಿದ್ದು, 7-ಸೀಟರ್ ಮಾದರಿಗಾಗಿ ಹೊಸ ಕಾರಿನಲ್ಲಿ 3 ನೇ ಸಾಲನ್ನು ವಿಸ್ತರಿಸಲು ಕಾರಿನ ಉದ್ದಳತೆ ಮಹತ್ವದ ಬದಲಾವಣೆ ತರಲಾಗಿದೆ.

ಸಬ್ 4 ಮೀಟರ್ ಇರುವ ಎಕ್ಸ್‌ಯುವಿ300 ಕಾರು 7 ಸೀಟರ್ ಮಾದರಿಗಾಗಿ 4.44 ಮೀಟರ್‌ಗೆ ವಿಸ್ತರಿಸಲಾಗುತ್ತಿದ್ದು, ಸ್ಯಾಂಗ್‌ಯಾಂಗ್ ಸಂಸ್ಥೆಯ ಟಿವೊಲಿ ಎಕ್ಸ್ಎಲ್‌ವಿ ಮಾದರಿಯಲ್ಲಿ 3ನೇ ಸಾಲಿನ ಆಸನ ಸೌಲಭ್ಯವನ್ನು ವಿಸ್ತರಣೆ ಮಾಡಿರುವುದು ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಹೊಸ ಕಾರಿನಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ.

ಹ್ಯುಂಡೈ ಕೂಡಾ ತನ್ನ ಜನಪ್ರಿಯ ಕ್ರೆಟಾ ಆವೃತ್ತಿಯಲ್ಲೂ ಸಹ 7 ಸೀಟರ್ ವರ್ಷನ್ ಅಭಿವೃದ್ದಿಗೊಳಿಸಿದ್ದು, 2020ರ ಆರಂಭದಲ್ಲಿ ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಕ್ರೆಟಾ ಕಾರು 5 ಸೀಟರ್ ಮತ್ತು 7 ಸೀಟರ್ ಆಯ್ಕೆಯನ್ನು ಹೊಂದಿರಲಿದೆ. ಇದೇ ಪರಿಕಲ್ಪನೆ ಮೇಲೆ ಎಕ್ಸ್‌ಯುವಿ300 ಮಾದರಿಯನ್ನು 7 ಸೀಟರ್ ಆವೃತ್ತಿಯಾಗಿ ಅಭಿವೃದ್ದಿಗೊಳಿಸಲು ನಿರ್ಧರಿಸಿರುವ ಮಹೀಂದ್ರಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳನ್ನು ಮಾರಾಟ ಮಾಡಲಿದೆ.

ಮಾಹಿತಿಗಳ ಪ್ರಕಾರ ಎಕ್ಸ್‌ಯುವಿ 300 5ಸೀಟರ್ ಆವೃತ್ತಿಗೂ ಮತ್ತು 7 ಸೀಟರ್ ಆವೃತ್ತಿಗೂ ರೂ.1 ಲಕ್ಷದಿಂದ ರೂ.1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದ್ದು, ಹೊಸ 7 ಸೀಟರ್ ಕಾರು ಬಿಎಸ್-6 ಪ್ರೇರಿತ 1.5-ಲೀಟರ್ ಜಿಡಿಐ ಟರ್ಬೋ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿ ಲಭ್ಯವಾಗಲಿಯೆಂತೆ.

ಆದರೆ 5 ಸೀಟರ್ ಎಕ್ಸ್‌ಯುವಿ300 ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಬಿಡುಗಡೆಯ ಸನಿಹದಲ್ಲಿರುವ ಕಿಯಾ ಸೆಲ್ಟೊಸ್ 7 ಸೀಟರ್, ಹ್ಯುಂಡೈ ಕ್ರೆಟಾ 7 ಸೀಟರ್ ಮತ್ತು ಎಂಜಿ ಹೆಕ್ಟರ್ 7 ಸೀಟರ್ ಕಾರುಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.
MOST READ: ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಮಾರುಕಟ್ಟೆಯಲ್ಲಿ ಸದ್ಯಕ್ಕೆ ಎಕ್ಸ್‌ಯುವಿ300 ಕಾರುಗಳು ಒಟ್ಟು ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ವೆರಿಯೆಂಟ್‌ಗಳನ್ನು ಸಹ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಸಬಹುದಾಗಿದೆ.
MOST READ: ಸಾಮಾನ್ಯ ಪೆಟ್ರೋಲ್ ಕಾರಿಗಿಂತಲೂ ಶೇ.80 ರಷ್ಟು ಅಗ್ಗ ಹ್ಯುಂಡೈ ಕೊನಾ ರನ್ನಿಂಗ್ ಕಾಸ್ಟ್..!

ಇದರಲ್ಲಿ ಟಾಪ್ ಎಂಡ್ ಆವೃತ್ತಿಯಲ್ಲಿ ಮಾತ್ರವೇ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಇನ್ನುಳಿದ ಎರಡು ವೆರಿಯೆಂಟ್‌ಗಳಲ್ಲಿ 6 -ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.
MOST READ: ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಕಾರಿನಲ್ಲಿ ನೀಡಲಾಗಿರುವ ಫೀಚರ್ಸ್‌ಗೆ ಅನುಗುಣವಾಗಿ ಬೆಲೆ ನಿಗದಿ ಮಾಡಲಾಗಿದ್ದು, ಮ್ಯಾನುವಲ್ ಕಾರುಗಳು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.8.10 ಲಕ್ಷಕ್ಕೆ ಮತ್ತು ಹೈಎಂಡ್ ಮಾದರಿಯು ರೂ. 12.70 ಲಕ್ಷ ಬೆಲೆ ಹೊಂದಿದ್ದು, 2020 ಮಧ್ಯಂತರದಲ್ಲಿ ಬಿಡುಗಡೆಯಾಗಲಿರುವ 7 ಸೀಟರ್ ಎಕ್ಸ್‌ಯುವಿ300 ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 13 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.
Source: Carandbike


Click it and Unblock the Notifications








