ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಹೊಚ್ಚ ಹೊಸ ಎಕ್ಸ್‌ಯುವಿ300 ಕಾರು ಮುಂದಿನ ತಿಂಗಳು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ಹೊಸ ಕಾರು ಖರೀದಿಗಾಗಿ ರೂ. 20 ಸಾವಿರ ಮುಂಗಡದೊಂದಿಗೆ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಕೂಡಾ ಆರಂಭ ಮಾಡಲಾಗಿದೆ. ಹೀಗಿರುವಾಗ ಇದೀಗ ಮಹಾರಾಷ್ಟಾದ ರಸ್ತೆಗಳಲ್ಲಿ ಮಾರುತಿ ಎಸ್-ಕ್ರಾಸ್ ಕಾರಿನ ಜೊತೆಗೆ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದೆ.

ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ನಮೂನೆಯ ಕಾರು ಉತ್ಪನ್ನಗಳನ್ನು ಅಭಿವೃದ್ಧಿ ಪಡೆಸುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಟಿವೊಲಿ ಕಾರಿನ ಮಾದರಿಯಲ್ಲೇ ಹೊಸ ಎಕ್ಸ್‌ಯುವಿ300 ಕಾರನ್ನು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ನಿರ್ಮಾಣ ಮಾಡಲಾಗಿದೆ.

Video Courtasy: S Max

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಡಿಸೇಲ್ ಮತ್ತು ಪೆಟ್ರೋಲ್ ಎರಡು ಮಾದರಿಯಲ್ಲೂ ಎಕ್ಸ್‌ಯುವಿ300 ಕಾರು ಖರೀದಿಗೆ ಲಭ್ಯವಾಗಲಿದ್ದು, ಡಿಸೇಲ್ ಮಾದರಿಯು 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 121-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿವೆ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಹಾಗೆಯೇ ಪೆಟ್ರೋಲ್ ಮಾದರಿಯು ಸಹ 1.2-ಲೀಟರ್(1,200ಸಿಸಿ) ಎಂಜಿನ್‌ನೊಂದಿಗೆ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಡಿಸೇಲ್ ವರ್ಷನ್ ಕಾರುಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಪೆಟ್ರೋಲ್ ವರ್ಷನ್‌ ಕಾರುಗಳಲ್ಲಿ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಒದಗಿಸಲಿದೆ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಈ ಮೂಲಕ ಪ್ರತಿ ಲೀಟರ್‌ ಪೆಟ್ರೋಲ್‌ಗೆ 17ಕಿ.ಮಿ ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 20ಕಿ.ಮಿ ಮೈಲೇಜ್ ಸಾಮರ್ಥ್ಯವನ್ನು ಹೊಂದಿರುವ ಎಕ್ಸ್‌ಯುವಿ300 ಕಾರುಗಳು, ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಿಕೃತಗೊಂಡಿವೆ ಎನ್ನಲಾಗಿದೆ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಇದಲ್ಲದೇ ಹೊಸ ಕಾರಿನಲ್ಲಿ ಪ್ರಯಾಣಿಕರಿಗೆ ಗರಿಷ್ಠ ಹೈಎಂಡ್ ಮಾದರಿಗಳಲ್ಲಿ ಸುರಕ್ಷತೆಗಾಗಿ 7 ಏರ್‍‍ಬ್ಯಾಗ್‍ಗಳು, ಆಲ್ ವೀಲ್ಹ್ ಡಿಸ್ಕ್ ಬ್ರೇಕ್‍, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್‍ ಮತ್ತು ಸ್ಟ್ಯಾಂಡರ್ಡ್ ಆಗಿ ಎಬಿಎಸ್, ಇಬಿಡಿ, ಐಎಸ್ಒಫಿಕ್ಸ್ ಚೈಲ್ಡ್-ಸೀಟ್ ಮೌಂಟ್ಸ್, 3 ಪಾಯಿಂಟ್ ಸೀಟ್‍ಬೆಲ್ಟ್ಸ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್‍ಪಿ) ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಫೀಚರ್‍‍ಗಳನ್ನು ಎಲ್ಲಾ ವೇರಿಯಂಟ್‍ಗಳಲ್ಲಿ ನೀಡಲಾಗಿದೆ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಜೊತೆಗೆ ಹೊಸ ಕಾರಿನಲ್ಲಿ ಗ್ರಾಹಕರು ನಿರೀಕ್ಷಿಸಬಹುದಾದ ಮತ್ತಷ್ಟು ಹೊಸ ವೈಶಿಷ್ಟ್ಯತೆಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಟೋನ್ ಇಂಟಿರಿಯರ್, ಇನ್ಫೋಟೈನ್ಮೆಂಟ್ ಸಿಸ್ಟಂ, ಎಸಿ ವೆಂಟ್ಸ್ ಮತ್ತು ಸ್ಟೀರಿಂಗ್ ವ್ಹೀಲ್‍ನ ಮೇಲೆ ಸಿಲ್ವರ್ ಆಕ್ಸೆಂಟ್‍‍ಗಳನ್ನು ಸಹ ಅಳವಡಿಸಲಾಗಿದೆ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಡ್ಯುಯಲ್ ಟೋನ್ ಇಂಟಿರಿಯರ್ ಅನ್ನು ಹೊರತುಪಡಿಸಿ ಮಹೀಂದ್ರಾ ಎಕ್ಸ್‌ಯುವಿ300 ಕಾರಿನಲ್ಲಿ ದೊಡ್ಡದಾದ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ನೀಡಲಾಗಿದ್ದು, ಇದು ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಆಯ್ಕೆಯನ್ನು ಪಡೆಯಬಹುದಲ್ಲದೇ ಪಾರ್ಕಿಂಗ್ ಕ್ಯಾಮೆರಾ ಮತ್ತು ಸೆನ್ಸಾರ್‍‍ಗಳನ್ನು ಸಹ ಪಡೆದಿದೆ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನುಳಿದಂತೆ ಎಕ್ಸ್‌ಯುವಿ300 ಕಾರು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಸೆಂಟ್ರಲ್ ಮಲ್ಟಿ ಇನ್ಫಾರ್ಮೇಷನ್ ಡಿಸ್ಪ್ಲೇ ಹೊಂದಿರುವ ಇನ್ಸ್ಟ್ರೂಮೆಂಟ್ ಕ್ಲಸ್ಟರ್, ಸ್ಟಾರ್ಟ್/ಸ್ಟಾಪ್ ಬಟನ್, ಕ್ರೂಸ್ ಕಂಟ್ರೋಲ್, ಸನ್‍‍ರೂಫ್ ಮತ್ತು ಹಿಂಬದಿಯ ಸವಾರರ ಸೀಟ್‍‍ಗಳಿಗೆ ಸೆಂಟ್ರಲ್ ಆರ್ಮ್‍ರೆಸ್ಟ್ ವೈಶಿಷ್ಟ್ಯತೆಗಳನ್ನ ಪಡೆದುಕೊಂಡಿದೆ.

ಮಾರುತಿ ಎಸ್-ಕ್ರಾಸ್ ಕಾರಿನ ಜೊತೆ ರಸ್ತೆಯಲ್ಲಿ ಮಿಂಚಿದ ಮಹೀಂದ್ರಾ ಎಕ್ಸ್‌ಯುವಿ300

ಕಾರಿನ ಬೆಲೆಗಳು(ಅಂದಾಜು)

ಮಾರುಕಟ್ಟೆಯಲ್ಲಿ ಲಭ್ಯವಿರುವ ಕಂಪ್ಯಾಕ್ಟ್ ಎಸ್‌ಯುವಿಗಳಿಂತೂ ತಾಂತ್ರಿಕವಾಗಿ ಬಲಿಷ್ಠವಾಗಿರುವ ಎಕ್ಸ್‌ಯುವಿ300 ಕಾರುಗಳ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷಕ್ಕೆ ಮತ್ತು ಎಂಡ್ ಮಾದರಿಗೆ ರೂ. 13 ಲಕ್ಷ ಬೆಲೆ ನಿಗದಿಯಾಗುವ ಸಾಧ್ಯತೆಗಳಿವೆ. ಹಾಗೆಯೇ ಈ ಕಾರು ಮಾರುಕಟ್ಟೆಯಲ್ಲಿ ಜನಪ್ರಿಯಗೊಂಡಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ಕ್ರೆಟಾ ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

Most Read Articles

Kannada
English summary
Mahindra XUV300 caught on the road, next to a Maruti S-Cross. Read In Kannada
Story first published: Saturday, February 2, 2019, 18:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X