ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಕ್ಸ್‌ಯುವಿ300 ಎಎಂಟಿ ವರ್ಷನ್

ಕಳೆದ 2 ದಿನಗಳ ಹಿಂದಷ್ಟೇ ಮಹೀಂದ್ರಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ300 ಮಾದರಿಯನ್ನು ಬಿಡುಗಡೆ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಲಭ್ಯವಿರುವ ಹೊಸ ಕಾರುಗಳಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆವೃತ್ತಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದೀಗ ಗ್ರಾಹಕರ ಬೇಡಿಕೆಯೆಂತೆ ಎಎಂಟಿ(ಆಟೋಮ್ಯಾಟಿಕ್ ವರ್ಷನ್ ಮಾದರಿಯನ್ನು ಸಹ ಬಿಡುಗಡೆ ಮಾಡುತ್ತಿರುವುದು ಪಕ್ಕಾ ಆಗಿದೆ.

ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಕ್ಸ್‌ಯುವಿ300 ಎಎಂಟಿ ವರ್ಷನ್

ಮಹೀಂದ್ರಾ ಸಂಸ್ಥೆಯು ಸದ್ಯ ಮ್ಯಾನುವಲ್ ಆವೃತ್ತಿಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಅತ್ತ ಎಎಂಟಿ ವರ್ಷನ್ ಬಿಡುಗಡೆಗಾಗಿ ಹೊಸ ಕಾರನ್ನು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. ಹೀಗಾಗಿ ಮುಂದಿನ 2 ತಿಂಗಳ ಅವಧಿಯೊಳಗೆ ಆಟೋಮ್ಯಾಟಿಕ್ ವರ್ಷನ್ ಸಹ ಖರೀದಿಗೆ ಲಭ್ಯವಿರಲಿದ್ದು, ಇದು ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಮತ್ತಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸದ್ಯ ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಕಾರು ಉತ್ಪಾದನೆಯಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಜನಪ್ರಿಯ ಟಿವೊಲಿ ಕಾರಿನ ಮಾದರಿಯಲ್ಲೇ ದೇಶಿಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಎಕ್ಸ್‌ಯುವಿ300 ಕಾರುನ್ನು ಮರು ನಿರ್ಮಾಣ ಮಾಡಿದೆ.

ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಕ್ಸ್‌ಯುವಿ300 ಎಎಂಟಿ ವರ್ಷನ್

ಎಕ್ಸ್‌ಯುವಿ300 ಕಾರುಗಳು ಒಟ್ಟು ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ವೆರಿಯೆಂಟ್‌ಗಳನ್ನು ಸಹ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಸಬಹುದಾಗಿದೆ. ಹೀಗಾಗಿ ಕಾರಿನಲ್ಲಿ ನೀಡಲಾಗಿರುವ ಫೀಚರ್ಸ್‌ಗೆ ಅನುಗುಣವಾಗಿ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.7.90 ಲಕ್ಷಕ್ಕೆ ಮತ್ತು ಹೈಎಂಡ್ ಮಾದರಿಯು ರೂ. 10.80 ಲಕ್ಷ ಬೆಲೆ ಪಡೆದುಕೊಂಡಿವೆ.

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಕ್ಸ್‌ಯುವಿ300 ಎಎಂಟಿ ವರ್ಷನ್

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್‌ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಕ್ಸ್‌ಯುವಿ300 ಎಎಂಟಿ ವರ್ಷನ್

ಹಾಗೆಯೇ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಕ್ಸ್‌ಯುವಿ300 ಎಎಂಟಿ ವರ್ಷನ್

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.

Most Read Articles

Kannada
English summary
Mahindra XUV300 AMT Spied Testing For The First Time — India-Launch Confirmed For 2019. Read in Kannada.
Story first published: Saturday, February 16, 2019, 14:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more