ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಮಾರುಕಟ್ಟೆಯಲ್ಲಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಉಳ್ಳ ವಾಹನಗಳಿಗೆ ಬೇಡಿಕೆಯು ಹೆಚ್ಚುತ್ತಿದೆ ಅಂತಾನೇ ಹೇಳ್ಬೋದು. ಬೆಲೆಯನ್ನು ತುಸು ದುಬಾರಿಯಾದರೂ ಸಹ ಗ್ರಾಹಕರು ವಾಹನ ಚಾಲನೆ ಮಾಡುವಾಗ ಆರಾಮಗಿರಬೇಕು ಎಂದು ಅದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಅಂತ ಕೂಡಾ ಹೇಳ್ಬೋದು. ಈ ನಿಟ್ಟಿನಲ್ಲಿ ವಾಹನ ತಯಾರಕ ಸಂಸ್ಥೆಗಳು ತಾವು ಹೊಸದಾಗಿ ಬಿಡುಗಡೆಗೊಳಿಸಲಿರುವ ಕಾರುಗಳಲ್ಲಿ ಮ್ಯಾನುವಲ್ ಗೇರ್‍‍ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆಯನ್ನು ಸಹ ನೀಡುತ್ತಿದ್ದಾರೆ.

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಆ ಹಲವಾರು ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ನಮ್ಮ ದೇಶಿಯ ವಾಹನ ತಯಾರಕ ಸಂಸ್ಥೆ ಮಹೀಂದ್ರಾ ಕೂಡಾ ತಮ್ಮ ಹಲವಾರು ಕಾರುಗಳಲ್ಲಿ ಎಎಂಟಿ ಗೇರ್‍‍ಬಾಕ್ಸ್ ಆಯ್ಕೆಯನ್ನು ನೀಡಿದ್ದು, ಫೆಬ್ರುವರಿ 14ರಂದು ಬಿಡುಗಡೆ ಮಾಡಿದ ಎಕ್ಸ್‌ಯುವಿ300 ಕಾರಿಗೂ ಸಹ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅಯ್ಕೆಯನ್ನು ನೀಡಬೇಕು ಎಂಬ ಯೋಜನೆಯಲ್ಲಿದೆ. ಹೀಗಿರುವಾಗ ಎಎಂಟಿ ಗೇರ್‍‍ಬಾಕ್ಸ್ ಆಯ್ಕೆಯನ್ನು ಹೊಂದಿರುವ ಎಕ್ಸ್‌ಯುವಿ300 ಡೀಸೆಲ್ ಮಾದರಿಯು ಇದೀಗ ಬಹಿರಂಗಗೊಂಡಿದೆ.

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಬಿಡುಗಡೆಗೊಂಡಾಗ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲಿ ಕೇವಲ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ನೀಡಲಾಗಿದ್ದು, ಇದೀಗ ವರದಿ ಪ್ರಕಾರ ಶೀಘ್ರವೇ ಮಹೀಂದ್ರಾ ಎಕ್ಸ್‌ಯುವಿ300 ಕಾರಿಗೆ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆಯನ್ನು ಸಹ ನೀಡಲಿದೆ ಎನ್ನಲಾಗಿದೆ. ಈ ಕುರಿತಾದ ರಹಸ್ಯ ಚಿತ್ರಗಳು ಬಹಿರಂಗಗೊಂಡಿದ್ದು, ಇನ್ನೇನು ಬಿಡುಗಡೆಗಡೆಗೊಳಿಸಲಿದೆ ಮಹೀಂದ್ರಾ ಸಂಸ್ಥೆ.

ಸಧ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮತ್ತು ಟಾಟಾ ನೆಕ್ಸಾನ್ ಕಾರುಗಳ ಡೀಸೆಲ್ ಎಂಜಿನ್ ಮಾದರಿಗಳಲ್ಲಿ ಈಗಾಗಲೆ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆ ಇರಲಿದ್ದು, ಇದೀಗ ಮಹೀಂದ್ರಾ ಸಂಸ್ಥೆಯು ತಮ್ಮ ಮರಾಜೊ ಎಂಪಿವಿ ಕಾರಿಗೆ ನೀಡಲಾದ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಎಕ್ಸ್‌ಯುವಿ300 ಕಾರಿಗು ಸಹ ನೀಡಲಿದೆ ಎನ್ನಲಾಗುತ್ತಿದೆ.

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಕಾರು ಉತ್ಪಾದನೆಯಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಜನಪ್ರಿಯ ಟಿವೊಲಿ ಕಾರಿನ ಮಾದರಿಯಲ್ಲೇ ದೇಶಿಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಎಕ್ಸ್‌ಯುವಿ300 ಕಾರುನ್ನು ಮರು ನಿರ್ಮಾಣ ಮಾಡಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

MOST READ: ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ ಮಾರಾಟದಲ್ಲಿ ಮಿಂಚುತ್ತಿದೆ ಮಾರುತಿ ಬಲೆನೊ

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್‌ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

MOST READ: ರಾಜ್ಯದೆಲ್ಲೆಡೆ ಎಂಬತ್ತೊಂಬತ್ತು ಸಾವಿರಕ್ಕು ಹೆಚ್ಚಿನ ಡ್ರೈವಿಂಗ್ ಲೈಸೆನ್ಸ್ ರದ್ದು

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಹಾಗೆಯೇ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

MOST READ: ಪೋಷಕರ ವಿವಾಹ ವಾರ್ಷಿಕೋತ್ಸವಕ್ಕೆ ಮರೆಯಾಲಾಗದ ಉಡುಗೊರೆ ನೀಡಿದ ಮಗ

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್ ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.

ಎಎಂಟಿ ಗೇರ್‍‍ಬಾಕ್ಸ್ ಹೊತ್ತು ಬರಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಇದೇನೆ

ಈ ಮೂಲಕ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮೂರನೇ ಸ್ಥಾನಕ್ಕೇರಿರುವ ಎಕ್ಸ್‌ಯುವಿ300 ಮಾದರಿಯು ಇಕೋ ಸ್ಪೋರ್ಟ್ ಮತ್ತು ನೆಕ್ಸಾನ್ ಆವೃತ್ತಿಗಳನ್ನು ಹಿಂದಿಕ್ಕಿದ್ದು, ಮಾರುತಿ ಸುಜುಕಿ ಬ್ರೆಝಾ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Source: Auto Trend TV

Most Read Articles

Kannada
English summary
Mahindra XUV 300 Diesel Spotted With AMT Gearbox. Read In Kannada
Story first published: Friday, May 31, 2019, 17:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X