ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್

ಕಳೆದ ಫೆ.14ರಂದು ಮಹೀಂದ್ರಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ300 ಮಾದರಿಯನ್ನು ಬಿಡುಗಡೆ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಲಭ್ಯವಿರುವ ಹೊಸ ಕಾರುಗಳಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆವೃತ್ತಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದೀಗ ಗ್ರಾಹಕರ ಬೇಡಿಕೆಯೆಂತೆ ಎಎಂಟಿ(ಆಟೋಮ್ಯಾಟಿಕ್) ವರ್ಷನ್ ಮಾದರಿಯನ್ನು ಸಹ ಬಿಡುಗಡೆ ಮಾಡುತ್ತಿರುವುದು ಪಕ್ಕಾ ಆಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್

ಮಹೀಂದ್ರಾ ಸಂಸ್ಥೆಯು ಸದ್ಯ ಎಕ್ಸ್‌ಯುವಿ300 ಮ್ಯಾನುವಲ್ ಆವೃತ್ತಿಗಳ ಮಾರಾಟಕ್ಕೆ ಮಾತ್ರ ಚಾಲನೆ ನೀಡಿದ್ದು, ಅತ್ತ ಎಎಂಟಿ ವರ್ಷನ್ ಬಿಡುಗಡೆಗಾಗಿ ಹೊಸ ಕಾರನ್ನು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. ಹೀಗಾಗಿ ಮುಂದಿನ ಕೆಲವೇ ದಿನಗಳಲ್ಲಿ ಆಟೋಮ್ಯಾಟಿಕ್ ವರ್ಷನ್ ಸಹ ಖರೀದಿಗೆ ಲಭ್ಯವಿರಲಿದ್ದು, ಇದು ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಮತ್ತಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್

ಸದ್ಯ ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಕಾರು ಉತ್ಪಾದನೆಯಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಜನಪ್ರಿಯ ಟಿವೊಲಿ ಕಾರಿನ ಮಾದರಿಯಲ್ಲೇ ದೇಶಿಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಎಕ್ಸ್‌ಯುವಿ300 ಕಾರುನ್ನು ಮರು ನಿರ್ಮಾಣ ಮಾಡಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್

ಸದ್ಯ ಎಕ್ಸ್‌ಯುವಿ300 ಕಾರುಗಳು ಒಟ್ಟು ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ವೆರಿಯೆಂಟ್‌ಗಳನ್ನು ಸಹ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಸಬಹುದಾಗಿದೆ. ಹೀಗಾಗಿ ಕಾರಿನಲ್ಲಿ ನೀಡಲಾಗಿರುವ ಫೀಚರ್ಸ್‌ಗೆ ಅನುಗುಣವಾಗಿ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.7.90 ಲಕ್ಷಕ್ಕೆ ಮತ್ತು ಹೈಎಂಡ್ ಮಾದರಿಯು ರೂ. 10.80 ಲಕ್ಷ ಬೆಲೆ ಪಡೆದುಕೊಂಡಿವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿರಲಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್

ಜೊತೆಗೆ ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್‌ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

MOST READ: ಮುಂದಿನ 2 ವರ್ಷದೊಳಗೆ 6 ಹೊಸ ಎಸ್‌ಯುವಿಗಳನ್ನು ಪರಿಚಯಿಸಲಿದೆ ಹ್ಯುಂಡೈ

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್

ಹಾಗೆಯೇ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಎಎಂಟಿ ವರ್ಷನ್..!

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.

MOST READ: ಟಾಪ್ ಸ್ಪೀಡ್ ಶೋಕಿ- ಯುಟ್ಯೂಬ್‌ನಲ್ಲಿ ಲೈವ್ ಮಾಡಿ ಜೈಲು ಸೇರಿದ ಫೋರ್ಡ್ ಮಸ್ಟಾಂಗ್ ಮಾಲೀಕ..!

ಹೀಗಾಗಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಆಟೋಮ್ಯಾಟಿಕ್ ವರ್ಷನ್ ಕೂಡಾ ಈ ಮೇಲಿನ ಬಹುತೇಕ ತಾಂತ್ರಿಕ ಅಂಶಗಳನ್ನೇ ಹೊಂದಿರಲಿದ್ದು, ಆಟೋ ಮ್ಯಾಟಿಕ್ ವರ್ಷನ್ ಇಷ್ಟಪಡುವ ಗ್ರಾಹಕರ ಖರೀದಿಗೆ ಸಹಕಾರಿಯಾಗಲಿದೆ ಎನ್ನುವುದು ಮಹೀಂದ್ರಾ ಲೆಕ್ಕಾಚಾರ.

Most Read Articles

Kannada
English summary
According to reports, Mahindra XUV300 SUV will get automatic gearbox option in India very soon than expected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X