Just In
- 47 min ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 3 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 3 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್
ಮಹೀಂದ್ರಾ ಸಂಸ್ಥೆಯು ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಕಾರು ಉತ್ಪನ್ನಗಳಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, 2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದೆ. ಇದರಲ್ಲಿ ನೆಕ್ಸ್ಟ್ ಜನರೇಷನ್ ಕಾರು ಮಾದರಿಗಳು ಸೇರಿದಂತೆ ಕಳೆದ ವರ್ಷ ಬಿಡುಗಡೆಯಾಗಿದ್ದ ಟಿಯುವಿ300 ಪ್ಲಸ್ ಮಾದರಿಯು ಕೂಡಾ ಬಿಎಸ್-6 ಎಂಜಿನ್ನೊಂದಿಗೆ ಬರುವುದು ಬಹುತೇಕ ಖಚಿತವಾಗಿದೆ.
ನೆಕ್ಸ್ಟ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಎಕ್ಸ್ಯುವಿ500, ಸ್ಕಾರ್ಪಿಯೋ ಮತ್ತು ಥಾರ್ ಕಾರುಗಳು ಈಗಾಗಲೇ ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಇದೇ ಮೊದಲ ಬಾರಿಗೆ ಟಿಯುವಿ300 ಪ್ಲಸ್ ಮಾದರಿಯು ಸಹ ವಿಶೇಷ ವಿನ್ಯಾಸ ಗಳೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. 2020ರ ಏಪ್ರಿಲ್ 1 ರ ಒಳಗಾಗಿ ಹೊಸ ಬಿಎಸ್-6 ಎಂಜಿನ್ ಪ್ರೇರಿತ ಟಿಯುವಿ300 ಪ್ಲಸ್ ಮಾದರಿಯು ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹಳೆಯ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ ಎಂಜಿನ್ ಮತ್ತು ಸುಧಾರಿತ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.
ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ವಾಹನಗಳ ಎಂಜಿನ್ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದೆ.
ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.
ಇದರಲ್ಲಿ ಮಹೀಂದ್ರಾ ನಿರ್ಮಾಣದ ಟಿಯುವಿ300 ಪ್ಲಸ್, ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್ಯುವಿ500, ಎಕ್ಸ್ಯುವಿ300 ಮತ್ತು ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಮಹೀಂದ್ರಾ ಹೊಸ ಕಾರುಗಳು ಮುಂದಿನ ನಾಲ್ಕು ತಿಂಗಳಲ್ಲಿ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ. ಬಿಡುಗಡೆಯ ಉದ್ದೇಶಕ್ಕಾಗಿಯೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ತದನಂತರವಷ್ಟೇ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.
ಇನ್ನು ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್ಯುವಿ500, ಎಕ್ಸ್ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.
ಹಾಗೆಯೇ 6 ಏರ್ಬ್ಯಾಗ್ಗಳು(ಟಾಪ್ ಎಂಡ್ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್ಗಳಲ್ಲಿ ಸನ್ರೂಫ್, ರೂಫ್ ರೈಲ್ಸ್, ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.
ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.
ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್ಯುವಿ500, ಎಕ್ಸ್ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.
ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ರೂ. 1.50 ಲಕ್ಷದಿಂದ ರೂ.2.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.
Source:Team-BHP