ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಬಿಎಸ್-6 ವಾಹನ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿರುವ ಮಹೀಂದ್ರಾ ಸಂಸ್ಥೆಯು ನಿನ್ನೆಯಷ್ಟೇ ಹೊಸ ನಿಯಮ ಅನುಸಾರ ಎಕ್ಸ್‌ಯುವಿ 300 ಪೆಟ್ರೋಲ್ ಮಾದರಿಯನ್ನು ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಸದ್ಯದಲ್ಲಿ ನೆಕ್ಸ್ಟ್ ಜನರೇಷನ್ ಥಾರ್, ಸ್ಕಾರ್ಪಿಯೋ ಮತ್ತು ಬೊಲೆರೊ ಕಾರುಗಳ ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸಿದೆ.

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಉನ್ನತಿಕರಿಸಿ ಮಾರಾಟಕ್ಕೆ ಚಾಲನೆ ನೀಡಿದ್ದು, ಮಹೀಂದ್ರಾ ಕೂಡಾ ನೆಕ್ಸ್ಟ್ ಜನರೇಷನ್ ಥಾರ್ ಮಾದರಿಯನ್ನು ಸಹ ಹೊಸ ನಿಯಮಕ್ಕೆ ಅನುಗುಣವಾಗಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ಬಾರಿ ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಆಯ್ಕೆ ಪಡೆದುಕೊಳ್ಳುತ್ತಿರುವ ಥಾರ್‌ನಲ್ಲಿ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 6 ಸೀಟರ್ ಆವೃತ್ತಿಗಳನ್ನು ಸಹ ಬಿಡುಗಡೆಗೊಳಿಸಲಿದೆ.

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

5 ಸೀಟರ್ ಮಾದರಿಯು ಸಾಮಾನ್ಯ ಕಾರುಗಳಲ್ಲಿರುವಂತೆ ಆಸನ ಸೌಲಭ್ಯವನ್ನು ಹೊಂದಿರಲಿದ್ದು, 6 ಸೀಟರ್ ಮಾದರಿಯು ಆಫ್ ರೋಡ್ ಪ್ರಯಾಣಕ್ಕೆ ಸುಲಭವಾಗುವಂತೆ ಎರಡನೇ ಸಾಲಿನ ಆಸನಗಳನ್ನು ಎದುರುಬದುರಾಗಿ ನೀಡಲಾಗಿರುತ್ತದೆ.

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಇನ್ನು ಹೊಸ ಥಾರ್ ಕಾರು ಈ ಬಾರಿ 2.2-ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ ಎನ್ನಲಾಗಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಇದರಲ್ಲಿ ಟಿಯುವಿ300 ಪ್ಲಸ್, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ನೆಕ್ಸ್ಟ್ ಜನರೇಷನ್ ಥಾರ್, ಸ್ಕಾರ್ಪಿಯೋ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರುಗಳು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ.

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಹಾಗೆಯೇ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

MOST READ: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ಚಾರ್ಜಿಂಗ್ ಸೌಲಭ್ಯ ನೀಡದ ಬಸ್ಸಿಗೆ ಬಿತ್ತು 5,000 ದಂಡ

ನೆಕ್ಸ್ಟ್ ಜನರೇಷನ್ ಥಾರ್‌ನಲ್ಲಿ ಹೊಸ ಮಾದರಿಯ ಆಸನ ಸೌಲಭ್ಯ ನೀಡಿದ ಮಹೀಂದ್ರಾ

ಇದಲ್ಲದೇ ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.10 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ.90 ಸಾವಿರದಿಂದ ರೂ. 2 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

Source: Gaadiwaadi

More from DriveSpark

Article Published On: Thursday, December 5, 2019, 8:45 [IST]
English summary
Mahindra Thar BS-6 spied testing ahead of launch next year auto expo. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+