2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಮಹೀಂದ್ರಾ ಸಂಸ್ಥೆಯು ತಮ್ಮ ಹೊಸ ತಲೆಮಾರಿನ ಸ್ಕಾರ್ಪಿಯೊ ಕಾರನ್ನು ಬಿಡುಗಡೆಗೊಳಿಸುವ ಯೋಜನೆಯಲಿದ್ದು, ಸಧ್ಯಕ್ಕೆ ಎಂಜಿನ್ ಕಾರ್ಯಕ್ಷಮತೆಯನು ಪರೀಕ್ಷಿಸುವ ಕಾರ್ಯದಲ್ಲಿದೆ. ಹೀಗಾಗಿ ಮುಂದಿನ ವರ್ಷ ಮಹೀಂದ್ರಾ ಸಂಸ್ಥೆಯು ಬಿಡುಗಡೆಗೊಳಿಸಲಿರುವ ಕಾರುಗಳಲ್ಲಿ ಇದು ಕೂಡಾ ಒಂದಾಗಿರಲಿದ್ದು, 2020ರ ಆಟೋ ಎಕ್ಸ್‌ಪೋ ಮೇಳದಲ್ಲಿ ಪ್ರದರ್ಶಿಸಲಾಗುತ್ತದೆ ಎಂಬ ಮಾಹಿತಿಯು ಲಭ್ಯವಾಗಿದೆ.

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಮಹೀಂದ್ರಾ ಸಂಸ್ಥೆಯು ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಕಾರುಗಳ ಉತ್ಪನ್ನಗಳಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, 2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದೆ. ಇದರಲ್ಲಿ ನೆಕ್ಸ್ಟ್ ಜನರೇಷನ್ ಸ್ಕಾರ್ಪಿಯೋ ಹೊಸ ನೀರಿಕ್ಷೆ ಹುಟ್ಟುಹಾಕಿದ್ದು, ಬಿಡುಗಡೆಯ ಉದ್ದೇಶದಿಂದ ಇದೇ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದೆ.

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ನೆಕ್ಸ್ಟ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಎಕ್ಸ್‌ಯುವಿ 500 ಮತ್ತು ಥಾರ್ ಕಾರುಗಳು ಈಗಾಗಲೇ ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಇದೇ ಮೊದಲ ಬಾರಿಗೆ ಸ್ಕಾರ್ಪಿಯೋ ಮಾದರಿಯು ಸಹ ವಿಶೇಷ ವಿನ್ಯಾಸ ಗಳೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. 2020ರ ಮಧ್ಯಂತರದಲ್ಲಿ ಸ್ಕಾರ್ಪಿಯೋ ನೆಕ್ಸ್ಟ್ ಜನರೇಷನ್ ಆವೃತ್ತಿಯು ಬಿಡುಗಡೆಯಾಗಲಿದ್ದು, ಹಳೆಯ ಮಾದರಿಗಿಂತ ಹೊಸ ಸ್ಕಾರ್ಪಿಯೋ ಮಾದರಿಯು ಹಲವಾರು ಬದಲಾವಣೆಗಳೊಂದಿಗೆ ರಸ್ತೆಗಿಳಿದಿದೆ.

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಲ್ಯಾಡರ್ ಫ್ರೇಮ್ ಚಾರ್ಸಿಸ್ ತಂತ್ರಜ್ಞಾನದಡಿ ನಿರ್ಮಾಣವಾಗಿರುವ ಹೊಸ ಸ್ಕಾರ್ಪಿಯೋ ಆವೃತ್ತಿಯು ಈ ಹಿಂದಿನ ಆವೃತ್ತಿಗಿಂತಲೂ ತುಸು ಹೆಚ್ಚಿನ ವೀಲ್ಹ್ ಬೇಸ್ ಪಡೆದುಕೊಂಡಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಮತ್ತಷ್ಟು ಸ್ಥಳಾವಕಾಶ ದೊರೆಯಲಿದೆ.

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಜೊತೆಗೆ ಮುಂಭಾಗದ ಡಿಸೈನ್‌ನಲ್ಲೂ ಈ ಹಿಂದಿನ ಆವೃತ್ತಿಗಿಂತ ಅತಿ ಹೆಚ್ಚು ಬದಲಾವಣೆ ಪಡೆದುಕೊಂಡಿರುವ ಹೊಸ ಸ್ಕಾರ್ಪಿಯೋದಲ್ಲಿ ವಿಶೇಷ ವಿನ್ಯಾಸದ ಗ್ರೀಲ್, ಸ್ಪೋಟಿ ಬಂಪರ್ ಮತ್ತು ಕ್ರ್ಯಾಶ್ ಟೆಸ್ಟಿಂಗ್ ನಿಯಮಾವಳಿ ಪ್ರಕಾರ ಮುಂಭಾಗದ ಬ್ಯಾನೆಟ್ ವಿನ್ಯಾಸವು ಹೊಸ ಕಾರಿಗೆ ಮತ್ತಷ್ಟು ಮೆರಗು ನೀಡಿವೆ.

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಹಾಗೆಯೇ ಹೊಸ ಸ್ಕಾರ್ಪಿಯೋದಲ್ಲಿ ಒಳಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಮಲ್ಟಿ ಫಂಕ್ಷನ್ ಕಂಟ್ರೊಲರ್ ಸ್ಟೀರಿಂಗ್ ವೀಲ್ಹ್, ಸುಧಾರಿತ ಮಾದರಿಯ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡ್ಯುಯರ್ ಕಲರ್ ಡ್ಯಾಶ್‌ಬೋರ್ಡ್ ಮತ್ತು ಅತಿ ಕಡಿಮೆ ಅವಧಿಯಲ್ಲಿ ಉಷ್ಣಾಂಶವನ್ನು ಹಿರಿಕೊಂಡು ತಂಪಾಗಿಸಬಲ್ಲ ಲೇದರ್ ಸೀಟುಗಳು ಪ್ರಯಾಣವನ್ನು ಮತ್ತಷ್ಟು ಸುಖಕರವಾಗಿಸಲಿವೆ. ಇದಲ್ಲದೇ ಬಿಎಸ್-6 ನಿಯಮಗಳಿಗೆ ಅನುಗುಣವಾಗಿ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳನ್ನು ಉನ್ನತಿಕರಿಸುವುದರ ಜೊತೆಗೆ ಮತ್ತಷ್ಟು ಹೊಸ ಫೀಚರ್ಸ್‌ಗಳನ್ನು ನೀಡಲಾಗಿದೆ.

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಚಾಲಕ ಮತ್ತು ಪ್ರಯಾಣಿಕರ ವಿಭಾಗದಲ್ಲಿ ಒಟ್ಟು 6 ಏರ್‌ಬ್ಯಾಗ್‌ಗಳು, ಸ್ಟಾಂಡಂರ್ಡ್ ಆಗಿ ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್‌ಗಳು, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲರ್ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

MOST READ:ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ ಮಾರಾಟದಲ್ಲಿ ಮಿಂಚುತ್ತಿದೆ ಮಾರುತಿ ಬಲೆನೊ

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಎಂಜಿನ್ ಸಾಮರ್ಥ್ಯ

ಹೊಸ ಸ್ಕಾರ್ಪಿಯೋ ಮಾದರಿಯು ಮೇಲೆ ಹೇಳಿದಂತೆ ಬಿಎಸ್-6 ನಿಯಮಗಳಿಗೆ ಅನುಗುಣವಾಗಿ ಅಭಿವೃದ್ಧಿ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪ್ರೇರಿತ 2.0-ಲೀಟರ್ ಹೊಸ ಡೀಸೆಲ್ ಎಂಜಿನ್‌ ಮಾದರಿಯು 170-ಬಿಎಚ್‌ಪಿ ಮತ್ತು 400-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಮಧ್ಯಮ ಕ್ರಮಾಂಕದ ಎಸ್‌ಯುವಿಗಳಲ್ಲಿ ಬಲಿಷ್ಠ ಎಂಜಿನ್ ಮಾದರಿ ಎನ್ನಿಸಲಿದೆ.

MOST READ: ರಾಜ್ಯದೆಲ್ಲೆಡೆ ಎಂಬತ್ತೊಂಬತ್ತು ಸಾವಿರಕ್ಕು ಹೆಚ್ಚಿನ ಡ್ರೈವಿಂಗ್ ಲೈಸೆನ್ಸ್ ರದ್ದು

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಇನ್ನು ಕೆಲವು ಮಾಹಿತಿಗಳ ಪ್ರಕಾರ, ಸ್ಕಾರ್ಪಿಯೋ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ನೆಕ್ಸ್ಟ್ ಜನರೇಷನ್ ಥಾರ್ ಹಾಗೂ ಎಕ್ಸ್‌ಯುವಿ 500 ಮಾದರಿಯಲ್ಲೂ ಬಳಕೆ ಮಾಡಲಾಗುತ್ತಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಆವೃತ್ತಿಗಳು ಸಹ ಹೊಸ ಸ್ಕಾರ್ಪಿಯೋದಲ್ಲಿ ಲಭ್ಯವಾಗಲಿವೆಯೆಂತೆ.

MOST READ: ಶೀಘ್ರವೇ ಬ್ಯಾನ್ ಆಗಲಿವೆ 150ಸಿಸಿಗಿಂತಲೂ ಕಡಿಮೆ ಸಾಮರ್ಥ್ಯದ ವಾಹನಗಳು

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಬಿಡುಗಡೆಯ ಅವಧಿ ಮತ್ತು ಬೆಲೆಗಳು(ಅಂದಾಜು)

ಹೊಸ ಸ್ಕಾರ್ಪಿಯೋ ಸದ್ಯ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ಆಟೋ ಎಕ್ಸ್‌ಪೋದಲ್ಲಿ ನೆಕ್ಸ್ಟ್ ಜನರೇಷನ್ ಥಾರ್ ಮತ್ತು ಎಕ್ಸ್‌ಯುವಿ 500 ಜೊತೆ ಸ್ಕಾರ್ಪಿಯೋ ಸಹ ಪ್ರದರ್ಶನಗೊಳ್ಳಲಿದೆ.

2020 ಆಟೋ ಎಕ್ಸ್‌ಪೋ ಮೇಳದಲ್ಲಿ ಕಾಣಿಸಿಕೊಳ್ಳಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೊ

ಸದ್ಯ ಎಕ್ಸ್‌ ಶೋರೂಂ ಪ್ರಕಾರ ಸ್ಕಾರ್ಪಿಯೋ ಕಾರುಗಳು ಆರಂಭಿಕವಾಗಿ ರೂ. 10 ಲಕ್ಷದಿಂದ ಹೈ ಎಂಡ್ ಮಾದರಿಗೆ ರೂ. 16.45 ಲಕ್ಷ ಬೆಲೆ ಹೊಂದಿದ್ದು, ಹಳೆಯ ಮಾದರಿಗಿಂತ ವಿನೂತನ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಆರಂಭಿಕವಾಗಿ ರೂ.11.50 ಲಕ್ಷದಿಂದ ಹೈ ಎಂಡ್ ಮಾದರಿಗೆ ರೂ.18 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Source: Team BHP

Most Read Articles

Kannada
English summary
Mahindra Scorpio Spotted Again In Tamilnadu With New Front Grill. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X