ಮಾರಾಟದಲ್ಲಿ ಟಾಟಾ ನೆಕ್ಸಾನ್ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ 300
ಮಹೀಂದ್ರಾ ಸಂಸ್ಥೆಯು ಇದೇ ವರ್ಷದ ಫೆಬ್ರುವರಿ 14ರಂದು ತಮ್ಮ ಹೊಸ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿ ಕಾರನ್ನು ಬಿಡುಗಡೆಗೊಳಿಸಿದ್ದು, ಇದೀಗ ಮಾರುಕಟ್ಟೆಯಲ್ಲಿರುವ ತನ್ನ ಎದುರಾಳಿ ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪೈಪೋಟಿ ನೀಡುತ್ತಿದೆ.

ರಶ್‍ಲೇನ್ವರದಿ ಪ್ರಕಾರ ಬಿಡುಗಡೆಗೊಂಡಾಗಿನಿಂದಲೂ ಸುಮಾರು 26000ಕ್ಕು ಅಧಿಕವಾಗಿ ಮಹೀಂದ್ರಾ ಎಕ್ಸ್‌ಯುವಿ 300ಕಾರುಗಳು ಬಿಕ್ಕಿಂಗ್ ಆಗಿದ್ದು, ಏಪ್ರಿಲ್ 2019 ತಿಂಗಳ ಕಾಂಪ್ಯಾಕ್ಟ್ ಎಸ್‍ಯುವಿ ಕಾರುಗಳ ಮಾರಾಟದಲ್ಲಿ ಟಾಟಾ ನೆಕ್ಸಾನ್ ಕಾರನ್ನು ಹಿಂದಕ್ಕಿಟ್ಟು ಎರಡನೆಯ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಮೊದಲನೆಯ ಸ್ಥಾನದಲ್ಲಿ 11, 785 ಬುಕ್ಕಿಂಗ್‍ನೊಂದಿಗೆ ಮಾರುತಿ ಸುಜುಕಿ ಬ್ರೆಝಾ ಇದ್ದರೆ ಇನ್ನು ಮೂರನೆಯ ಸ್ಥಾನದಲ್ಲಿ 3, 976 ಬುಕ್ಕಿಂಗ್‍ನೊಂದಿಗೆ ಟಾಟಾ ನೆಕ್ಸಾನ್ ಇದೆ.

ಸದ್ಯ ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಕಾರು ಉತ್ಪಾದನೆಯಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಜನಪ್ರಿಯ ಟಿವೊಲಿ ಕಾರಿನ ಮಾದರಿಯಲ್ಲೇ ದೇಶಿಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಎಕ್ಸ್‌ಯುವಿ300 ಕಾರುನ್ನು ಮರು ನಿರ್ಮಾಣ ಮಾಡಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಫೀಚರ್ಸ್‌ಗೆ ಅನುಗುಣವಾಗಿ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.90 ಲಕ್ಷಕ್ಕೆ ಮತ್ತು ಹೈಎಂಡ್ ಮಾದರಿಯು ರೂ. 10.80 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತಿ ಕಡಿಮೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

ಹಾಗೆಯೇ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್
ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.

ಈ ಮೂಲಕ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮೂರನೇ ಸ್ಥಾನಕ್ಕೇರಿರುವ ಎಕ್ಸ್‌ಯುವಿ300 ಮಾದರಿಯು ಇಕೋ ಸ್ಪೋರ್ಟ್ ಮತ್ತು ನೆಕ್ಸಾನ್ ಆವೃತ್ತಿಗಳನ್ನು ಹಿಂದಿಕ್ಕಿದ್ದು, ಮಾರುತಿ ಸುಜುಕಿ ಬ್ರೆಝಾ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.


Click it and Unblock the Notifications








