ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಕಾರು ಭಾರತದಲ್ಲಿ ಬಿಡುಗಡೆಯಾಗಿದ್ದು, ಕಾರಿನ ಬೆಲೆಗಳಿಂತ ಕಾರಿನಲ್ಲಿ ನೀಡಲಾಗಿರುವ ಅತ್ಯುತ್ತಮ ಸುರಕ್ಷಾ ಸೌಲಭ್ಯಗಳು ಹಾಗೂ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲೇ ವಿಶೇಷ ಎನ್ನಿಸುವ ಹಲವು ಹೊಸ ಫೀಚರ್ಸ್‌ಗಳು ಈ ಕಾರಿನಲ್ಲಿವೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಸದ್ಯ ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಕಾರು ಉತ್ಪಾದನೆಯಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಜನಪ್ರಿಯ ಟಿವೊಲಿ ಕಾರಿನ ಮಾದರಿಯಲ್ಲೇ ದೇಶಿಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಎಕ್ಸ್‌ಯುವಿ300 ಕಾರುನ್ನು ಮರು ನಿರ್ಮಾಣ ಮಾಡಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಎಕ್ಸ್‌ಯುವಿ300 ಕಾರುಗಳು ಒಟ್ಟು ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ವೆರಿಯೆಂಟ್‌ಗಳನ್ನು ಸಹ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಸಬಹುದಾಗಿದೆ. ಹೀಗಾಗಿ ಕಾರಿನಲ್ಲಿ ನೀಡಲಾಗಿರುವ ಫೀಚರ್ಸ್‌ಗೆ ಅನುಗುಣವಾಗಿ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.7.90 ಲಕ್ಷಕ್ಕೆ ಮತ್ತು ಹೈಎಂಡ್ ಮಾದರಿಯು ರೂ. 10.80 ಲಕ್ಷ ಬೆಲೆ ಪಡೆದುಕೊಂಡಿವೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಕಾರಿನ ವೆರಿಯೆಂಟ್‌ಗಳು ಮತ್ತು ಬೆಲೆಗಳು( ಎಕ್ಸ್‌ಶೋರೂಂ ಪ್ರಕಾರ)

ವೆರಿಯೆಂಟ್‌ಗಳು ಪೆಟ್ರೋಲ್ ವರ್ಷನ್

ಡೀಸೆಲ್ ವರ್ಷನ್
ಡಬ್ಲ್ಯು4

ರೂ. 7,90,000

ರೂ. 8,49,000

ಡಬ್ಲ್ಯು6 ರೂ. 8,75,000

ರೂ. 9,30,000

ಡಬ್ಲ್ಯು8 ರೂ. 10,25,000

ರೂ. 10,80,000

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಇದರಲ್ಲಿ ಮತ್ತೊಂದು ಗಮನಿಸಬೇಕಾದ ಅಂಶ ಅಂದ್ರೆ, ಡಬ್ಲ್ಯು8 ವೆರಿಯೆಂಟ್‌ನಲ್ಲಿ ಆಪ್ಷನಲ್ ಎನ್ನುವ ಹೊಸ ಆಯ್ಕೆ ನೀಡಲಾಗಿದ್ದು, ಉಳಿದ ಮಾದರಿಗಳಿಂತ ತುಸು ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಈ ಕಾರಿಗೆ ಹೆಚ್ಚುವರಿಯಾಗಿ ರೂ.1.19 ಲಕ್ಷ ಪಾವತಿಸಬೇಕಾಗುತ್ತೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಡಿಸೈನ್ ಮತ್ತು ಸ್ಟೈಲ್

ಮೊದಲೇ ಹೇಳಿದ ಹಾಗೆ ಎಕ್ಸ್‌ಯುವಿ300 ಕಾರು ಸ್ಯಾಂಗ್‌ಯಾಂಗ್ ನಿರ್ಮಾಣದ ಟಿವೊಲಿ ಆಕಾರದೊಂದಿಗೆ ಮರುನಿರ್ಮಾಣಗೊಂಡಿದ್ದು, ಎಕ್ಸ್‌ಯುವಿ500 ಮಾದರಿಯಲ್ಲಿ ಮುಂಭಾಗದ ಗ್ರಿಲ್ ಮತ್ತು ಲೈಟಿಂಗ್ ಸೌಲಭ್ಯವನ್ನು ಪಡೆದುಕೊಂಡಿರುವುದು ಸ್ಪಷ್ಟವಾಗಿದೆ. ಹೊಸ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ ಮತ್ತು ಫಾಗ್‌ಲ್ಯಾಂಪ್‌ಗೆ ಹೊಂದಿಕೊಂಡತೆ ಎಲ್‌ಇಡಿ ಡಿಆರ್‌ಎಲ್ಎಸ್‌‌ಗಳು ಕಾರಿನ ಮುಂಭಾಗದ ಸ್ಟೈಲ್ ಬದಲಿಸಿದ್ದು, ಕಾರಿನ ಬ್ಯಾನೆಟ್ ರಕ್ಷಣೆಗಾಗಿ ಕೆಳಭಾಗದಲ್ಲಿ ಸಿಲ್ವರ್ ಫೌಕ್ಸ್ ಸ್ಕಿಡ್ ಬಳಕೆ ಮಾಡಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಹಾಗೆಯೇ ಸೈಡ್ ವ್ಯೂವ್ ನೋಡುವುದಾದರೇ, ಕಾರಿನ ವಿನ್ಯಾಸಗಳಿಗೆ ಅನುಗುಣವಾಗಿ ಕ್ರೋಮ್ ರನ್ನಿಂಗ್ ಬಳಕೆ ಮಾಡಿರುವುದು ಸಹ ಗಮನಸೆಳೆಯುವುದಲ್ಲದೆ, ಕಾರಿನ ಸಿ ಪಿಲ್ಲರ್ ಅನ್ನು ಮುಂದುವರಿಸಿರುವುದು ಹೊಸ ಕಾರಿಗೆ ಡ್ಯುಯಲ್ ಬಣ್ಣ ನೀಡಲು ಸಹಕಾರಿಯಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಕಾರಿನ ಹಿಂಭಾಗದಲ್ಲೂ ಸಹ ಉತ್ತಮ ತಾಂತ್ರಿಕ ಸೌಲಭ್ಯವನ್ನು ಒದಗಿಸಿರುವ ಮಹೀಂದ್ರಾ ಸಂಸ್ಥೆಯು ಗಮನಸೆಳೆಯುವಂತಹ ಲೈಟಿಂಗ್ ಸೌಲಭ್ಯಗಳನ್ನು ಜೋಡಣೆ ಮಾಡಿದ್ದು, ಗಮನಸೆಳೆಯುವ ಟೈಲ್‌ಲೈಟ್, ಮಹೀಂದ್ರಾ ಬ್ಯಾಡ್ಜ್ ಜೊತೆ ವೆರಿಯೆಂಟ್ ಬ್ಯಾಡ್ಜ್, ಬೂಟ್ ಲಿಡ್ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ಜೋಡಣೆ ಮಾಡಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಕಾರಿನ ಒಳ ವಿನ್ಯಾಸ

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಈ ಕಾರಿನಲ್ಲಿ ಗ್ರಾಹಕರು ನಿರೀಕ್ಷಿಸಬಹುದಾದ ಹಲವು ಹೊಸ ವೈಶಿಷ್ಟ್ಯತೆಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಟೋನ್ ಬಣ್ಣದಿಂದ ಸಜ್ಜುಗೊಳಿಸಲಾದ ಇಂಟಿರಿಯರ್ ಸೇರಿದಂತೆ ಡ್ಯಾಶ್‍‍ಬೋರ್ಡ್, ಇನ್ಫೋಟೈನ್ಮೆಂಟ್ ಸಿಸ್ಟಂ, ಎಸಿ ವೆಂಟ್ಸ್ ಮತ್ತು ಲೆದರ್ ವ್ಯಾರ್ಪ್ ಸ್ಟೀರಿಂಗ್ ವ್ಹೀಲ್‍ನ ಮೇಲೆ ಸಿಲ್ವರ್ ಆಕ್ಸೆಂಟ್‍‍ಗಳನ್ನು ನೀಡಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಡ್ಯುಯಲ್ ಟೋನ್ ಇಂಟೀರಿಯರ್ ಅನ್ನು ಹೊರತುಪಡಿಸಿ ಮಹೀಂದ್ರಾ ಎಕ್ಸ್‌ಯುವಿ300 ಕಾರಿನಲ್ಲಿ ದೊಡ್ಡದಾದ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ನೀಡಲಾಗಿದ್ದು, ಇದು ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಆಯ್ಕೆಯನ್ನು ಪಡೆಯಬಹುದಾಗಿದೆ. ಇಷ್ಟೆ ಅಲ್ಲದೇ ಹೊಸ ಕಾರಿನಲ್ಲಿ ವಿವಿಧ ಮಾಹಿತಿಗಳನ್ನು ನೀಡಬಲ್ಲ 3.5-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಟ್ರಿಪ್ ಮೀಟರ್, ಟೈರ್ ಡೈರೆಕ್ಷನ್ ಮಾನಿಟರ್‌ರಿಂಗ್ ಸಿಸ್ಟಂ ಅಳವಡಿಸಿರುವುದಲ್ಲದೇ ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍‍ಗಳನ್ನು ಸಹ ಅಳವಡಿಸಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಇದರೊಂದಿಗೆ ಮಹೀಂದ್ರಾ ಎಕ್ಸ್‌ಯುವಿ300 ಕಾರು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಸೆಂಟ್ರಲ್ ಮಲ್ಟಿ ಇನ್ಫಾರ್ಮೇಷನ್ ಡಿಸ್ಪ್ಲೇ ಹೊಂದಿರುವ ಇನ್ಸ್ಟ್ರೂಮೆಂಟ್ ಕ್ಲಸ್ಟರ್, ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಕ್ರೂಸ್ ಕಂಟ್ರೋಲ್ ಇದರಲ್ಲಿದ್ದು, ಪ್ರೀಮಿಯಂ ಸೌಲಭ್ಯಗಳಾದ ಸನ್‍‍ರೂಫ್ ಕೂಡಾ ಬಳಸಲಾಗಿದೆ. ಹಾಗೆಯೇ ಹಿಂಬದಿಯ ಸವಾರರ ಸೀಟ್‍‍ಗಳಿಗೆ ಸೆಂಟ್ರಲ್ ಆರ್ಮ್‍ರೆಸ್ಟ್ ಜೊತೆ ರಿಯರ್ ಎಸಿ ವೆಂಟ್ಸ್‌ಗಳನ್ನು ಸಹ ನೀಡಲಾಗಿದ್ದು, ಮನರಂಜನೆಗಾಗಿ ಹರ್ಮನ್ ಸಿಸ್ಟಂ ಅಳವಡಿಸಿರುವುದು ಯುವ ಗ್ರಾಹಕರನ್ನು ಹೆಚ್ಚಿನ ಮಟ್ಟದಲ್ಲಿ ಸೆಳೆಯಲಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಸುರಕ್ಷಾ ಸೌಲಭ್ಯಗಳು

ಹೊಸ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳನ್ನು ಸಹ ಪ್ರಮುಖ ಆಕರ್ಷಣೆಯಾಗಿದ್ದು, ಅಪೋಲೋ ನಿರ್ಮಾಣದ 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್‌ನೊಂದಿಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮೊದಲ ಬಾರಿಗೆ ನೀಡಲಾಗಿರುತ್ತಿರುವ 7 ಏರ್‌ಬ್ಯಾಗ್ ಸೌಲಭ್ಯ ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಖರೀದಿಗೆ ಲಭ್ಯವಿರುವ ಬಣ್ಣಗಳು

ಹೊಸ ಎಕ್ಸ್‌ಯುವಿ300 ಕಾರುಗಳು ಒಟ್ಟು ಆರು ಬಣ್ಣಗಳಲ್ಲಿ ಲಭ್ಯವಿದ್ದು, ರೆಡ್ ರೆಜ್, ಸನ್ ಬರ್ಸ್ಟ್ ಆರೇಂಜ್, ಪರ್ಲ್ ವೈಟ್, ನಪೊಲಿ ಬ್ಲ್ಯಾಕ್, ಡಿ ಸ್ಯಾಟ್ ಸಿಲ್ವರ್, ಅಕ್ವಾಮರಿಯನ್ ಎನ್ನುವ ಬಣ್ಣಗಳ ಆಯ್ಕೆ ಹೊಂದಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಎಕ್ಸ್‌ಯುವಿ300 ಕಾರಿನ ಉದ್ದಳತೆ(ಎಂಎಂ ಗಳಲ್ಲಿ)

ಉದ್ದ 3,995 ಎಂಎಂ
ಅಗಲ 1,821 ಎಂಎಂ
ಎತ್ತರ 1,617 ಎಂಎಂ
ವೀಲ್ಹ್‌ ಬೆಸ್ 2,600 ಎಂಎಂ
ಬೂಟ್ ಸ್ಪೆಸ್ 265 ಲೀಟರ್
ಫ್ಯೂಲ್ ಟ್ಯಾಂಕ್ ಸಾಮರ್ಥ್ಯ 42 ಲೀಟರ್

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300

ಇನ್ನುಳಿದಂತೆ ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವಿದ್ದು, ಒಟ್ಟಿನಲ್ಲಿ ಕೈಗೆಟುವ ಬೆಲೆಗಳಲ್ಲಿ ಉತ್ತಮ ಮಾದರಿಯ ಕಾರು ಬಿಡುಗಡೆಗೊಳಿಸಿರುವ ಮಹೀಂದ್ರಾ ಸಂಸ್ಥೆಯು ಮಾರುತಿ ಸುಜುಕಿ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
Mahindra XUV 300 Launched In India — Prices Start At Rs 7.90 Lakh. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X