ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಮಹೀಂದ್ರಾ ಸಂಸ್ಥೆಯು ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಕಾರು ಉತ್ಪನ್ನಗಳಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, 2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದೆ. ಇದರಲ್ಲಿ ನೆಕ್ಸ್ಟ್ ಜನರೇಷನ್ ಕಾರು ಮಾದರಿಗಳು ಸೇರಿದಂತೆ ಕಳೆದ ವರ್ಷ ಬಿಡುಗಡೆಯಾಗಿದ್ದ ಟಿಯುವಿ300 ಪ್ಲಸ್ ಮಾದರಿಯು ಕೂಡಾ ಬಿಎಸ್-6 ಎಂಜಿನ್‌‌ನೊಂದಿಗೆ ಬರುವುದು ಬಹುತೇಕ ಖಚಿತವಾಗಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ನೆಕ್ಸ್ಟ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಎಕ್ಸ್‌ಯುವಿ500, ಸ್ಕಾರ್ಪಿಯೋ ಮತ್ತು ಥಾರ್ ಕಾರುಗಳು ಈಗಾಗಲೇ ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಇದೇ ಮೊದಲ ಬಾರಿಗೆ ಟಿಯುವಿ300 ಪ್ಲಸ್ ಮಾದರಿಯು ಸಹ ವಿಶೇಷ ವಿನ್ಯಾಸ ಗಳೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. 2020ರ ಏಪ್ರಿಲ್ 1 ರ ಒಳಗಾಗಿ ಹೊಸ ಬಿಎಸ್-6 ಎಂಜಿನ್ ಪ್ರೇರಿತ ಟಿಯುವಿ300 ಪ್ಲಸ್ ಮಾದರಿಯು ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹಳೆಯ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ ಎಂಜಿನ್ ಮತ್ತು ಸುಧಾರಿತ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ವಾಹನಗಳ ಎಂಜಿನ್‌ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಇದರಲ್ಲಿ ಮಹೀಂದ್ರಾ ನಿರ್ಮಾಣದ ಟಿಯುವಿ300 ಪ್ಲಸ್, ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಮಹೀಂದ್ರಾ ಹೊಸ ಕಾರುಗಳು ಮುಂದಿನ ನಾಲ್ಕು ತಿಂಗಳಲ್ಲಿ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ. ಬಿಡುಗಡೆಯ ಉದ್ದೇಶಕ್ಕಾಗಿಯೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ತದನಂತರವಷ್ಟೇ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಇನ್ನು ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಹಾಗೆಯೇ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಟಿಯುವಿ300 ಪ್ಲಸ್‌

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ರೂ. 1.50 ಲಕ್ಷದಿಂದ ರೂ.2.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

Source:Team-BHP

Most Read Articles

Kannada
English summary
New Mahindra TUV300 Plus BS-VI Model Spied Testing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X