2020ರ ಒಳಗಾಗಿ ರಸ್ತೆಗಿಳಿಯಲಿವೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು
ಮಹೀಂದ್ರಾ ಸಂಸ್ಥೆಯು ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಸಾಕಷ್ಟು ಮುಂಚೂಣಿ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ನಮೂನೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

ಮಹೀಂದ್ರಾ ಸಂಸ್ಥೆಯು ಕಾರು ಮಾರಾಟದಲ್ಲಿ ಹೊಸ ಮುನ್ನಡೆ ಬರೆಯುತ್ತಿದ್ದು, ಇದಕ್ಕೆ ಪ್ರತಿಯಾಗಿ ಗ್ರಾಹಕರ ಬೇಡಿಕೆಗೆ ತಕ್ಕಂತೆ ವಿವಿಧ ನಮೂನೆ ಹೊಸ ಉತ್ಪನ್ನಗಳನ್ನು ಸಹ ಬಿಡುಗಡೆ ಮಾಡುತ್ತಿದೆ. ಇದರಲ್ಲಿ ಸ್ಯಾಂಗ್‌ಯಾಂಗ್ ಜೊತೆಗೂಡಿ ಅಭಿವೃದ್ಧಿಪಡಿಸಲಾಗಿರುವ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಇದೀಗ ಬಿಡುಗಡೆಗೂ ಮುನ್ನವೇ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

2019ರ ಮಾರ್ಚ್ ಹೊತ್ತಿಗೆ ಬಿಡುಗಡೆಯಾಗಲಿರುವ ಕೆಯುವಿ100 ಕಂಪ್ಯಾಕ್ಟ್ ಎಸ್‌ಯುವಿ ಎಲೆಕ್ಟ್ರಿಕ್ ಮಾದರಿಯಲ್ಲೇ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಟೆವೊಲಿ ಕಾರಿನ ಆಕಾರವನ್ನೇ ಪಡೆದುಕೊಂಡಿರಲಿದೆ.

ಮಹೀಂದ್ರಾ ಮತ್ತು ಸ್ಯಾಂಗ್‌ಯಾಂಗ್ ಸಂಸ್ಥೆಯು ಸದ್ಯ ಹೊಸ ಕಾರಿನ ಹೆಸರನ್ನು ಬಹಿರಂಗ ಮಾಡಿಲ್ಲವಾದರೂ ಹೊಸ ಕಾರಿಗೆ ಎಕ್ಸ್‌ಯುವಿ300 ಎಂದು ಕರೆಯುವ ಸಾಧ್ಯತೆಗಳಿದ್ದು, ಇದು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಸದ್ಯ ಮಹೀಂದ್ರಾ ಸಂಸ್ಥೆಯು ಇ ವೆರಿಟೊ ಸೆಡಾನ್ ಮತ್ತು e2o ಪ್ಲಸ್ ಹ್ಯಾಚ್‌ಬ್ಯಾಕ್ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಭಾರತದಲ್ಲಿ ಮಾರಾಟ ಮಾಡುತ್ತಿದ್ದು, ಮುಂಬರುವ 5 ವರ್ಷಗಳಲ್ಲಿ 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಗೊಳಿಸುವ ಯೋಜನೆಯಲ್ಲಿದೆಯೆಂತೆ.

ಇದರಲ್ಲಿ ಮೊದಲ ಬಾರಿಗೆ ಎಸ್‌ಯುವಿ ಆವೃತ್ತಿಯನ್ನು ಎಲೆಕ್ಟ್ರಿಕ್ ಮಾದರಿಯಾಗಿಸಲು ಯೋಜನೆ ರೂಪಿಸಿರುವ ಮಹೀಂದ್ರಾ ಸಂಸ್ಥೆಯು ಕೆಯುವಿ100 ನಂತರ ಸ್ಯಾಂಗ್‌ಯಾಂಗ್ ಜೊತೆಗಿನ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗಾಗಿ ಆಯ್ದುಕೊಂಡಿದ್ದು, 5 ಸೀಟರ್ ಮಾದರಿಯಲ್ಲಿ ಹೊಸ ಕಾರಿನ ಕ್ಯಾಬಿನ್ ಅಭಿವೃದ್ಧಿ ಮಾಡಿದೆ.

ಬ್ಯಾಟರಿ ವೈಶಿಷ್ಟ್ಯತೆ
380ವಿ ಎಲೆಕ್ಟ್ರಿಕ್ ಬ್ಯಾಟರಿ ಸೌಲಭ್ಯ ಹೊಂದಿರುವ ಎಸ್201 ಕಾರು ಪ್ರತಿ ಚಾರ್ಜಿಂಗ್‌ಗೆ 250 ಕಿಮಿ ಮೈಲೇಜ್ ಹಿಂದಿರುಗಿಸಬಲ್ಲದು ಎನ್ನಲಾಗಿದ್ದು, ಹ್ಯುಂಡೈ ನಿರ್ಮಾಣದ ಕೊನಾ ಎಲೆಕ್ಟ್ರಿಕ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುವ ಗುಣಲಕ್ಷಣಗಳನ್ನು ಹೊಂದಿದೆ.

ಜೊತೆಗೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಡಿಮೆ ಬೆಲೆಯಲ್ಲೂ ಎಸ್201 ಎಲೆಕ್ಟ್ರಿಕ್ ಕಾರುಗಳು ಅಭಿವೃದ್ದಿಯಾಗಲಿದ್ದು, ಇವು ಮೈಲೇಜ್ ಸಾಮರ್ಥ್ಯದಲ್ಲಿ ತುಸು ಕಡಿಮೆ ಉತ್ಪಾದನಾ ಗುಣಪಡೆದಿರುತ್ತವೆ ಎನ್ನಬಹುದು.
MOST READ:ನ್ಯಾನೋ ಬರುವುದಕ್ಕೂ ಮುನ್ನ ಬಂದು ಹೋದ 'ಮೀರಾ' ಕಾರಿನ ಕಥೆ ಗೊತ್ತಾ?

ಕಾರು ಬಿಡುಗಡೆಯ ಅವಧಿ
ಮಹೀಂದ್ರಾ ಸಂಸ್ಥೆಯು 2019ರ ಮಾರ್ಚ್ ಹೊತ್ತಿಗೆ ಕೆಯುವಿ100 ಎಲೆಕ್ಟ್ರಿಕ್ ವರ್ಷನ್ ಬಿಡುಗಡೆಗೊಳಿಸಲು ನಿರ್ಧರಿಸಿದ್ದು, ತದನಂತರವಷ್ಟೇ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರುನ್ನು ಅನಾವರಣಗೊಳಿಸಿ 2019ರ ಅಂತ್ಯಕ್ಕೆ ಇಲ್ಲವೇ 2020ರ ಆರಂಭದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.
MOST READ: ಕೇವಲ 40 ರೂಪಾಯಿ ಆಸೆಗೆ ಬರೋಬ್ಬರಿ 40 ಲಕ್ಷ ಕಳೆದುಕೊಂಡ ಹ್ಯುಂಡೈ ಕಾರು ಚಾಲಕ..!

ಕಾರಿನ ಬೆಲೆಗಳು(ಅಂದಾಜು)
ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲಿ 20 ಲಕ್ಷದಿಂದ 22 ಲಕ್ಷ ಬೆಲೆಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ಅದಕ್ಕಿಂತಲೂ ತುಸು ಕಡಿಮೆ ಮೈಲೇಜ್ ರೇಂಜ್ ಹೊಂದಿರುವ ಮಹೀಂದ್ರಾ ಮತ್ತು ಸ್ಯಾಂಗ್‌ಯಾಂಗ್ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು 16 ಲಕ್ಷದಿಂದ 20 ಲಕ್ಷ ಇರಬಹುದೆಂದು ಅಂದಾಜಿಲಾಗಿದೆ.


Click it and Unblock the Notifications








